< उत्पत्ति 24 >
1 अब्राहाम बहुत बूढ़े हो गये थे, और याहवेह ने उन्हें सब प्रकार से आशीषित किया था.
ಅಬ್ರಹಾಮನು ವೃದ್ಧನಾಗಿದ್ದನು. ಯೆಹೋವ ದೇವರು ಅಬ್ರಹಾಮನನ್ನು ಎಲ್ಲಾದರಲ್ಲಿಯೂ ಆಶೀರ್ವದಿಸಿದ್ದರು.
2 अब्राहाम ने अपने पुराने सेवक से, जो घर की और पूरे संपत्ति की देखभाल करता था, कहा, “तुम अपना हाथ मेरी जांघ के नीचे रखो.
ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,
3 मैं चाहता हूं कि तुम स्वर्ग एवं पृथ्वी के परमेश्वर याहवेह की शपथ खाओ कि तुम इन कनानियों की पुत्रियों में से, जिनके बीच हम रह रहे हैं, मेरे बेटे की शादी नहीं कराओगे,
ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.
4 परंतु तुम मेरे देश में मेरे रिश्तेदारों में से मेरे बेटे यित्सहाक के लिए पत्नी लाओगे.”
ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.
5 उस सेवक ने अब्राहाम से पूछा, “उस स्थिति में मैं क्या करूं, जब वह स्त्री इस देश में आना ही न चाहे; क्या मैं आपके पुत्र को उस देश में ले जाऊं, जहां से आप आए हैं?”
ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು.
6 इस पर अब्राहाम ने कहा, “तुम मेरे पुत्र को वहां कभी नहीं ले जाना.
ಅಬ್ರಹಾಮನು ಅವನಿಗೆ, “ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು,
7 याहवेह, जो स्वर्ग के परमेश्वर हैं, जो मुझे मेरे पिता के परिवार और मेरी जन्मभूमि से लाये हैं और जिन्होंने शपथ खाकर मुझसे यह वायदा किया, ‘यह देश मैं तुम्हारे वंश को दूंगा’—वे ही स्वर्गदूत को तुम्हारे आगे-आगे भेजेंगे और तुम मेरे पुत्र के लिए वहां से एक पत्नी लेकर आओगे.
ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.
8 अगर कन्या तुम्हारे साथ आने के लिए मना करे, तब तुम मेरी इस शपथ से मुक्त हो जाओगे. लेकिन ध्यान रखना कि तुम मेरे पुत्र को वापस वहां न ले जाना.”
ಆದರೆ ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದಿದ್ದರೆ, ನನಗೆ ಮಾಡಿದ ಆ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಆದರೆ ನನ್ನ ಮಗನನ್ನು ಅಲ್ಲಿಗೆ ಮಾತ್ರ ತಿರುಗಿ ಕರೆದುಕೊಂಡು ಹೋಗಬಾರದು,” ಎಂದನು.
9 इसलिये उस सेवक ने अपने स्वामी अब्राहाम की जांघ के नीचे अपना हाथ रखा और इस बारे में शपथ खाकर अब्राहाम से वायदा किया.
ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು, ಆ ವಿಷಯ ಬಗ್ಗೆ ಅವನಿಗೆ ಪ್ರಮಾಣ ಮಾಡಿದನು.
10 तब उस सेवक ने अपने स्वामी के ऊंट के झुंड में से दस ऊंटों को लिया और उन पर अपने स्वामी की ओर से विभिन्न उपहार लादा और नाहोर के गृहनगर उत्तर-पश्चिम मेसोपोतामिया की ओर प्रस्थान किया.
ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.
11 नगर के बाहर पहुंचकर उसने ऊंटों को कुएं के पास बैठा दिया; यह शाम का समय था. इसी समय स्त्रियां पानी भरने बाहर आया करती थीं.
ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.
12 तब सेवक ने प्रार्थना की, “याहवेह, मेरे स्वामी अब्राहाम के परमेश्वर, मेरे काम को सफल करें और मेरे स्वामी अब्राहाम पर दया करें.
ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.
13 आप देख रहे हैं कि मैं इस पानी के सोते के निकट खड़ा हूं, और इस नगरवासियों की कन्याएं पानी भरने के लिए निकलकर आ रही हैं.
ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ. ಊರಿನ ಜನರ ಪುತ್ರಿಯರು ನೀರು ಸೇದುವುದಕ್ಕೆ ಹೊರಗೆ ಬರುತ್ತಾರೆ.
14 आप कुछ ऐसा कीजिए कि जिस कन्या से मैं यह कहूं, ‘अपना घड़ा झुकाकर कृपया मुझे पानी पिला दे,’ और वह कन्या कहे, ‘आप पानी पी लीजिए, और फिर मैं आपके ऊंटों को भी पानी पिला दूंगी’—यह वही कन्या हो जिसे आपने अपने सेवक यित्सहाक के लिए चुना है. इसके द्वारा मुझे यह विश्वास हो जाएगा कि आपने मेरे स्वामी पर अपनी करुणा दिखाई है.”
ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.
15 इसके पूर्व कि उसकी प्रार्थना खत्म होती, रेबेकाह नगर के बाहर अपने कंधे पर घड़ा लेकर पानी भरने आई. वह मिलकाह के पुत्र बेथुएल की पुत्री थी और मिलकाह अब्राहाम के भाई नाहोर की पत्नी थी.
ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.
16 रेबेकाह बहुत सुंदर थी, कुंवारी थी; अब तक किसी पुरुष से उसका संसर्ग नहीं हुआ था. वह नीचे सोते पर गई, अपना घड़ा पानी से भरा और फिर ऊपर आ गई.
ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು.
17 सेवक दौड़कर उसके निकट आया और उससे कहा, “कृपया अपने घड़े से मुझे थोड़ा पानी पिला दो.”
ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು.
18 रेबेकाह ने कहा, “हे मेरे प्रभु लीजिए, पीजिये” और उसने तुरंत घड़े को नीचे करके उसे पानी पिलाया.
ಅದಕ್ಕವಳು, “ನನ್ನ ಒಡೆಯನೇ, ಕುಡಿ,” ಎಂದು ಹೇಳಿ, ತ್ವರೆಯಾಗಿ ತನ್ನ ಕೊಡವನ್ನು ಕೈಯಿಂದ ಇಳಿಸಿ, ಅವನಿಗೆ ಕುಡಿಯಲು ಕೊಟ್ಟಳು.
19 जब वह सेवक को पानी पिला चुकी, तब रेबेकाह ने उससे कहा, “मैं आपके ऊंटों के लिए भी पानी लेकर आती हूं, जब तक वे पूरे तृप्त न हो जाएं.”
ಅವನಿಗೆ ಕುಡಿಯುವುದಕ್ಕೆ ಕೊಟ್ಟನಂತರ ಆಕೆಯು, “ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ಸೇದುತ್ತೇನೆ,” ಎಂದು ಹೇಳಿದಳು.
20 उसने बिना देर किए घड़े का पानी हौदे में उंडेलकर वापस सोते पर और पानी भरने गई, और उसके सारे ऊंटों के लिये पर्याप्त पानी ले आई.
ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.
21 जब यह सब हो रहा था, बिना एक शब्द कहे, उस सेवक ध्यान से रेबेकाह को देखकर सोच रहा था कि याहवेह ने उसकी यात्रा को सफल किया है या नहीं.
ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.
22 जब ऊंटों ने पानी पी लिया, तब सेवक ने आधा शेकेल सोने की एक नथ और दस शेकेल सोने के दो कंगन निकाला.
ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.
23 और रेबेकाह को देकर उससे पूछा, “तुम किसकी बेटी हो? कृपया मुझे बताओ, क्या तुम्हारे पिता के घर में इस रात ठहरने के लिए जगह है?”
ಅನಂತರ, “ನೀನು ಯಾರ ಮಗಳು? ನನಗೆ ಹೇಳು. ನಿನ್ನ ತಂದೆಯ ಮನೆಯಲ್ಲಿ ಒಂದು ರಾತ್ರಿ ಕಳೆಯುವುದಕ್ಕೆ ನಮಗೆ ಸ್ಥಳವಿದೆಯೋ?” ಕೇಳಿದನು.
24 रेबेकाह ने उत्तर दिया, “मैं नाहोर तथा मिलकाह के पुत्र बेथुएल की बेटी हूं.”
ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು.
25 और उसने यह भी कहा, “हमारे यहां घास और चारा बहुत है, और रात में ठहरने के लिये जगह भी है.”
ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ, ಮೇವೂ ನಮ್ಮಲ್ಲಿ ಸಾಕಷ್ಟು ಇವೆ, ನೀವು ಒಂದು ರಾತ್ರಿ ಕಳೆಯುವುದಕ್ಕೆ ಸ್ಥಳವಿದೆ,” ಎಂದು ಅವನಿಗೆ ಹೇಳಿದಳು.
26 तब उस सेवक ने झुककर और यह कहकर याहवेह की आराधना की,
ಆಗ ಆ ಮನುಷ್ಯನು ತಲೆಬಾಗಿ ಯೆಹೋವ ದೇವರಿಗೆ ಅಡ್ಡಬಿದ್ದು ಆರಾಧಿಸಿದನು.
27 “धन्य हैं याहवेह, मेरे स्वामी अब्राहाम के परमेश्वर, जिन्होंने मेरे स्वामी के प्रति अपने प्रेम और करुणा को नहीं हटाया. याहवेह मुझे सही जगह पर लाये जो मेरे स्वामी के रिश्तेदारों का ही घर है.”
ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.
28 वह कन्या दौड़कर अपने घर गई और अपनी माता के घर के लोगों को सब बातें बताई.
ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿದ್ದವರಿಗೆ ತಿಳಿಸಿದಳು.
29 रेबेकाह के भाई लाबान दौड़कर कुएं के पास गए जहां सेवक था.
ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.
30 जब उसने नथ और अपनी बहन के हाथों में कंगन देखा और जो बात सेवक ने कही थी, उसे सुनी, तब वह उस सेवक के पास गया, और देखा कि वह सेवक सोते के निकट ऊंटों के बाजू में खड़ा है.
ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
31 लाबान ने सेवक से कहा, “हे याहवेह के आशीषित जन, मेरे साथ चलिए! आप यहां बाहर क्यों खड़े हैं? मैंने घर को, और ऊंटों के ठहरने के लिये भी जगह तैयार की है.”
ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.
32 वह सेवक लाबान के साथ घर आया और ऊंटों पर से सामान उतारा गया. ऊंटों के लिये पैंरा और चारा लाया गया. सेवक तथा उसके साथ के लोगों के लिये पैर धोने हेतु पानी दिया गया.
ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು.
33 तब सेवक को खाना दिया गया, पर उसने कहा, “मैं तब तक भोजन न करूंगा, जब तक कि मैं अपने आने का प्रयोजन न बता दूं.” लाबान ने कहा, “ठीक है, बता दें.”
ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವುದಿಲ್ಲ,” ಎಂದನು. ಅದಕ್ಕೆ ಲಾಬಾನನು, “ಹೇಳು,” ಎಂದನು.
34 तब उसने कहा, “मैं अब्राहाम का सेवक हूं.
ಅವನು, “ನಾನು ಅಬ್ರಹಾಮನ ಸೇವಕನು.
35 याहवेह ने मेरे स्वामी को बहुत आशीष दी हैं, जिससे वे धनवान हो गए हैं. याहवेह ने उन्हें बहुत भेड़-बकरी और पशु, सोना और चांदी, सेवक और सेविकाएं तथा ऊंट और गधे दिये हैं.
ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ.
36 मेरे स्वामी की पत्नी साराह को वृद्धावस्था में एक बेटा पैदा हुआ, और अब्राहाम ने उसे अपना सब कुछ दे दिया है.
ಇದಲ್ಲದೆ ನನ್ನ ಯಜಮಾನನ ಹೆಂಡತಿ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
37 और मेरे स्वामी ने मुझे शपथ दिलाकर कहा, ‘तुम मेरे पुत्र की पत्नी बनने के लिए कनानियों की किसी बेटी को, जिनके बीच मैं रहता हूं, न लाना,
ನನ್ನ ಯಜಮಾನನು, ‘ನಾನು ಯಾರ ದೇಶದಲ್ಲಿ ವಾಸಮಾಡುತ್ತೇನೋ, ಆ ಕಾನಾನ್ಯರ ಪುತ್ರಿಯರಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಡ.
38 पर तुम मेरे पिता के परिवार, मेरे अपने वंश में जाना, और मेरे पुत्र के लिए एक पत्नी लाना.’
ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.
39 “तब मैंने अपने स्वामी से पूछा, ‘यदि वह युवती मेरे साथ आना नहीं चाहेगी, तब क्या?’
“ನಾನು ನನ್ನ ಯಜಮಾನನಿಗೆ, ‘ಒಂದು ವೇಳೆ ಆ ಸ್ತ್ರೀ ನನ್ನನ್ನು ಹಿಂಬಾಲಿಸದೆ ಹೋದಾಳು,’ ಹೇಳಿದೆ.
40 “मेरे स्वामी ने कहा, ‘याहवेह, जिनके सामने मैं ईमानदारी से चलता आया हूं, वे अपने स्वर्गदूत को तुम्हारे साथ भेजेंगे और तुम्हारी यात्रा को सफल करेंगे, ताकि तुम मेरे पुत्र के लिए मेरे अपने वंश और मेरे पिता के परिवार से एक पत्नी ला सको.
“ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.
41 तुम मेरे इस शपथ से तब ही छूट पाओगे, जब तुम मेरे वंश के लोगों के पास जाओगे, और यदि वे उस कन्या को तुम्हारे साथ भेजने के लिए मना करें—तब तुम मेरे शपथ से छूट जाओगे.’
ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’” ಎಂದನು.
42 “आज जब मैं कुएं के पास पहुंचा, तो मैंने यह प्रार्थना की, ‘याहवेह, मेरे स्वामी अब्राहाम के परमेश्वर, मैं जिस उद्देश्य से यहां आया हूं, वह काम पूरा हो जाये.
“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,
43 देखिये, मैं इस कुएं के किनारे खड़ा हूं. यदि कोई कन्या निकलकर पानी भरने के लिये आती है और मैं उससे कहता हूं, “कृपा करके मुझे अपने घड़े से थोड़ा पानी पिला दे,”
ಇಗೋ, ನಾನು ಈಗ ಬಾವಿಯ ಬಳಿಯಲ್ಲಿ ನಿಂತಿದ್ದೇನೆ. ಯಾವ ಹುಡುಗಿ ನೀರು ಸೇದುವುದಕ್ಕೆ ಹೊರಗೆ ಬರುತ್ತಾಳೋ, ನಾನು ಆಕೆಗೆ, “ನಿನ್ನ ಕೊಡದೊಳಗಿಂದ ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು,” ಎಂದು ಕೇಳಿದಾಗ,
44 और यदि वह मुझसे कहती है, “पीजिये, और मैं आपके ऊंटों के लिये भी पानी लेकर आती हूं,” तो वह वही कन्या हो, जिसे याहवेह ने मेरे मालिक के बेटे के लिये चुना है.’
ಆಕೆಯು ನನಗೆ, “ನೀನೂ ಕುಡಿ, ನಿನ್ನ ಒಂಟೆಗಳಿಗೂ ಸೇದಿ ಹಾಕುತ್ತೇನೆ,” ಎಂದು ನನಗೆ ಹೇಳಿದರೆ, ಆಕೆಯೇ ಯೆಹೋವ ದೇವರಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾಗಿರಲಿ,’ ಎಂದುಕೊಂಡೆನು.
45 “इसके पहले कि मैं अपने मन में यह प्रार्थना खत्म करता, रेबेकाह अपने कंधे पर घड़ा लिये निकलकर आई. वह नीचे सोते के पास जाकर पानी भरने लगी, और मैंने उससे कहा, ‘कृपया मुझे थोड़ा पानी पिला दो.’
“ನಾನು ನನ್ನ ಹೃದಯದಲ್ಲಿ ಹಾಗೆ ಅಂದುಕೊಂಡು ಮುಗಿಸುವುದರೊಳಗಾಗಿ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಹೊರಗೆ ಬಂದಳು. ಆಕೆಯು ಬಾವಿಯಿಂದ ನೀರನ್ನು ಸೇದಿದಳು. ಆಗ ನಾನು, ‘ನನಗೆ ಕುಡಿಯುವುದಕ್ಕೆ ಕೊಡು,’ ಎಂದು ಆಕೆಯನ್ನು ಕೇಳಿದೆನು.
46 “तब उसने तुरंत अपने कंधे में से घड़े को झुकाकर कहा, ‘पी लीजिये, और फिर मैं आपके ऊंटों को भी पानी पिला दूंगी.’ तब मैंने पानी पिया, और उसने ऊंटों को भी पानी पिलाया.
“ಅದಕ್ಕೆ ಆಕೆಯು ತ್ವರೆಪಟ್ಟು, ತನ್ನ ಹೆಗಲಿನ ಮೇಲಿನಿಂದ ಕೊಡವನ್ನು ಇಳಿಸಿ, ‘ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ಆಗ ನಾನು ಕುಡಿದೆನು, ಆಕೆಯು ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
47 “तब मैंने उससे पूछा, ‘तुम किसकी बेटी हो?’ “उसने कहा, ‘मैं बेथुएल की बेटी हूं, जो नाहोर तथा मिलकाह के पुत्र है.’ “तब मैंने उसके नाक में नथ तथा उसके हाथों में कंगन पहना दिए,
“ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು,
48 और मैंने झुककर याहवेह की आराधना की. मैंने याहवेह, अपने मालिक अब्राहाम के परमेश्वर की महिमा की, जिन्होंने मुझे सही मार्ग में अगुवाई की, ताकि मैं अपने मालिक के भाई की नतनिन को अपने मालिक के बेटे के लिये पत्नी के रूप में ले जा सकूं.
ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ.
49 इसलिये अब, यदि आप मेरे मालिक के प्रति दया और सच्चाई दिखाना चाहते हैं, तो मुझे बताईये; और यदि नहीं, तो वह भी बताईये, कि किस रास्ते पर मुड़ना है.”
ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು.
50 यह सब सुनकर लाबान एवं बेथुएल ने कहा, “यह सब याहवेह की ओर से हुआ है; हम तुमसे अच्छा या बुरा कुछ नहीं कह सकते.
ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು
51 रेबेकाह तुम्हारे सामने है; इसे अपने साथ ले जाओ, ताकि वह तुम्हारे स्वामी के पुत्र की पत्नी हो जाए, जैसा कि याहवेह ने निर्देश दिया है.”
ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು.
52 उनकी बातों को सुनकर अब्राहाम के सेवक ने भूमि पर झुककर याहवेह को दंडवत किया.
ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು.
53 तब सेवक ने सोने और चांदी के गहने तथा वस्त्र निकालकर रेबेकाह को दिए; उसने रेबेकाह के भाई और उसकी माता को भी बहुमूल्य वस्तुएं दी.
ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.
54 फिर उसने तथा उसके साथ के लोगों ने खाया पिया और वहां रात बिताई. अगले दिन सुबह जब वे सोकर उठे तो सेवक ने कहा, “मुझे अपने स्वामी के पास वापस जाने के लिए विदा कीजिये.”
ತರುವಾಯ ಅವನೂ, ಅವನ ಸಂಗಡ ಇದ್ದ ಜನರೂ ಊಟಮಾಡಿ, ಕುಡಿದು, ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದ ಮೇಲೆ ಅವನು, “ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ,” ಎಂದನು.
55 पर रेबेकाह के भाई और उसकी मां ने कहा, “कन्या को हमारे साथ कुछ दिन अर्थात् कम से कम दस दिन रहने दो; तब उसे ले जाना.”
ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು.
56 पर सेवक ने उनसे कहा, “मुझे मत रोकिए; क्योंकि याहवेह ने मेरी इस यात्रा को सफल किया है. मुझे अपने स्वामी के पास लौट जाने के लिये विदा कीजिए.”
ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.
57 तब उन्होंने कहा, “हम रेबेकाह को बुलाकर इसके बारे में उससे पूछते हैं.”
ಆಗ ಅವರು, “ನಾವು ಹುಡುಗಿಯನ್ನು ಕರೆದು, ಆಕೆಯ ಅಭಿಪ್ರಾಯವನ್ನು ವಿಚಾರಿಸೋಣ,” ಎಂದರು.
58 तब उन्होंने रेबेकाह को बुलाकर उससे पूछा, “क्या तुम इस व्यक्ति के साथ जाओगी?” उसने कहा, “हां, मैं जाऊंगी.”
ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು.
59 इसलिये उन्होंने अपनी बहन रेबेकाह को उसकी परिचारिका और अब्राहाम के सेवक और उसके लोगों के साथ विदा किया.
ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಸಾಗಕಳುಹಿಸಿದರು.
60 और उन्होंने रेबेकाह को आशीर्वाद देते हुए कहा, “हे हमारी बहन, तुम्हारा वंश हजारों हजार की संख्या में बढ़े; तुम्हारा वंश अपने शत्रुओं के नगर पर अधिकार करने पाये.”
ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”
61 तब रेबेकाह और उसकी परिचारिकाएं तैयार हुईं और ऊंटों पर चढ़कर उस व्यक्ति के साथ गईं और वह सेवक रेबेकाह को लेकर रवाना हो गया.
ಆಗ ರೆಬೆಕ್ಕಳೂ, ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ, ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
62 यित्सहाक बएर-लहाई-रोई से आकर अब नेगेव में निवास कर रहे थे.
ಇಸಾಕನು ಬೇರ್ ಲಹೈರೋಯಿ ಬಾವಿಗೆ ಹೋಗಿ ಬಂದನು. ಅವನು ದೇಶದ ನೆಗೆವನಲ್ಲಿ ವಾಸವಾಗಿದ್ದನು.
63 एक शाम जब वे चिंतन करने मैदान में गये थे, तब उन्होंने ऊंटों को आते हुए देखा.
ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು.
64 रेबेकाह ने भी आंख उठाकर यित्सहाक को देखा और वह अपने ऊंट पर से नीचे उतरी
ರೆಬೆಕ್ಕಳು ಸಹ ಕಣ್ಣೆತ್ತಿ ಇಸಾಕನನ್ನು ನೋಡಿ, ಒಂಟೆಗಳಿಂದ ಇಳಿದಳು.
65 और सेवक से पूछा, “मैदान में वह कौन व्यक्ति है, जो हमसे मिलने आ रहे हैं?” सेवक ने उत्तर दिया, “वे मेरे स्वामी हैं.” यह सुनकर रेबेकाह ने अपना घूंघट लिया और अपने आपको ढांप लिया.
ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.
66 तब सेवक ने यित्सहाक को वे सब बातें बताई, जो उसने किया था.
ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.
67 तब यित्सहाक रेबेकाह को अपनी मां साराह के तंबू में ले आया, और उसने रेबेकाह से शादी की. वह उसकी पत्नी हो गई, और उसने उससे प्रेम किया; इस प्रकार यित्सहाक को उसकी माता की मृत्यु के बाद सांत्वना मिली.
ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು.