< उत्पत्ति 6 >
1 फिर जब पृथ्वी पर मनुष्यों की संख्या बढ़ने लगी और उनके पुत्रियां पैदा हुई,
೧ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು
2 तब परमेश्वर के पुत्रों ने मनुष्यों के पुत्रियों को देखा कि वे सुंदर हैं. और उन्होंने उन्हें अपनी इच्छा अनुसार अपनी-अपनी पत्नियां बना लिया.
೨ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
3 यह देखकर याहवेह ने निर्णय लिया, “मेरा आत्मा मनुष्य से हमेशा बहस करता न रहेगा क्योंकि मनुष्य केवल मांस मात्र है, वह 120 वर्ष ही जीवित रहेगा.”
೩ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
4 उन दिनों में पृथ्वी पर दानव रहते थे. जब परमेश्वर के पुत्रों और मनुष्यों की पुत्रियों के संतान हुए वे बहुत बलवान और शूरवीर थे.
೪ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
5 जब याहवेह ने मनुष्यों को देखा कि वे हमेशा बुराई ही करते हैं, कि उन्होंने जो कुछ भी सोचा था या कल्पना की थी वह लगातार और पूरी तरह से बुराई थी.
೫ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
6 तब याहवेह पृथ्वी पर आदम को बनाकर पछताए और मन में अति दुखित हुए.
೬ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.
7 और याहवेह ने सोचा, “मैं पृथ्वी पर से मनुष्य को मिटा दूंगा—हर एक मनुष्य, पशु, रेंगते जंतु तथा आकाश के पक्षी, जिनको बनाकर मैं पछताता हूं.”
೭ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
8 लेकिन नोहा पर याहवेह का अनुग्रह था.
೮ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.
9 नोहा और उनके परिवार का अभिलेख इस प्रकार है: नोहा एक धर्मी और निर्दोष व्यक्ति थे. वे परमेश्वर के साथ साथ चलते थे.
೯ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
10 उनके तीन पुत्र थे शेम, हाम तथा याफेत.
೧೦ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.
11 परमेश्वर ने देखा कि पृथ्वी पर बहुत बुराई और उपद्रव बढ़ गया है.
೧೧ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.
12 परमेश्वर ने पृथ्वी को देखा कि वह भ्रष्ट हो गई है; क्योंकि समस्त मानवों ने पृथ्वी पर अपना आचरण भ्रष्ट कर लिया था.
೧೨ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
13 इसलिये परमेश्वर ने नोहा से कहा, “मैं पूरी पृथ्वी के लोग और जो कुछ भी उसमें है सबको नाश कर दूंगा, क्योंकि उनके कारण पृथ्वी उपद्रव से भर गई है.
೧೩ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
14 इसलिये नोहा से याहवेह ने कहा कि तुम अपने लिए गोपेर पेड़ की लकड़ी का एक बड़ा जहाज़ बनाना; जहाज़ में कई अलग-अलग भाग बनाना, और भीतर बाहर उस पर राल लगाना.
೧೪ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
15 जहाज़ की लंबाई एक सौ पैंतीस मीटर, चौड़ाई तेईस मीटर तथा ऊंचाई चौदह मीटर रखना.
೧೫ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
16 इसके लिए एक छत बनाना. जहाज़ में एक खिड़की बनाना, जो ऊपर की ओर छत से आधा मीटर नीचे होगी, जहाज़ के एक तरफ दरवाजा रखना. जहाज़ में पहली, दूसरी तथा तीसरी मंजिलें बनाना.
೧೬ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
17 क्योंकि मैं पृथ्वी को जलप्रलय से नाश कर दूंगा और कोई न बचेगा; सबको जिनमें जीवन की आत्मा है, आकाश के नीचे से मैं नाश करनेवाला हूं.
೧೭ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
18 लेकिन मैं तुम्हारे साथ अपनी वाचा बांधूंगा—जहाज़ में तुम, तुम्हारे पुत्र, तुम्हारी पत्नी तथा तुम्हारी बहुओं सहित प्रवेश करना.
೧೮“ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
19 और प्रत्येक जीवित प्राणी के दो-दो अर्थात् नर एवं मादा को जहाज़ में ले जाना, ताकि वे तुम्हारे साथ जीवित रह सकें.
೧೯ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
20 पक्षी भी अपनी-अपनी जाति के, पशु अपनी-अपनी जाति के, भूमि पर रेंगनेवाले जंतु अपनी-अपनी जाति के सभी जातियों के जोड़े जहाज़ में रखना, ताकि वे जीवित रह सकें.
೨೦ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
21 और खाने के लिए सब प्रकार का भोजन रखना, जो सबके लिए होगा.”
೨೧ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
22 नोहा ने वैसा ही किया, जैसा परमेश्वर ने उनसे कहा.
೨೨ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.