< यिर्मयाह 49 >
1 अम्मोन वंशजों के संबंध में: यह याहवेह का संदेश है: “क्या इस्राएल के पुत्र नहीं हैं? अथवा उसके कोई उत्तराधिकारी ही नहीं हैं? तब क्या हुआ कि अम्मोनी देवता मोलेक ने गाद पर अधिकार कर लिया है? तथा उसकी प्रजा इसके नगरों में जा बसी है?
೧ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2 इसलिये यह देखना कि ऐसे दिन आ रहे हैं, कि मैं अम्मोन वंशजों के रब्बाह के विरुद्ध नरसिंगे का आवाज उत्पन्न करूंगा; तब यह एक निर्जन ढेर बनकर रह जाएगा, उसके आस-पास के गांवों को भस्म कर दिया जाएगा. तब इस्राएल उन्हें अपने अधीन कर लेगा, जिन्होंने उसे अधीन किया हुआ था,” यह याहवेह की वाणी है.
೨ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
3 “हेशबोन, विलाप करो, क्योंकि अय नगर नष्ट हो चुका है! रब्बाह की पुत्रियो, विलाप करो! टाट बांधकर विलाप करो; विस्मित हो इधर-उधर शहरपनाह के भीतर दौड़ती रहो, क्योंकि मोलेक बंधुआई में चला जाएगा, और उसके साथ होंगे उसके पुरोहित तथा अधिकारी.
೩“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4 तुम अपनी घाटियों के विषय में कितना अहंकार कर रही हो, भटकने वाली पुत्री, तुम्हारी घाटी बंद हुई जा रही है. अपनी संपदा का भरोसा करके तुम गर्व करती रही हो, ‘कौन कर सकता है मेरा सामना?’
೪‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
5 यह देख लेना, मैं तुम पर आतंक लाने पर हूं यह आतंक तुम्हें चारों ओर से घेर लेगा,” यह सेनाओं के प्रभु याहवेह की वाणी है. मैं तुम्हारे चारों ओर के लोगों से तुम पर आतंक लाऊंगा, हर एक भागकर बिखर जाएगा, शरणार्थियों के एकत्रण के लिए कोई शेष न रहेगा.
೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6 “किंतु तत्पश्चात मैं अम्मोन वंशजों की समृद्धि पुनःस्थापित कर दूंगा,” यह याहवेह की वाणी है.
೬ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7 एदोम के विषय में: सेनाओं के याहवेह की वाणी यह है: “क्या तेमान में अब बुद्धिमत्ता रह ही नहीं गई है? क्या बुद्धिमान उत्तम परामर्श रहित हो गए हैं? क्या उनकी बुद्धिमत्ता का क्षय हो चुका है?
೭ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
8 देदान वासियों, पीछे मुड़कर भाग जाओ और गहरी गुफाओं में जा छिपो, क्योंकि मैं उस पर एसाव का संकट डालने पर हूं उस समय मैं उसे दंड दूंगा.
೮ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9 यदि द्राक्षा तोड़नेवाले तुम्हारे निकट आएं, क्या वे अंगूर न छोड़ेंगे? यदि चोर रात्रि में आएं, क्या वे उतना ही विनाश न करेंगे जितना उनके लिए पर्याप्त होगा?
೯ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10 किंतु मैंने तो एसाव को विवस्त्र कर दिया है; उसके छिपने के स्थान मैंने प्रकट कर दिए हैं, अब वह स्वयं को छिपा न सकेगा. तथा उसके पड़ोसियों के साथ उसके संबंधियों, तथा उसकी संतान भी नष्ट हो गई हैं, अब वह भी न रहा.
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11 ‘अपने पितृहीनों को यहीं छोड़ दो; मैं उन्हें जीवित रखूंगा. तुम्हारी विधवाएं मुझ पर भरोसा कर सकती हैं.’”
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12 क्योंकि याहवेह की वाणी यह है: “यह देखना, जिन्हें उस प्याले से पीने का दंड नहीं दिया गया था, निश्चयतः उससे पिएंगे और क्या तुम वह हो, जिसे पूर्णतः सहायकमुक्त छोड़ दिया जाएगा? नहीं तुम्हें सहायकमुक्त नहीं छोड़ा जाएगा, किंतु तुम निश्चयतः उस प्याले में से पियोगे.
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13 क्योंकि मैंने स्वयं अपनी ही शपथ ली है,” यह याहवेह ही की वाणी है, “कि बोज़राह आतंक का, घृणा का, विध्वंस का तथा शाप का साधन बन जाएगा, इसके सभी नगर स्थायी खंडहर बनकर रह जाएंगे.”
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
14 याहवेह द्वारा प्रगट एक संदेश मैंने सुना है; राष्ट्रों में एक प्रतिनिधि इस संदेश के साथ भेजा गया है, “तुम सब एकजुट होकर उस पर आक्रमण करो! और युद्ध के लिए तैयार हो जाओ!”
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15 “क्योंकि तब तुम्हें बोध होगा, कि मैंने तुम्हें राष्ट्रों के मध्य लघु बना दिया है, जनसाधारण में तुच्छ कर दिया है.
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16 तुम, जो चट्टानों के मध्य निवास करते हो, तुम, जो पहाड़ियों की ऊंचाइयों को अपनाए बैठे हो, तुम्हारी भय पैदा करनेवाली छवि का कारण है, तुम्हारे हृदय में अवस्थित अहंकार, जिसने तुम्हें भ्रमित कर रखा है. यद्यपि तुम अपने घोंसले को उतनी ही ऊंचाई पर निर्मित करते हो, जितनी ऊंचाई पर गरुड़ निर्मित करते हैं, मैं तुम्हें वहां से भी नीचे उतार लाऊंगा,” यह याहवेह की वाणी है.
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
17 “एदोम भय का विषय हो जाएगा; इसके निकट से जाता हुआ हर एक व्यक्ति भयभीत होकर इसके घावों को देखेगा और उसका उपहास करेगा.
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18 सोदोम, अमोराह तथा इनके निकटवर्ती क्षेत्रों के प्रलय के सदृश,” यह याहवेह की वाणी है, “कोई भी वहां निवास न करेगा; यह मनुष्यों के निवास के योग्य रह ही न जाएगा.
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19 “यह देखना, यरदन की झाड़ियों में से कोई सिंह सदृश निकलकर मजबूत चरवाहों पर आक्रमण कर देगा; क्योंकि मैं एक ही क्षण में उसे वहां से पलायन के लिए प्रेरित कर दूंगा तथा इस क्षेत्र पर मैं उसे नियुक्त कर दूंगा, जो इसके लिए समर्थ किया जा चुका है. कौन है मेरे तुल्य तथा किसमें क्षमता है मुझे न्यायालय में बुलाने की? इसके सिवा कौन है वह चरवाहा, जो मेरे समक्ष ठहर सकेगा?”
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20 इसलिये अब याहवेह की उस योजना को समझ लो, जो उन्होंने एदोम के प्रति योजित की है, तथा उन लक्ष्यों को भी, जो उन्होंने तेमानवासियों के संकट के लिए निर्धारित किए हैं: इसमें कोई संदेह नहीं कि वे उन्हें खींचकर ले जाएंगे-भले ही वे भेड़-बकरियां मेमने हों; उनके कारण याहवेह उनकी चराइयों को निश्चयतः निर्जन बनाकर छोड़ेंगे.
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 उनके पतन की ध्वनि के कारण पृथ्वी कांप उठी है; यह चिल्लाहट है, इस आवाज की ध्वनि लाल सागर तक सुनी गई है.
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22 यह देख लेना कि याहवेह ऊंचे उड़कर गरुड़-सदृश झपट्टा मारेंगे, और अपने पंख बोज़राह के विरुद्ध फैला देंगे. तब एदोम के शूर योद्धाओं के हृदय उस दिन प्रसूता के हृदय सदृश हो जाएंगे.
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
23 दमेशेक के विषय में: “हामाथ तथा अरपाद को लज्जित किया गया है, क्योंकि उन्हें संकट समाचार दिया गया है. वे हताश हो गए हैं. वहां समुद्र के सदृश अशांति है, इसे शांत करना संभव नहीं.
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
24 दमेशेक अब निस्सहाय रह गया है, वह मुड़कर भाग जाने पर तैयार है ओर घोर आतंक ने उसे जकड़ लिया है; पीड़ा एवं वेदना ने उसे अपने अधिकार में ले लिया है, जैसे प्रसूता को.
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25 प्रख्यात नगर कैसे परित्यक्त नहीं छोड़ा गया, वह, जो मेरे आनंद का नगर है.
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
26 उस नगर के जवान उसकी सड़कों पर पृथ्वी पर गिरे हुए पाए जाएंगे; उस दिन सभी योद्धा मूक कर दिए जाएंगे,” यह सेनाओं के याहवेह की वाणी है.
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27 “मैं दमेशेक की शहरपनाहें भस्म कर दूंगा; और अग्नि बेन-हदद के गढ़-स्तम्भों को भस्म कर देगी.”
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
28 बाबेल के राजा नबूकदनेज्ज़र द्वारा पराजय: केदार, तथा हाज़ोर के राज्यों के विषय में याहवेह की वाणी यह है: “उठो, केदार पहुंच जाओ और पूर्व के लोगों को नष्ट कर दो.
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
29 वे अपने शिविर तथा अपनी भेड़-बकरियां अपने साथ ले जाएंगे; वे अपने लिए अपने शिविर के पर्दे ले जाएंगे, अपनी सारी सामग्री तथा ऊंट भी. तब वे एक दूसरे से पुकार-पुकारकर कहेंगे, ‘चहुंओर आतंक व्याप्त है!’
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
30 “भागो दूर चले जाओ! हाज़ोरवासियो जाकर गहन गुफाओं में जा बसो,” यह याहवेह की वाणी है. “क्योंकि बाबेल के राजा नबूकदनेज्ज़र ने तुम्हारे विरुद्ध एक योजना रची है; तुम्हारे विरुद्ध एक युक्ति गढ़ी है.
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
31 “उठकर ऐसे देश पर आक्रमण करो, जो शांति में निवास कर रहा है, जो पूर्णतः सुरक्षित है,” यह याहवेह की वाणी है, “उस नगर के न तो प्रवेश द्वार हैं और न कहीं छड़ों से उसे सुरक्षा प्रदान की गई है; वे अलग, अकेले निवास करते हैं.
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
32 उनके ऊंट लूट सामग्री हो जाएंगे, वैसे ही उनके असंख्य पशु भी. मैं प्रचंड वायु में उन सभी को बिखरा दूंगा, जो अपने कनपटी के केश कतरते रहते हैं और उनका विनाश उन पर हर एक ओर से टूट पड़ेगा,” यह याहवेह की वाणी है.
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
33 “हाज़ोर सियारों का बसेरा बन जाएगा, एक स्थायी निर्जन स्थान. कोई भी वहां निवास न करेगा; न कोई मनुष्य की सन्तति वहां पाई जाएगी.”
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
34 वह संदेश, जो याहवेह की ओर से भविष्यद्वक्ता येरेमियाह को एलाम के संबंध में यहूदिया के राजा सीदकियाहू के राज्य-काल के प्रारंभ में भेजा गया, यह है:
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35 सेनाओं के याहवेह की वाणी यह है: “देख लेना, मैं एलाम के धनुष को तोड़ने पर हूं, जो उनकी शक्ति का आधार है.
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36 आकाश की चारों दिशाओं से मैं एलाम पर इन चारों वायुओं का प्रहार करूंगा; इससे इस राष्ट्र का अस्तित्व ही मिट जाएगा, तब ऐसा कोई राष्ट्र न रहेगा, जहां एलाम के शरणार्थी न पहुंचेंगे.
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
37 इस रीति से मैं एलाम को उसके शत्रुओं के समक्ष तितर-बितर कर दूंगा, उनके समक्ष, जो उनके प्राणों के प्यासे हैं; उनके ऊपर मैं संकट प्रभावी कर दूंगा, यह मेरा उग्र कोप होगा,” यह याहवेह की वाणी है. “उनका पीछा करने के लिए मैं तलवार भेज दूंगा, जब तक वे सभी समाप्त न हो जाएं.
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
38 तब मैं एलाम में अपना सिंहासन प्रतिष्ठित करूंगा, मैं इसके सभी राजाओं तथा उच्चाधिकारी को नष्ट कर दूंगा,” यह याहवेह की वाणी है.
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39 “किंतु होगा यह, कि मैं अंतिम दिनों में एलाम की समृद्धि लौटा दूंगा,” यह याहवेह की वाणी है.
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”