< यूहन्ना 15 >
1 “मैं ही हूं सच्ची दाखलता और मेरे पिता किसान हैं.
೧“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.
2 मुझमें लगी हुई हर एक डाली, जो फल नहीं देती, उसे वह काट देते हैं तथा हर एक फल देनेवाली डाली को छांटते हैं कि वह और भी अधिक फल लाए.
೨ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
3 उस वचन के द्वारा, जो मैंने तुमसे कहा है, तुम शुद्ध हो चुके हो.
೩ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.
4 मुझमें स्थिर बने रहो तो मैं तुममें स्थिर बना रहूंगा. शाखा यदि लता से जुड़ी न रहे तो फल नहीं दे सकती, वैसे ही तुम भी मुझमें स्थिर रहे बिना फल नहीं दे सकते.
೪ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
5 “दाखलता मैं ही हूं, तुम डालियां हो. वह, जो मुझमें स्थिर बना रहता है और मैं उसमें, बहुत फल देता है; मुझसे अलग होकर तुम कुछ भी नहीं कर सकते.
೫ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
6 यदि कोई मुझमें स्थिर बना नहीं रहता, वह फेंकी हुई डाली के समान सूख जाता है. उन्हें इकट्ठा कर आग में झोंक दिया जाता है और वे भस्म हो जाती हैं.
೬ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
7 यदि तुम मुझमें स्थिर बने रहो और मेरे वचन तुममें स्थिर बने रहें तो तुम्हारे मांगने पर तुम्हारी इच्छा पूरी की जाएगी.
೭ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
8 तुम्हारे फलों की बहुतायत में मेरे पिता की महिमा और तुम्हारा मेरे शिष्य होने का सबूत है.
೮ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
9 “जिस प्रकार पिता ने मुझसे प्रेम किया है उसी प्रकार मैंने भी तुमसे प्रेम किया है; मेरे प्रेम में स्थिर बने रहो.
೯“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
10 तुम मेरे प्रेम में स्थिर बने रहोगे, यदि तुम मेरे आदेशों का पालन करते हो, जैसे मैं पिता के आदेशों का पालन करता आया हूं और उनके प्रेम में स्थिर हूं.
೧೦ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
11 यह सब मैंने तुमसे इसलिये कहा है कि तुममें मेरा आनंद बना रहे और तुम्हारा आनंद पूरा हो जाए.
೧೧ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
12 यह मेरी आज्ञा है कि तुम एक दूसरे से उसी प्रकार प्रेम करो, जिस प्रकार मैंने तुमसे प्रेम किया है.
೧೨ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ.
13 इससे श्रेष्ठ प्रेम और कोई नहीं कि कोई अपने मित्रों के लिए अपने प्राण दे दे.
೧೩ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
14 यदि तुम मेरी आज्ञाओं का पालन करते हो तो तुम मेरे मित्र हो.
೧೪ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.
15 मैंने तुम्हें दास नहीं, मित्र माना है क्योंकि दास स्वामी के कार्यों से अनजान रहता है. मैंने तुम्हें उन सभी बातों को बता दिया है, जो मुझे पिता से मिली हुई हैं.
೧೫ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.
16 तुमने मुझे नहीं परंतु मैंने तुम्हें चुना है और तुम्हें नियुक्त किया है कि तुम फल दो—ऐसा फल, जो स्थायी हो—जिससे मेरे नाम में तुम पिता से जो कुछ मांगो, वह तुम्हें दे सकें.
೧೬ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
17 मेरी आज्ञा यह है: एक दूसरे से प्रेम करो.
೧೭ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.
18 “यदि संसार तुमसे घृणा करता है तो याद रखो कि उसने तुमसे पहले मुझसे घृणा की है.
೧೮“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.
19 यदि तुम संसार के होते तो संसार तुमसे अपनों जैसा प्रेम करता. तुम संसार के नहीं हो—संसार में से मैंने तुम्हें चुन लिया है—संसार तुमसे इसलिये घृणा करता है.
೧೯ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
20 याद रखो कि मैंने तुमसे क्या कहा था: दास अपने स्वामी से बढ़कर नहीं होता. यदि उन्होंने मुझे सताया तो तुम्हें भी सताएंगे. यदि उन्होंने मेरी शिक्षा ग्रहण की तो तुम्हारी शिक्षा भी ग्रहण करेंगे.
೨೦ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.
21 वे यह सब तुम्हारे साथ मेरे कारण करेंगे क्योंकि वे मेरे भेजनेवाले को नहीं जानते.
೨೧ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.
22 यदि मैं न आता और यदि मैं उनसे ये सब न कहता तो वे दोषी न होते. परंतु अब उनके पास अपने पाप को छिपाने के लिए कोई भी बहाना नहीं बचा है.
೨೨ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.
23 वह, जो मुझसे घृणा करता है, मेरे पिता से भी घृणा करता है.
೨೩ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.
24 यदि मैं उनके मध्य वे काम न करता, जो किसी अन्य व्यक्ति ने नहीं किए तो वे दोषी न होते, परंतु अब उन्होंने मेरे कामों को देख लिया और उन्होंने मुझसे व मेरे पिता दोनों से घृणा की है
೨೪ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ
25 कि व्यवस्था का यह लेख पूरा हो: उन्होंने अकारण ही मुझसे घृणा की.
೨೫‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
26 “जब सहायक—सच्चाई का आत्मा, जो पिता से हैं—आएंगे, जिन्हें मैं तुम्हारे लिए पिता के पास से भेजूंगा, वह मेरे विषय में गवाही देंगे.
೨೬ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
27 तुम भी मेरे विषय में गवाही दोगे क्योंकि तुम शुरुआत से मेरे साथ रहे हो.
೨೭ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.