< यहोशू 1 >
1 याहवेह के सेवक मोशेह के मरने के बाद याहवेह ने नून के पुत्र यहोशू से कहा,
೧ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
2 “मोशेह, मेरे सेवक की मृत्यु हो चुकी है; अब तुम उठो और इन सभी लोगों के साथ यरदन नदी के उस पार जाओ, जिसे मैं इस्राएलियों को दे रहा हूं.
೨“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
3 और, जहां-जहां तुम पांव रखोगे, वह जगह मैं तुम्हें दूंगा, ठीक जैसा मैंने मोशेह से कहा था.
೩ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.
4 लबानोन के निर्जन प्रदेश से महानद फरात तक, और हित्तियों के देश से लेकर महासागर तक, सब देश तुम्हारा होगा. और
೪ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
5 कभी भी कोई तुम्हारा विरोध न कर सकेगा. ठीक जिस प्रकार मैं मोशेह के साथ रहा हूं, उसी प्रकार तुम्हारे साथ भी रहूंगा. मैं न तो तुम्हें छोडूंगा और न त्यागूंगा.
೫ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
6 इसलिये दृढ़ हो जाओ, क्योंकि तुम ही इन लोगों को उस देश पर अधिकारी ठहराओगे, जिसको देने का वादा मैंने पहले किया था.
೬ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
7 “तुम केवल हिम्मत और संकल्प के साथ बढ़ते जाओ और मेरे सेवक मोशेह द्वारा दिए गये नियम सावधानी से मानना; उससे न तो दाईं ओर मुड़ना न बाईं ओर, ताकि तुम हमेशा सफल रहो.
೭ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
8 तुम्हारे मन से व्यवस्था की ये बातें कभी दूर न होने पाए, लेकिन दिन-रात इसका ध्यान करते रहना, कि तुम उन बातों का पालन कर सको, जो इसमें लिखी गयी है; तब तुम्हारे सब काम अच्छे और सफल होंगे.
೮ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
9 मेरी बात याद रखो: दृढ़ होकर हिम्मत के साथ आगे बढ़ो; न घबराना, न उदास होना. क्योंकि याहवेह, तुम्हारा परमेश्वर तुम्हारे साथ हैं; चाहे तुम कहीं भी जाओ, याहवेह तुम्हारे साथ हैं.”
೯ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
10 फिर यहोशू ने अधिकारियों को यह आदेश दिया:
೧೦ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
11 “छावनी में जाकर लोगों को यह आज्ञा दो, ‘तीन दिन के भीतर तुम्हें यरदन नदी को पार करके उस देश में जाना है, जो याहवेह, तुम्हारे परमेश्वर तुम्हें देनेवाले हैं, तब अपने लिए भोजन वस्तुएं तैयार कर रखो.’”
೧೧“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
12 यहोशू ने रियूबेन, गाद तथा मनश्शेह के आधे गोत्र से कहा,
೧೨ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
13 “याहवेह के सेवक मोशेह के आदेश को मत भूलना, जो उन्होंने कहा था, ‘याहवेह, तुम्हारे परमेश्वर तुम्हें आराम के लिए एक स्थान देंगे.’
೧೩“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
14 तुम्हारी पत्नियां, तुम्हारे बालक तथा तुम्हारे पशु उस भूमि पर रहेंगे, जो मोशेह द्वारा यरदन के उस पार दी गई है, किंतु तुम्हारे सब योद्धाओं को अपने भाई-बंधुओं के आगे जाना होगा, ताकि वे उनकी सहायता कर सकें.
೧೪ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
15 जब तक याहवेह तुम्हारे भाई-बंधुओं को आराम न दें, तथा वे भी उस भूमि को अपने अधिकार में न कर लें, जो याहवेह, तुम्हारे परमेश्वर उन्हें देंगे. फिर तुम अपने देश को लौट सकोगे और उस भूमि पर अधिकार कर सकोगे, जो याहवेह के सेवक मोशेह ने तुम्हें यरदन के उस पार दी है.”
೧೫ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
16 उन्होंने यहोशू को उत्तर दिया, “आपने जो कहा है, हम उसको मानेंगे, आप हमें जहां भेजेंगे, हम वहां जाएंगे.
೧೬ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
17 जिस प्रकार हम मोशेह की सब बातों को मानते थे, उसी प्रकार आपकी भी सब बातो को मानेंगे. बस इतना हो, कि याहवेह, परमेश्वर आपके साथ वैसे ही बने रहें, जैसे वह मोशेह के साथ थे.
೧೭ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
18 यदि कोई भी, आपकी बातों का विरोध करेगा या, आपके द्वारा दिए गए समस्त आदेशों का पालन न करेगा, उसको मार दिया जाएगा!”
೧೮ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.