< यहोशू 18 >

1 फिर सब इस्राएली एक साथ शीलो में इकट्‍ठे हुए. उन्होंने वहां मिलनवाले तंबू को खड़ा किया. पूरा देश उनके वश में हो चुका था,
ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
2 फिर भी इस्राएल के सात गोत्र अब भी ऐसे थे, जिन्हें उनका हिस्सा नहीं मिला था.
ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.
3 तब यहोशू ने इस्राएल वंश से कहा, “याहवेह, तुम्हारे पिता के परमेश्वर ने जो भूमि तुम्हें दे दी है, उसे अधिकार में करने के लिए कब तक टालते रहोगे?
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
4 हर गोत्र से तीन-तीन व्यक्तियों को इस कार्य की जवाबदारी दें, ताकि वे जाकर इस देश को देखें और अपनी इच्छा से अपने गोत्र के लिए विरासत चुन ले, और आकर मुझे बताये.
ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
5 यहूदाह गोत्र अपनी ही सीमा के दक्षिण में, तथा योसेफ़ का गोत्र उत्तर में रहेगा.
ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
6 तुम देश को सात भागों में बांटकर पूरी जानकारी मुझे देना. मैं, याहवेह हमारे परमेश्वर से तुम्हारे लिए बिनती करूंगा.
ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.
7 तुम्हारे बीच लेवियों को कोई भाग नहीं दिया गया है, क्योंकि याहवेह की और से मिला हुआ पुरोहित पद ही उनका भाग है. रियूबेन, गाद तथा मनश्शेह के आधे गोत्र को पूर्व में यरदन के दूसरी ओर हिस्सा मिल चुका है, जो, याहवेह के सेवक मोशेह द्वारा उन्हें दिया गया था.”
ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು
8 तब जिनको देश का हाल लिखने के लिए चुना गया था, वे उस देश में जाकर उसका नक्शा तैयार करने जब निकले, उनके लिए यहोशू का आदेश इस प्रकार था: “तुम उस देश को अच्छी तरह देखें, और आकर मुझे बताएं; तब मैं शीलो में तुम्हारे लिए याहवेह से बिनती कर निर्णय लूंगा.”
ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.
9 तब वे लोग उस देश में गए और पूरे देश में घूमें, तथा नगरों के अनुसार सात भागों में इसके बारे में पुस्तक में लिखा, और वे शीलो के पड़ाव में यहोशू के पास वापस आए.
ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
10 यहोशू ने उधर उनके लिए याहवेह से बिनती की, और इस्राएल के लिए उनके भागों के अनुसार भूमि को बांट दिया.
೧೦ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.
11 भूमि का सबसे पहला हिस्सा बिन्यामिन गोत्र को मिला. उनके परिवारों की संख्या के अनुसार चिट्ठी डाली गई, उन्हें यहूदाह तथा योसेफ़ के गोत्रों के बीच की भूमि पर अधिकार दिया गया.
೧೧ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
12 उत्तर दिशा में उनकी सीमा यरदन से होते हुए, येरीख़ो के उत्तरी ढाल से होकर, पर्वतीय क्षेत्र से होते हुए, पश्चिम दिशा में मिल जाती है, और बेथ-आवेन पर जाकर रुक जाती है.
೧೨ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
13 वहां से लूज़ की ओर से होकर बेथेल से दक्षिण दिशा में बढ़ती है. जहां से अटारोथ-अद्दार, जो पहाड़ी के निकट है, और बेथ-होरोन के दक्षिण में है.
೧೩ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
14 वहां से पश्चिम से होकर दक्षिण की ओर मुड़ जाती है, और किरयथ-बाल पर जाकर समाप्‍त होती है, जो नगर यहूदाह गोत्र के अधीन था, और पश्चिमी सीमा में है.
೧೪ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.
15 दक्षिण की सीमा किरयथ-यआरीम से शुरू होकर, पश्चिम दिशा से बढ़ते हुए नेफतोआह जल के सोते तक पहुंचती है.
೧೫ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
16 वह सीमा बढ़ती हुई बेन-हिन्‍नोम घाटी में स्थित पहाड़ी के पास पहुंचती है, जो उत्तर में रेफाइम की घाटी में है; और हिन्‍नोम, दक्षिण में यबूसियों का ढाल है, जो एन-रोगेल की ओर बढ़ जाती है.
೧೬ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.
17 यह उत्तर दिशा से होती हुई एन-शेमेश से गलीलोथ पहुंचती है, जो अदुम्मीम चढ़ाई के पास है. वहां से सीमा रियूबेन के पुत्र बोहन की शिला की ओर बढ़ती है.
೧೭ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
18 यह सीमा अराबाह के ढाल की ओर बढ़कर. उत्तर की ओर से होकर घाटी में पहुंचती है.
೧೮ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
19 सीमा आगे बढ़कर बेथ-होगलाह की बाहरी सीमा से होती हुई, उत्तर की ओर जाती है, जो लवण-सागर की उत्तरी खाड़ी में जाकर यरदन नदी के दक्षिणी मुहाने पर मिल जाती है.
೧೯ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
20 यरदन नदी इसकी पूर्वी सीमा थी. यह उनके परिवारों एवं इसकी चारों ओर की सीमा के अनुसार बिन्यामिन वंश का हिस्सा था.
೨೦ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.
21 बिन्यामिन के गोत्र तथा उनके परिवारों के अनुसार उन्हें दिये गये नगर यह थे: येरीख़ो, बेथ-होगलाह, एमेक-कत्सीत्स,
೨೧ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
22 बेथ-अराबाह, सेमाराइम, बेथेल,
೨೨ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
23 अव्वीम, पाराह, ओफ़राह,
೨೩ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
24 कफर-अम्मोनी, ओफनी तथा गेबा; ये सभी बारह नगर, उनके गांवों सहित.
೨೪ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
25 गिबयोन, रामाह, बएरोथ,
೨೫ಗಿಬ್ಯೋನ್, ರಾಮಾ, ಬೇರೋತ್,
26 मित्सपेह, कफीराह, मोत्साह,
೨೬ಮಿಚ್ಪೆ, ಕೆಫೀರಾ, ಮೋಚಾ,
27 रेकेम, यिरपएल, थरअलाह,
೨೭ರೆಕೆಮ್, ಇರ್ಪೇಲ್, ತರಲಾ,
28 त्सेलाह, एलेफ तथा यबूसी नगर, अर्थात् येरूशलेम, गिबियाह तथा किरयथ—ये चौदह नगर, उनके गांवों सहित. बिन्यामिन वंश को, उनके परिवारों के अनुसार मिला हुआ हिस्सा यह था.
೨೮ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

< यहोशू 18 >