< लूका 14 >
1 एक अवसर पर जब प्रभु येशु शब्बाथ पर फ़रीसियों के नायकों में से एक के घर भोजन करने गए, वे सभी उन्हें उत्सुकतापूर्वक देख रहे थे.
ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.
2 वहां जलोदर रोग से पीड़ित एक व्यक्ति था.
ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು.
3 प्रभु येशु ने फ़रीसियों और वकीलों से प्रश्न किया, “शब्बाथ पर किसी को स्वस्थ करना व्यवस्था के अनुसार है या नहीं?”
ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.
4 किंतु वे मौन रहे. इसलिये प्रभु येशु ने उस रोगी पर हाथ रख उसे स्वस्थ कर दिया तथा उसे विदा किया.
ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.
5 तब प्रभु येशु ने उनसे प्रश्न किया, “यह बताओ, यदि तुममें से किसी का पुत्र या बैल शब्बाथ पर कुएं में गिर जाए तो क्या तुम उसे तुरंत ही बाहर न निकालोगे?”
ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.
6 उनके पास इस प्रश्न का कोई उत्तर न था.
ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.
7 जब प्रभु येशु ने यह देखा कि आमंत्रित व्यक्ति अपने लिए किस प्रकार प्रधान आसन चुन लेते हैं, प्रभु येशु ने उन्हें यह विचार दिया:
ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:
8 “जब भी कोई तुम्हें विवाह के उत्सव में आमंत्रित करे, तुम अपने लिए आदरयोग्य आसन न चुनना. यह संभव है कि उसने तुमसे अधिक किसी आदरयोग्य व्यक्ति को भी आमंत्रित किया हो.
“ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು.
9 तब वह व्यक्ति, जिसने तुम्हें और उसे दोनों ही को आमंत्रित किया है, आकर तुमसे कहे ‘तुम यह आसन इन्हें दे दो,’ तब लज्जित हो तुम्हें वह आसन छोड़कर सबसे पीछे के आसन पर बैठना पड़े.
ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.
10 किंतु जब तुम्हें कहीं आमंत्रित किया जाए, जाकर सबसे साधारण आसन पर बैठ जाओ जिससे कि जब जिसने तुम्हें आमंत्रित किया है तुम्हारे पास आए तो यह कहे, ‘मेरे मित्र, उठो और उस ऊंचे आसन पर बैठो.’ इस पर अन्य सभी आमंत्रित अतिथियों के सामने तुम आदरयोग्य साबित होगे.
ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.
11 हर एक, जो स्वयं को बड़ा बनाता है, छोटा बना दिया जाएगा तथा जो स्वयं को छोटा बना देता है, बड़ा किया जाएगा.”
ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
12 तब फिर प्रभु येशु ने अपने न्योता देनेवाले से कहा, “जब तुम दिन या रात के भोजन पर किसी को आमंत्रित करो तो अपने मित्रों, भाई-बंधुओं, परिजनों या धनवान पड़ोसियों को आमंत्रित मत करो; ऐसा न हो कि वे भी तुम्हें आमंत्रित करें और तुम्हें बदला मिल जाए.
ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.
13 किंतु जब तुम भोज का आयोजन करो तो निर्धनों, अपंगों, लंगड़ों तथा अंधों को आमंत्रित करो.
ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.
14 तब तुम परमेश्वर की कृपा के भागी बनोगे. वे लोग तुम्हारा बदला नहीं चुका सकते. बदला तुम्हें धर्मियों के दोबारा जी उठने (पुनरुत्थान) के अवसर पर प्राप्त होगा.”
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”
15 यह सुन वहां आमंत्रित लोगों में से एक ने प्रभु येशु से कहा, “धन्य है वह, जो परमेश्वर के राज्य के भोज में सम्मिलित होगा.”
ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.
16 यह सुन प्रभु येशु ने कहा, “किसी व्यक्ति ने एक बड़ा भोज का आयोजन किया और अनेकों को आमंत्रित किया.
ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.
17 भोज तैयार होने पर उसने अपने सेवकों को इस सूचना के साथ आमंत्रितों के पास भेजा, ‘आ जाइए, सब कुछ तैयार है.’
ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.
18 “किंतु वे सभी बहाने बनाने लगे. एक ने कहा, ‘मैंने भूमि मोल ली है और आवश्यक है कि मैं जाकर उसका निरीक्षण करूं. कृपया मुझे क्षमा करें.’
“ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.
19 “दूसरे ने कहा, ‘मैंने अभी-अभी पांच जोड़े बैल मोल लिए हैं और मैं उन्हें परखने के लिए बस निकल ही रहा हूं. कृपया मुझे क्षमा करें.’
“ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.
20 “एक और अन्य ने कहा, ‘अभी, इसी समय मेरा विवाह हुआ है इसलिये मेरा आना संभव नहीं.’
“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.
21 “सेवक ने लौटकर अपने स्वामी को यह सूचना दे दी. अत्यंत गुस्से में घर के स्वामी ने सेवक को आज्ञा दी, ‘तुरंत नगर की गलियों-चौराहों में जाओ और निर्धनों, अपंगों, लंगड़ों और अंधों को ले आओ.’
“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.
22 “सेवक ने लौटकर सूचना दी, ‘स्वामी, आपके आदेशानुसार काम पूरा हो चुका है किंतु अब भी कुछ जगह भरने बाकी है.’
“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.
23 “तब घर के स्वामी ने उसे आज्ञा दी, ‘अब नगर के बाहर के मार्गों से लोगों को यहां आने के लिए विवश करो कि मेरा भवन भर जाए.
“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.
24 यह निश्चित है कि वे, जिन्हें पहले आमंत्रित किया गया था, उनमें से एक भी मेरे भोज को चख न सकेगा.’”
ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’”
25 एक बड़ी भीड़ प्रभु येशु के साथ साथ चल रही थी. प्रभु येशु ने मुड़कर उनसे कहा,
ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:
26 “यदि कोई मेरे पास आता है और अपने माता-पिता, पत्नी, संतान तथा भाई बहनों को, यहां तक कि स्वयं अपने जीवन को, मुझसे अधिक महत्व देता है, मेरा चेला नहीं हो सकता.
“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.
27 वह, जो अपना क्रूस स्वयं उठाए हुए मेरा अनुसरण नहीं करता, वह मेरा चेला हो ही नहीं सकता.
ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.
28 “तुममें ऐसा कौन है, जो भवन निर्माण करना चाहे और पहले बैठकर खर्च का अनुमान न करे कि उसके पास निर्माण काम पूरा करने के लिए पर्याप्त राशि है भी या नहीं?
“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?
29 अन्यथा यदि वह नींव डाल ले और काम पूरा न कर पाए तो देखनेवालों के ठट्ठों का कारण बन जाएगा:
ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.
30 ‘देखो, देखो! इसने काम प्रारंभ तो कर दिया किंतु अब समाप्त नहीं कर पा रहा!’
31 “या ऐसा कौन राजा होगा, जो दूसरे पर आक्रमण करने के पहले यह विचार न करेगा कि वह अपने दस हज़ार सैनिकों के साथ अपने विरुद्ध बीस हज़ार की सेना से टक्कर लेने में समर्थ है भी या नहीं?
“ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ?
32 यदि नहीं, तो जब शत्रु की सेना दूर ही है, वह अपने दूतों को भेजकर उसके सामने शांति का प्रस्ताव रखेगा.
ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?
33 इसी प्रकार तुममें से कोई भी मेरा चेला नहीं हो सकता यदि वह अपना सब कुछ त्याग न कर दे.
ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.
34 “नमक उत्तम है किंतु यदि नमक ही स्वादहीन हो जाए तो किस वस्तु से उसका स्वाद लौटाया जा सकेगा?
“ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು?
35 तब वह न तो भूमि के लिए किसी उपयोग का रह जाता है और न खाद के रूप में किसी उपयोग का. उसे फेंक दिया जाता है. “जिसके सुनने के कान हों, वह सुन ले.”
ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”