< लूका 15 >
1 सभी चुंगी लेनेवाले और पापी लोग प्रभु येशु के प्रवचन सुनने उनके पास आए
೧ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.
2 किंतु फ़रीसी और शास्त्री बड़बड़ाने लगे, “यह व्यक्ति पापियों से मित्रता रखते हुए उनके साथ संगति करता है.”
೨ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.
3 इसलिये प्रभु येशु ने उनके सामने यह दृष्टांत प्रस्तुत किया:
೩ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
4 “तुममें से ऐसा कौन होगा, जिसके पास सौ भेड़ें हों और उनमें से एक खो जाए तो वह निन्यानवे को बंजर भूमि में छोड़कर उस खोई हुई को तब तक खोजता न रहेगा, जब तक वह मिल न जाए?
೪ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
5 और जब वह उसे मिल जाती है, उसे आनंदपूर्वक कंधों पर लाद लेता है.
೫ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,
6 घर लौटने पर वह अपने मित्रों और पड़ोसियों को इकट्ठा कर कहता है, ‘मेरे आनंद में सम्मिलित हो जाओ क्योंकि मुझे मेरी खोई हुई भेड़ मिल गई है!’
೬ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
7 यह बात याद रखो: पश्चाताप करते हुए एक पापी के लिए उन निन्यानवे धर्मियों की तुलना में स्वर्ग में कहीं अधिक आनंद मनाया जाता है, जिन्हें मन फिराने की ज़रूरत नहीं है.”
೭ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
8 “या कौन ऐसी स्त्री होगी, जिसके पास चांदी के दस सिक्के हों और उनमें से एक खो जाए तो वह घर में रोशनी कर घर को बुहारते हुए उस सिक्के को तब तक खोजती न रहेगी जब तक वह मिल नहीं जाता?
೮“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
9 सिक्का मिलने पर वह अपनी पड़ोसिनों और सहेलियों से कहती है, ‘मेरे आनंद में शामिल हो जाओ क्योंकि मेरा खोया हुआ सिक्का मिल गया है.’
೯ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
10 मैं तुमसे कहता हूं कि स्वर्ग में इसी प्रकार परमेश्वर के दूतों के सामने उस पापी के लिए आनंद मनाया जाता है, जिसने मन फिराया है.”
೧೦ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
11 प्रभु येशु ने आगे कहा, “किसी व्यक्ति के दो पुत्र थे.
೧೧ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.
12 छोटे पुत्र ने पिता से विनती की, ‘पिताजी, संपत्ति में से मेरा भाग मुझे दे दीजिए.’ इसलिये पिता ने दोनों पुत्रों में अपनी संपत्ति बांट दी.
೧೨ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.
13 “शीघ्र ही छोटे पुत्र ने अपने भाग में आई सारी संपत्ति ली और एक दूर देश की ओर चला गया. वहां उसने अपना सारा धन मनमानी जीवनशैली में उड़ा दिया.
೧೩ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.
14 और अब, जब उसका सब कुछ समाप्त हो गया था, सारे देश में भीषण अकाल पड़ा किंतु उसके पास अब कुछ भी बाकी न रह गया था.
೧೪ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.
15 इसलिये वह उसी देश के एक नागरिक के यहां चला गया जिसने उसे अपने खेतों में सूअर चराने भेज दिया.
೧೫ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.
16 वह सूअरों के चारे से ही अपना पेट भरने के लिए तरस जाता था. कोई भी उसे खाने के लिए कुछ नहीं देता था.
೧೬ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.
17 “अपनी परिस्थिति के बारे में होश में आने पर वह विचार करने लगा: ‘मेरे पिता के कितने ही सेवकों को अधिक मात्रा में भोजन उपलब्ध है और यहां मैं भूखा मर रहा हूं!
೧೭ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.
18 मैं लौटकर अपने पिता के पास जाऊंगा और उनसे कहूंगा: पिताजी! मैंने वे जो स्वर्ग में हैं, उनके विरुद्ध तथा आपके विरुद्ध पाप किया है.
೧೮ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
19 इसके बाद मैं इस योग्य नहीं रह गया कि आपका पुत्र कहलाऊं. अब आप मुझे अपने यहां मज़दूर ही रख लीजिए.’
೧೯ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,
20 इसलिये वह उठकर अपने पिता के पास लौट गया. “वह दूर ही था कि पिता ने उसे देख लिया और वह दया से भर गया. वह दौड़कर अपने पुत्र के पास गया और उसे गले लगाकर चूमता रहा.
೨೦ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
21 “पुत्र ने पिता से कहा, ‘पिताजी! मैंने स्वर्ग के विरुद्ध तथा आपके प्रति पाप किया है, मैं अब इस योग्य नहीं रहा कि मैं आपका पुत्र कहलाऊं.’
೨೧ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
22 “किंतु पिता ने अपने सेवकों को आज्ञा दी, ‘बिना देर किए सबसे अच्छे वस्त्र लाकर इसे पहनाओ और इसकी उंगली में अंगूठी और पांवों में जूतियां भी पहनाओ;
೨೨ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
23 जाकर एक सबसे अच्छे बछड़े से भोजन तैयार करो. चलो, हम सब आनंद मनाएं
೨೩ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.
24 क्योंकि मेरा यह पुत्र मर गया था, अब जीवित हो गया है; यह खो गया था किंतु अब मिल गया है.’ इसलिये वे सभी आनंद से भर गए.
೨೪ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
25 “उस समय बड़ा बेटा अपने खेतों में काम कर रहा था. जब वह लौटकर घर आ रहा था, पास आने पर उसे संगीत और नाचने की आवाज सुनाई दी.
೨೫ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
26 उसने एक सेवक को बुलाकर उससे पूछा, ‘यह सब क्या हो रहा है?’
೨೬ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.
27 ‘आपका भाई लौट आया है,’ उस सेवक ने उत्तर दिया, ‘और आपके पिता ने सबसे अच्छा बछड़ा लेकर भोज तैयार करवाया है क्योंकि उनका पुत्र उन्हें सकुशल और सुरक्षित मिल गया है.’
೨೭ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.
28 “गुस्से में बड़े भाई ने घर के भीतर तक जाना न चाहा. इसलिये उसके पिता ने ही बाहर आकर उससे विनती की.
೨೮ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.
29 उसने अपने पिता को उत्तर दिया, ‘देखिए, इन सभी वर्षों में मैं दास जैसे आपकी सेवा करता रहा हूं और कभी भी आपकी आज्ञा नहीं टाली फिर भी आपने कभी मुझे एक मेमना तक न दिया कि मैं अपने मित्रों के साथ मिलकर आनंद मना सकूं.
೨೯ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.
30 किंतु जब आपका यह पुत्र, जिसने आपकी संपत्ति वेश्याओं पर उड़ा दी, घर लौट आया, तो आपने उसके लिए सबसे अच्छे बछड़े का भोजन बनवाया है!’
೩೦ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.
31 “‘मेरे पुत्र!’ पिता ने कहा, ‘तुम तो सदा से ही मेरे साथ हो. वह सब, जो मेरा है, तुम्हारा ही है.
೩೧ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ.
32 हमारे लिए आनंद मनाना और हर्षित होना सही ही है क्योंकि तुम्हारा यह भाई, जो मर गया था, अब जीवित हो गया है; वह, जो खो गया था, अब मिल गया है.’”
೩೨ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.