< मत्ती 14 >
1 उसी समय हेरोदेस ने, जो देश के एक चौथाई भाग का राजा था, येशु के विषय में सुना.
೧ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
2 उसने अपने सेवकों से कहा, “यह बपतिस्मा देनेवाला योहन है—मरे हुओं में से जी उठा! यही कारण है कि आश्चर्यकर्म करने का सामर्थ्य इसमें मौजूद है.”
೨ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
3 उनकी हत्या का कारण थी हेरोदेस के भाई फ़िलिप्पॉस की पत्नी हेरोदिअस. हेरोदेस ने बपतिस्मा देनेवाले योहन को बंदी बनाकर कारागार में डाल दिया था
೩ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
4 क्योंकि बपतिस्मा देनेवाले योहन उसे यह चेतावनी देते रहते थे, “तुम्हारा हेरोदिअस को अपने पास रखना उचित नहीं है.”
೪ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
5 हेरोदेस योहन को समाप्त ही कर देना चाहता था किंतु उसे लोगों का भय था क्योंकि लोग उन्हें भविष्यवक्ता मानते थे.
೫ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
6 हेरोदेस के जन्मदिवस समारोह के अवसर पर हेरोदिअस की पुत्री के नृत्य-प्रदर्शन से हेरोदेस इतना प्रसन्न हुआ कि
೬ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
7 उसने उस किशोरी से शपथ खाकर वचन दिया कि वह जो चाहे मांग सकती है.
೭ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
8 अपनी माता के संकेत पर उसने कहा, “मुझे एक थाल में, यहीं, बपतिस्मा देनेवाले योहन का सिर चाहिए.”
೮ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
9 यद्यपि इस पर हेरोदेस दुःखित अवश्य हुआ किंतु अपनी शपथ और उपस्थित अतिथियों के कारण उसने इसकी पूर्ति की आज्ञा दे दी.
೯ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
10 उसने किसी को कारागार में भेजकर योहन का सिर कटवा दिया,
೧೦ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
11 उसे एक थाल में लाकर उस किशोरी को दे दिया गया और उसने उसे ले जाकर अपनी माता को दे दिया.
೧೧ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
12 योहन के शिष्य आए, उनके शव को ले गए, उनका अंतिम संस्कार कर दिया तथा येशु को इसके विषय में सूचित किया.
೧೨ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
13 इस समाचार को सुन येशु नाव पर सवार होकर वहां से एकांत में चले गए. जब लोगों को यह मालूम हुआ, वे नगरों से निकलकर पैदल ही उनके पीछे चल दिए.
೧೩ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
14 तट पर पहुंचने पर येशु ने इस बड़ी भीड़ को देखा और उनका हृदय करुणा से भर गया. उन्होंने उनमें, जो रोगी थे उनको स्वस्थ किया.
೧೪ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
15 संध्याकाल उनके शिष्य उनके पास आकर कहने लगे, “यह निर्जन स्थान है और दिन ढल रहा है इसलिये भीड़ को विदा कर दीजिए कि गांवों में जाकर लोग अपने लिए भोजन-व्यवस्था कर सकें.”
೧೫ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
16 किंतु येशु ने उनसे कहा, “उन्हें विदा करने की कोई ज़रूरत नहीं है—तुम उनके लिए भोजन की व्यवस्था करो!”
೧೬ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
17 उन्होंने येशु को बताया कि यहां उनके पास सिर्फ़ पांच रोटियां और दो मछलियां हैं.
೧೭ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
18 येशु ने उन्हें आज्ञा दी, “उन्हें यहां मेरे पास ले आओ.”
೧೮ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
19 लोगों को घास पर बैठने की आज्ञा देते हुए येशु ने पांचों रोटियां और दो मछलियां अपने हाथों में लेकर स्वर्ग की ओर आंखें उठाकर भोजन के लिए धन्यवाद देने के बाद रोटियां तोड़-तोड़ कर शिष्यों को देना प्रारंभ किया और शिष्यों ने भीड़ को.
೧೯ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
20 सभी ने भरपेट खाया. शेष रह गए टुकड़े इकट्ठा करने पर बारह टोकरे भर गए.
೨೦ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
21 वहां जितनों ने भोजन किया था उनमें स्त्रियों और बालकों को छोड़कर पुरुषों की संख्या ही कोई पांच हज़ार थी.
೨೧ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
22 इसके बाद येशु ने शिष्यों को तुरंत ही नाव में सवार होने के लिए इस उद्देश्य से विवश किया कि शिष्य उनके पूर्व ही दूसरी ओर पहुंच जाएं, जबकि वह स्वयं भीड़ को विदा करने लगे.
೨೨ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
23 भीड़ को विदा करने के बाद वह अकेले पर्वत पर चले गए कि वहां जाकर वह एकांत में प्रार्थना करें. यह रात का समय था और वह वहां अकेले थे.
೨೩ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
24 विपरीत दिशा में हवा तथा लहरों के थपेड़े खाकर नाव तट से बहुत दूर निकल चुकी थी.
೨೪ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
25 रात के अंतिम प्रहर में येशु जल सतह पर चलते हुए उनकी ओर आए.
೨೫ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
26 उन्हें जल सतह पर चलते देख शिष्य घबराकर कहने लगे, “दुष्टात्मा है यह!” और वे भयभीत हो चिल्लाने लगे.
೨೬ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
27 इस पर येशु ने उनसे कहा, “डरो मत. साहस रखो! मैं हूं!”
೨೭ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
28 पेतरॉस ने उनसे कहा, “प्रभु! यदि आप ही हैं तो मुझे आज्ञा दीजिए कि मैं जल पर चलते हुए आपके पास आ जाऊं.”
೨೮ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
29 “आओ!” येशु ने आज्ञा दी. पेतरॉस नाव से उतरकर जल पर चलते हुए येशु की ओर बढ़ने लगे
೨೯ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
30 किंतु जब उनका ध्यान हवा की गति की ओर गया तो वह भयभीत हो गए और जल में डूबने लगे. वह चिल्लाए, “प्रभु! मुझे बचाइए!”
೩೦ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
31 येशु ने तुरंत हाथ बढ़ाकर उन्हें थाम लिया और कहा, “अरे, अल्प विश्वासी! तुमने संदेह क्यों किया?”
೩೧ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
32 तब वे दोनों नाव में चढ़ गए और वायु थम गई.
೩೨ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
33 नाव में सवार शिष्यों ने यह कहते हुए येशु की वंदना की, “सचमुच आप ही परमेश्वर-पुत्र हैं.”
೩೩ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
34 झील पार कर वे गन्नेसरत प्रदेश में आ गए.
೩೪ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
35 वहां के निवासियों ने उन्हें पहचान लिया और आस-पास के स्थानों में संदेश भेज दिया. लोग बीमार व्यक्तियों को उनके पास लाने लगे.
೩೫ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
36 वे येशु से विनती करने लगे, कि वह उन्हें मात्र अपने वस्त्र का छोर ही छू लेने दें. अनेकों ने उनका वस्त्र छुआ और स्वस्थ हो गए.
೩೬ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.