< मत्ती 9 >
1 इसलिये येशु नाव में सवार होकर झील पार करके अपने ही नगर में आ गए.
೧ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
2 कुछ लोग एक लकवा पीड़ित को बिछौने पर उनके पास लाए. उनका विश्वास देख येशु ने रोगी से कहा, “तुम्हारे लिए यह आनंद का विषय है: तुम्हारे पाप क्षमा हो गए हैं.”
೨ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
3 कुछ शास्त्री आपस में कहने लगे, “यह तो परमेश्वर की निंदा कर रहा है!”
೩ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 उनके विचारों का अहसास होने पर येशु उन्हें संबोधित कर बोले, “क्यों अपने मनों में बुरा विचार कर रहे हो?
೪ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
5 क्या कहना सरल है, ‘तुम्हारे पाप क्षमा हो गए’ या ‘उठो, चलने लगो?’
೫ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?
6 किंतु इसका उद्देश्य यह है कि तुम्हें यह मालूम हो जाए कि मनुष्य के पुत्र को पृथ्वी पर पाप क्षमा का अधिकार सौंपा गया है.” तब रोगी से येशु ने कहा, “उठो, अपना बिछौना उठाओ और अपने घर जाओ.”
೬ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
೭ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
8 यह देख भीड़ हैरान रह गई और परमेश्वर का गुणगान करने लगी, जिन्होंने मनुष्यों को इस प्रकार का अधिकार दिया है.
೮ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
9 वहां से जाने के बाद येशु ने चुंगी लेनेवाले के आसन पर बैठे हुए एक व्यक्ति को देखा, जिसका नाम मत्तियाह था. येशु ने उसे आज्ञा दी, “मेरे पीछे हो ले.” मत्तियाह उठकर येशु के साथ हो लिए.
೯ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
10 जब येशु भोजन के लिए बैठे थे, अनेक चुंगी लेनेवाले तथा अपराधी व्यक्ति भी उनके साथ शामिल थे.
೧೦ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
11 यह देख फ़रीसियों ने आपत्ति उठाते हुए येशु के शिष्यों से कहा, “तुम्हारे गुरु चुंगी लेनेवाले और अपराधी व्यक्तियों के साथ भोजन क्यों करते हैं?”
೧೧ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
12 यह सुन येशु ने स्पष्ट किया, “चिकित्सक की ज़रूरत स्वस्थ व्यक्ति को नहीं परंतु रोगी व्यक्ति को होती है.
೧೨ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
13 अब जाओ और इस कहावत का अर्थ समझो: ‘मैं बलिदान से नहीं, पर दया से प्रसन्न होता हूं,’ क्योंकि मैं धर्मियों को नहीं परंतु पापियों को बुलाने के लिए इस पृथ्वी पर आया हूं.”
೧೩ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
14 बपतिस्मा देनेवाले योहन के शिष्य येशु के पास आए और उनसे प्रश्न किया, “क्या कारण है कि फ़रीसी और हम तो उपवास करते हैं किंतु आपके शिष्य नहीं?”
೧೪ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
15 येशु ने उन्हें समझाया: “क्या यह संभव है कि दुल्हे के होते हुए बाराती विलाप करें? हां, ऐसा समय आएगा जब दूल्हा उनसे अलग कर दिया जाएगा—तब वे उपवास करेंगे.
೧೫“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
16 “पुराने वस्त्र में कोई भी नये कपड़े का जोड़ नहीं लगाता, नहीं तो कोरा वस्त्र का जोड़ सिकुड़ कर वस्त्र से अलग हो जाता है और वस्त्र और भी अधिक फट जाता है.
೧೬ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
17 वैसे ही लोग नए दाखरस को पुरानी मशकों में नहीं रखते; अन्यथा वे फट जाती हैं और दाखरस तो बहकर नाश हो ही जाता है, साथ ही मशके भी. नया दाखरस नई मशकों में ही रखा जाता है. परिणामस्वरूप दोनों ही सुरक्षित रहते हैं.”
೧೭ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
18 जब येशु उन लोगों से इन विषयों पर बातचीत कर रहे थे, यहूदी सभागृह का एक अधिकारी उनके पास आया और उनके सामने झुककर विनती करने लगा, “कुछ देर पहले ही मेरी पुत्री की मृत्यु हुई है. आप कृपया आकर उस पर हाथ रख दीजिए और वह जीवित हो जाएगी.”
೧೮ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
19 येशु और उनके शिष्य उसके साथ चले गए.
೧೯ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
20 मार्ग में बारह वर्ष से लहूस्राव-पीड़ित एक स्त्री ने पीछे से आकर येशु के वस्त्र के छोर को छुआ,
೨೦ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,
21 क्योंकि उसने अपने मन में यह कहा था: “यदि मैं उनके वस्त्र को भी छू लूं, तो मैं रोगमुक्त हो जाऊंगी.”
೨೧“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
22 येशु ने पीछे मुड़कर उसे देखा और उससे कहा, “तुम्हारे लिए यह आनंद का विषय है: तुम्हारे विश्वास ने तुम्हें स्वस्थ कर दिया.” उसी क्षण वह स्त्री स्वस्थ हो गई.
೨೨ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
23 जब येशु यहूदी सभागृह के अधिकारी के घर पर पहुंचे तो उन्होंने भीड़ का कोलाहल और बांसुरी वादक शोक-संगीत बजाते हुए भी सुना.
೨೩ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
24 इसलिये उन्होंने आज्ञा दी, “यहां से चले जाओ क्योंकि बालिका की मृत्यु नहीं हुई है—वह सो रही है.” इस पर वे येशु का ठट्ठा करने लगे,
೨೪“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
25 किंतु जब भीड़ को बाहर निकाल दिया गया, येशु ने कक्ष में प्रवेश कर बालिका का हाथ पकड़ा और वह उठ बैठी.
೨೫ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
26 यह समाचार सारे क्षेत्र में फैल गया.
೨೬ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
27 जब येशु वहां से विदा हुए, दो अंधे व्यक्ति यह पुकारते हुए उनके पीछे चलने लगे, “दावीद-पुत्र, हम पर कृपा कीजिए!”
೨೭ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
28 जब येशु ने घर में प्रवेश किया वे अंधे भी उनके पास पहुंच गए. येशु ने उनसे प्रश्न किया, “क्या तुम्हें विश्वास है कि मुझमें यह करने का सामर्थ्य है?” उन्होंने उत्तर दिया, “जी हां, प्रभु.”
೨೮ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
29 तब येशु ने यह कहते हुए उनके नेत्रों का स्पर्श किया, “तुम्हारे विश्वास के अनुसार तुम्हारी इच्छा पूरी हो,”
೨೯ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
30 और उन्हें दृष्टि प्राप्त हो गई. येशु ने उन्हें कड़ी चेतावनी दी, “यह ध्यान रखना कि इसके विषय में किसी को मालूम न होने पाए!”
೩೦ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
31 किंतु उन्होंने जाकर सभी क्षेत्र में येशु के विषय में यह समाचार प्रसारित कर दिया.
೩೧ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
32 जब वे सब वहां से बाहर निकल रहे थे, उनके सामने एक गूंगा व्यक्ति, जो दुष्टात्मा से पीड़ित था, लाया गया.
೩೨ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
33 दुष्टात्मा के निकल जाने के बाद वह बातें करने लगा. यह देख भीड़ चकित रह गई और कहने लगी, “इससे पहले इस्राएल में ऐसा कभी नहीं देखा गया.”
೩೩ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
34 जबकि फ़रीसी कह रहे थे, “यह दुष्टात्मा का निकालना दुष्टात्मा के प्रधान की सहायता से करता है.”
೩೪ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.
35 येशु नगर-नगर और गांव-गांव की यात्रा कर रहे थे. वह उनके यहूदी सभागृहों में शिक्षा देते, स्वर्ग-राज्य के सुसमाचार का प्रचार करते तथा हर एक प्रकार के रोग और दुर्बलताओं को स्वस्थ करते जा रहे थे.
೩೫ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
36 भीड़ को देख येशु का हृदय करुणा से दुःखित हो उठा क्योंकि वे बिन चरवाहे की भेड़ों के समान व्याकुल और निराश थे.
೩೬ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
37 इस पर येशु ने अपने शिष्यों से कहा, “उपज तो बहुत है किंतु मज़दूर कम,
೩೭ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.
38 इसलिये उपज के स्वामी से विनती करो कि इस उपज के लिए मज़दूर भेज दें.”
೩೮ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.