< प्रकाशित वाक्य 8 >

1 जब मेमने ने सातवीं मोहर तोड़ी, स्वर्ग में एक समय के लिए सन्‍नाटा छा गया.
ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
2 तब मैंने उन सात स्वर्गदूतों को देखा, जो परमेश्वर की उपस्थिति में खड़े रहते हैं. उन्हें सात तुरहियां दी गईं.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.
3 सोने के धूपदान लिए हुए एक अन्य स्वर्गदूत आकर वेदी के पास खड़ा हो गया. उसे बड़ी मात्रा में धूप दी गई कि वह उसे सभी पवित्र लोगों की प्रार्थनाओं के साथ उस सोने की वेदी पर भेंट करे, जो सिंहासन के सामने है.
ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
4 स्वर्गदूत के हाथ के धूपदान में से धुआं उठता हुआ पवित्र लोगों की प्रार्थनाओं के साथ परमेश्वर के पास ऊपर पहुंच रहा था.
ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
5 तब स्वर्गदूत ने धूपदान लिया, उसे वेदी की आग से भरकर पृथ्वी पर फेंक दिया, जिससे बादलों की गर्जन, गड़गड़ाहट तथा बिजलियां कौंध उठीं और भूकंप आ गया.
ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.
6 तब वे सातों स्वर्गदूत, जिनके पास तुरहियां थी, उन्हें फूंकने के लिए तैयार हुए.
ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.
7 जब पहले स्वर्गदूत ने तुरही फूंकी तो आग और ओले उत्पन्‍न हुए, जिनमें लहू मिला हुआ था. उन्हें पृथ्वी पर फेंक दिया गया. परिणामस्वरूप एक तिहाई पृथ्वी जल उठी, एक तिहाई पेड़ भस्म हो गए तथा सारी हरी घास भी.
ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.
8 जब दूसरे स्वर्गदूत ने तुरही फूंकी तो विशाल पर्वत जैसी कोई जलती हुई वस्तु समुद्र में फेंक दी गई जिससे एक तिहाई समुद्र लहू में बदल गया.
ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.
9 इससे एक तिहाई जल जंतु नाश हो गए तथा जलयानों में से एक तिहाई जलयान भी.
ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.
10 जब तीसरे स्वर्गदूत ने तुरही फूंकी तो आकाश से एक विशालकाय तारा मशाल के समान जलता हुआ एक तिहाई नदियों तथा जल-स्रोतों पर जा गिरा.
೧೦ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
11 यह तारा अपसन्तिनॉस कहलाता है—इससे एक तिहाई जल कड़वा हो गया. जल के कड़वे हो जाने के कारण अनेक मनुष्यों की मृत्यु हो गई.
೧೧ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.
12 जब चौथे स्वर्गदूत ने तुरही फूंकी तो एक तिहाई सूर्य, एक तिहाई चंद्रमा तथा एक तिहाई तारों पर ऐसा प्रहार हुआ कि उनका एक तिहाई भाग अंधकारमय हो गया. इनमें से एक तिहाई दिन अंधकारमय हो गया, वैसे ही एक तिहाई रात भी.
೧೨ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.
13 जब मैं यह सब देख ही रहा था, मैंने ठीक अपने ऊपर मध्य हवा में उड़ते हुए एक गरुड़ को ऊंचे शब्द में यह कहते हुए सुना, “उस तुरही नाद के कारण, जो शेष तीन स्वर्गदूतों द्वारा किया जाएगा, पृथ्वी पर रहनेवालों पर धिक्कार, धिक्कार, धिक्कार!”
೧೩ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.

< प्रकाशित वाक्य 8 >