< रोमियों 13 >
1 तुममें से प्रत्येक प्रशासनिक अधिकारियों के अधीन रहे. यह इसलिये कि परमेश्वर द्वारा ठहराए अधिकारी के अलावा अन्य कोई अधिकारी नहीं है. वर्तमान अधिकारी परमेश्वर के द्वारा ही ठहराए गए हैं.
೧ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
2 इसलिये वह, जो अधिकारी का विरोध करता है, परमेश्वर के आदेश का विरोधी है और ऐसे विरोधी स्वयं अपने ऊपर दंड ले आएंगे.
೨ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
3 राजा अच्छे काम के लिए नहीं परंतु बुरे काम के लिए भय के कारण हैं. क्या तुम अधिकारियों से निर्भय रहना चाहते हो? तो वही करो, जो उचित है. इस पर तुम्हें अधिकारी की सराहना प्राप्त होगी
೩ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
4 क्योंकि अधिकारी तुम्हारे ही हित में परमेश्वर का सेवक है किंतु यदि तुम वह करते हो, जो बुरा है तो डरो क्योंकि उसके हाथ में तलवार व्यर्थ नहीं है. वह अधिकारी परमेश्वर द्वारा चुना हुआ सेवक है—कुकर्मियों के दंड के लिए प्रतिशोधी.
೪ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
5 इसलिये यह सही है कि सिर्फ दंड के भय के कारण ही नहीं परंतु अंतरात्मा के हित में भी अधीन रहा जाए.
೫ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.
6 तुम इसी कारण राज्य-कर भी चुकाते हो कि राजा परमेश्वर के जनसेवक हैं और इसी काम के लिए समर्पित हैं.
೬ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.
7 जिसे जो कुछ दिया जाना निर्धारित है, उसे वह दो: जिसे कर देना है, उसे कर दो; जिसे शुल्क, उसे शुल्क; जिनसे डरना है, उनसे डरो तथा जो सम्मान के अधिकारी हैं, उनका सम्मान करो.
೭ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
8 आपसी प्रेम के अलावा किसी के कर्ज़दार न हो. वह जो अपने पड़ोसी से प्रेम करता है, उसने व्यवस्था का पालन कर लिया
೮ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
9 क्योंकि: व्यभिचार मत करो, हत्या मत करो, चोरी मत करो, लोभ मत करो, तथा इसके अतिरिक्त यदि कोई भी अन्य आज्ञा हो तो उसका सार यही है: अपने पड़ोसी के लिए तुम्हारा प्रेम वैसा ही हो जैसा तुम्हारा स्वयं के लिए है.
೯ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
10 प्रेम पड़ोसी का बुरा नहीं करता. इसलिये प्रेम व्यवस्था की पूर्ति है.
೧೦ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
11 आवश्यक है कि तुम समय को पहचानो. तुम्हारा नींद से जाग जाने का समय आ चुका है. उस समय की तुलना में, जब हमने इस विश्वास को अपनाया था, हमारे उद्धार की पूर्ति पास है.
೧೧ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
12 रात समाप्त होने पर है. दिन का आरंभ हो रहा है. इसलिये हम अंधकार के कामों को त्याग कर ज्योति के शस्त्र धारण कर लें.
೧೨ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.
13 हमारा स्वभाव समय के अनुसार—दिन के अनुकूल हो, न कि लीला-क्रीड़ा, पियक्कड़पन, व्यभिचार, भ्रष्ट आचरण, झगड़ा तथा जलन से भरा,
೧೩ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
14 परंतु प्रभु येशु मसीह को धारण कर लो तथा शरीर की अभिलाषाओं को पूरा करने की इच्छा न करो.
೧೪ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.