< 1 राजा 17 >
1 १ तिशबी एलिय्याह जो गिलाद का निवासी था उसने अहाब से कहा, “इस्राएल का परमेश्वर यहोवा जिसके सम्मुख मैं उपस्थित रहता हूँ, उसके जीवन की शपथ इन वर्षों में मेरे बिना कहे, न तो मेंह बरसेगा, और न ओस पड़ेगी।”
೧ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
2 २ तब यहोवा का यह वचन उसके पास पहुँचा,
೨ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.
3 ३ “यहाँ से चलकर पूरब की ओर जा और करीत नामक नाले में जो यरदन के पूर्व में है छिप जा।
೩ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
4 ४ उसी नदी का पानी तू पिया कर, और मैंने कौवों को आज्ञा दी है कि वे तुझे वहाँ खिलाएँ।”
೪ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
5 ५ यहोवा का यह वचन मानकर वह यरदन के पूर्व में करीत नामक नदी में जाकर छिपा रहा।
೫ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
6 ६ और सवेरे और साँझ को कौवे उसके पास रोटी और माँस लाया करते थे और वह नदी का पानी पिया करता था।
೬ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
7 ७ कुछ दिनों के बाद उस देश में वर्षा न होने के कारण नदी सूख गई।
೭ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
8 ८ तब यहोवा का यह वचन उसके पास पहुँचा,
೮ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
9 ९ “चलकर सीदोन के सारफत नगर में जाकर वहीं रह। सुन, मैंने वहाँ की एक विधवा को तेरे खिलाने की आज्ञा दी है।”
೯ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
10 १० अतः वह वहाँ से चल दिया, और सारफत को गया; नगर के फाटक के पास पहुँचकर उसने क्या देखा कि, एक विधवा लकड़ी बीन रही है, उसको बुलाकर उसने कहा, “किसी पात्र में मेरे पीने को थोड़ा पानी ले आ।”
೧೦ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
11 ११ जब वह लेने जा रही थी, तो उसने उसे पुकारके कहा “अपने हाथ में एक टुकड़ा रोटी भी मेरे पास लेती आ।”
೧೧ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.
12 १२ उसने कहा, “तेरे परमेश्वर यहोवा के जीवन की शपथ मेरे पास एक भी रोटी नहीं है केवल घड़े में मुट्ठी भर मैदा और कुप्पी में थोड़ा सा तेल है, और मैं दो एक लकड़ी बीनकर लिए जाती हूँ कि अपने और अपने बेटे के लिये उसे पकाऊँ, और हम उसे खाएँ, फिर मर जाएँ।”
೧೨ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
13 १३ एलिय्याह ने उससे कहा, “मत डर; जाकर अपनी बात के अनुसार कर, परन्तु पहले मेरे लिये एक छोटी सी रोटी बनाकर मेरे पास ले आ, फिर इसके बाद अपने और अपने बेटे के लिये बनाना।
೧೩ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
14 १४ क्योंकि इस्राएल का परमेश्वर यहोवा यह कहता है, कि जब तक यहोवा भूमि पर मेंह न बरसाएगा तब तक न तो उस घड़े का मैदा समाप्त होगा, और न उस कुप्पी का तेल घटेगा।”
೧೪ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
15 १५ तब वह चली गई, और एलिय्याह के वचन के अनुसार किया, तब से वह और स्त्री और उसका घराना बहुत दिन तक खाते रहे।
೧೫ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.
16 १६ यहोवा के उस वचन के अनुसार जो उसने एलिय्याह के द्वारा कहा था, न तो उस घड़े का मैदा समाप्त हुआ, और न उस कुप्पी का तेल घटा।
೧೬ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
17 १७ इन बातों के बाद उस स्त्री का बेटा जो घर की स्वामिनी थी, रोगी हुआ, और उसका रोग यहाँ तक बढ़ा कि उसका साँस लेना बन्द हो गया।
೧೭ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
18 १८ तब वह एलिय्याह से कहने लगी, “हे परमेश्वर के जन! मेरा तुझ से क्या काम? क्या तू इसलिए मेरे यहाँ आया है कि मेरे बेटे की मृत्यु का कारण हो और मेरे पाप का स्मरण दिलाए?”
೧೮ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
19 १९ उसने उससे कहा “अपना बेटा मुझे दे;” तब वह उसे उसकी गोद से लेकर उस अटारी पर ले गया जहाँ वह स्वयं रहता था, और अपनी खाट पर लिटा दिया।
೧೯ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
20 २० तब उसने यहोवा को पुकारकर कहा, “हे मेरे परमेश्वर यहोवा! क्या तू इस विधवा का बेटा मार डालकर जिसके यहाँ मैं टिका हूँ, इस पर भी विपत्ति ले आया है?”
೨೦ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
21 २१ तब वह बालक पर तीन बार पसर गया और यहोवा को पुकारकर कहा, “हे मेरे परमेश्वर यहोवा! इस बालक का प्राण इसमें फिर डाल दे।”
೨೧ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.
22 २२ एलिय्याह की यह बात यहोवा ने सुन ली, और बालक का प्राण उसमें फिर आ गया और वह जी उठा।
೨೨ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.
23 २३ तब एलिय्याह बालक को अटारी पर से नीचे घर में ले गया, और एलिय्याह ने यह कहकर उसकी माता के हाथ में सौंप दिया, “देख तेरा बेटा जीवित है।”
೨೩ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.
24 २४ स्त्री ने एलिय्याह से कहा, “अब मुझे निश्चय हो गया है कि तू परमेश्वर का जन है, और यहोवा का जो वचन तेरे मुँह से निकलता है, वह सच होता है।”
೨೪ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.