< 1 राजा 18 >
1 १ बहुत दिनों के बाद, तीसरे वर्ष में यहोवा का यह वचन एलिय्याह के पास पहुँचा, “जाकर अपने आपको अहाब को दिखा, और मैं भूमि पर मेंह बरसा दूँगा।”
೧ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.
2 २ तब एलिय्याह अपने आपको अहाब को दिखाने गया। उस समय सामरिया में अकाल भारी था।
೨ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
3 ३ अहाब ने ओबद्याह को जो उसके घराने का दीवान था बुलवाया।
೩ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.
4 ४ ओबद्याह तो यहोवा का भय यहाँ तक मानता था कि जब ईजेबेल यहोवा के नबियों को नाश करती थी, तब ओबद्याह ने एक सौ नबियों को लेकर पचास-पचास करके गुफाओं में छिपा रखा; और अन्न जल देकर उनका पालन-पोषण करता रहा।
೪ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
5 ५ और अहाब ने ओबद्याह से कहा, “देश में जल के सब सोतों और सब नदियों के पास जा, कदाचित् इतनी घास मिले कि हम घोड़ों और खच्चरों को जीवित बचा सके, और हमारे सब पशु न मर जाएँ।”
೫ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
6 ६ अतः उन्होंने आपस में देश बाँटा कि उसमें होकर चलें; एक ओर अहाब और दूसरी ओर ओबद्याह चला।
೬ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.
7 ७ ओबद्याह मार्ग में था, कि एलिय्याह उसको मिला; उसे पहचानकर वह मुँह के बल गिरा, और कहा, “हे मेरे प्रभु एलिय्याह, क्या तू है?”
೭ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.
8 ८ उसने कहा “हाँ मैं ही हूँ: जाकर अपने स्वामी से कह, ‘एलिय्याह मिला है।’”
೮ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.
9 ९ उसने कहा, “मैंने ऐसा क्या पाप किया है कि तू मुझे मरवा डालने के लिये अहाब के हाथ करना चाहता है?
೯ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?
10 १० तेरे परमेश्वर यहोवा के जीवन की शपथ कोई ऐसी जाति या राज्य नहीं, जिसमें मेरे स्वामी ने तुझे ढूँढ़ने को न भेजा हो, और जब उन लोगों ने कहा, ‘वह यहाँ नहीं है,’ तब उसने उस राज्य या जाति को इसकी शपथ खिलाई कि वह नहीं मिला।
೧೦ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.
11 ११ और अब तू कहता है, ‘जाकर अपने स्वामी से कह, कि एलिय्याह यहाँ है।’
೧೧ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?
12 १२ फिर ज्यों ही मैं तेरे पास से चला जाऊँगा, त्यों ही यहोवा का आत्मा तुझे न जाने कहाँ उठा ले जाएगा, अतः जब मैं जाकर अहाब को बताऊँगा, और तू उसे न मिलेगा, तब वह मुझे मार डालेगा: परन्तु मैं तेरा दास अपने लड़कपन से यहोवा का भय मानता आया हूँ!
೧೨ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
13 १३ क्या मेरे प्रभु को यह नहीं बताया गया, कि जब ईजेबेल यहोवा के नबियों को घात करती थी तब मैंने क्या किया? कि यहोवा के नबियों में से एक सौ लेकर पचास-पचास करके गुफाओं में छिपा रखा, और उन्हें अन्न जल देकर पालता रहा।
೧೩ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
14 १४ फिर अब तू कहता है, ‘जाकर अपने स्वामी से कह, कि एलिय्याह मिला है!’ तब वह मुझे घात करेगा।”
೧೪ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.
15 १५ एलिय्याह ने कहा, “सेनाओं का यहोवा जिसके सामने मैं रहता हूँ, उसके जीवन की शपथ आज मैं अपने आपको उसे दिखाऊँगा।”
೧೫ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.
16 १६ तब ओबद्याह अहाब से मिलने गया, और उसको बता दिया; अतः अहाब एलिय्याह से मिलने चला।
೧೬ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ
17 १७ एलिय्याह को देखते ही अहाब ने कहा, “हे इस्राएल के सतानेवाले क्या तू ही है?”
೧೭ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.
18 १८ उसने कहा, “मैंने इस्राएल को कष्ट नहीं दिया, परन्तु तू ही ने और तेरे पिता के घराने ने दिया है; क्योंकि तुम यहोवा की आज्ञाओं को टालकर बाल देवताओं की उपासना करने लगे।
೧೮ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
19 १९ अब दूत भेजकर सारे इस्राएल को और बाल के साढ़े चार सौ नबियों और अशेरा के चार सौ नबियों को जो ईजेबेल की मेज पर खाते हैं, मेरे पास कर्मेल पर्वत पर इकट्ठा कर ले।”
೧೯ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
20 २० तब अहाब ने सारे इस्राएलियों को बुला भेजा और नबियों को कर्मेल पर्वत पर इकट्ठा किया।
೨೦ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
21 २१ और एलिय्याह सब लोगों के पास आकर कहने लगा, “तुम कब तक दो विचारों में लटके रहोगे, यदि यहोवा परमेश्वर हो, तो उसके पीछे हो लो; और यदि बाल हो, तो उसके पीछे हो लो।” लोगों ने उसके उत्तर में एक भी बात न कही।
೨೧ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
22 २२ तब एलिय्याह ने लोगों से कहा, “यहोवा के नबियों में से केवल मैं ही रह गया हूँ; और बाल के नबी साढ़े चार सौ मनुष्य हैं।
೨೨ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.
23 २३ इसलिए दो बछड़े लाकर हमें दिए जाएँ, और वे एक अपने लिये चुनकर उसे टुकड़े-टुकड़े काटकर लकड़ी पर रख दें, और कुछ आग न लगाएँ; और मैं दूसरे बछड़े को तैयार करके लकड़ी पर रखूँगा, और कुछ आग न लगाऊँगा।
೨೩ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
24 २४ तब तुम अपने देवता से प्रार्थना करना, और मैं यहोवा से प्रार्थना करूँगा, और जो आग गिराकर उत्तर दे वही परमेश्वर ठहरे।” तब सब लोग बोल उठे, “अच्छी बात।”
೨೪ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.
25 २५ और एलिय्याह ने बाल के नबियों से कहा, “पहले तुम एक बछड़ा चुनकर तैयार कर लो, क्योंकि तुम तो बहुत हो; तब अपने देवता से प्रार्थना करना, परन्तु आग न लगाना।”
೨೫ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.
26 २६ तब उन्होंने उस बछड़े को जो उन्हें दिया गया था लेकर तैयार किया, और भोर से लेकर दोपहर तक वह यह कहकर बाल से प्रार्थना करते रहे, “हे बाल हमारी सुन, हे बाल हमारी सुन!” परन्तु न कोई शब्द और न कोई उत्तर देनेवाला हुआ। तब वे अपनी बनाई हुई वेदी पर उछलने कूदने लगे।
೨೬ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
27 २७ दोपहर को एलिय्याह ने यह कहकर उनका उपहास किया, “ऊँचे शब्द से पुकारो, वह तो देवता है; वह तो ध्यान लगाए होगा, या कहीं गया होगा या यात्रा में होगा, या हो सकता है कि सोता हो और उसे जगाना चाहिए।”
೨೭ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
28 २८ और उन्होंने बड़े शब्द से पुकार-पुकारके अपनी रीति के अनुसार छुरियों और बर्छियों से अपने-अपने को यहाँ तक घायल किया कि लहू लुहान हो गए।
೨೮ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.
29 २९ वे दोपहर भर ही क्या, वरन् भेंट चढ़ाने के समय तक नबूवत करते रहे, परन्तु कोई शब्द सुन न पड़ा; और न तो किसी ने उत्तर दिया और न कान लगाया।
೨೯ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
30 ३० तब एलिय्याह ने सब लोगों से कहा, “मेरे निकट आओ;” और सब लोग उसके निकट आए। तब उसने यहोवा की वेदी की जो गिराई गई थी मरम्मत की।
೩೦ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.
31 ३१ फिर एलिय्याह ने याकूब के पुत्रों की गिनती के अनुसार जिसके पास यहोवा का यह वचन आया था, “तेरा नाम इस्राएल होगा,” बारह पत्थर छाँटे,
೩೧ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
32 ३२ और उन पत्थरों से यहोवा के नाम की एक वेदी बनाई; और उसके चारों ओर इतना बड़ा एक गड्ढा खोद दिया, कि उसमें दो सआ बीज समा सके।
೩೨ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.
33 ३३ तब उसने वेदी पर लकड़ी को सजाया, और बछड़े को टुकड़े-टुकड़े काटकर लकड़ी पर रख दिया, और कहा, “चार घड़े पानी भर के होमबलि, पशु और लकड़ी पर उण्डेल दो।”
೩೩ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.
34 ३४ तब उसने कहा, “दूसरी बार वैसा ही करो;” तब लोगों ने दूसरी बार वैसा ही किया। फिर उसने कहा, “तीसरी बार करो;” तब लोगों ने तीसरी बार भी वैसा ही किया।
೩೪ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
35 ३५ और जल वेदी के चारों ओर बह गया, और गड्ढे को भी उसने जल से भर दिया।
೩೫ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
36 ३६ फिर भेंट चढ़ाने के समय एलिय्याह नबी समीप जाकर कहने लगा, “हे अब्राहम, इसहाक और इस्राएल के परमेश्वर यहोवा! आज यह प्रगट कर कि इस्राएल में तू ही परमेश्वर है, और मैं तेरा दास हूँ, और मैंने ये सब काम तुझ से वचन पाकर किए हैं।
೩೬ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
37 ३७ हे यहोवा! मेरी सुन, मेरी सुन, कि ये लोग जान लें कि हे यहोवा, तू ही परमेश्वर है, और तू ही उनका मन लौटा लेता है।”
೩೭ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.
38 ३८ तब यहोवा की आग आकाश से प्रगट हुई और होमबलि को लकड़ी और पत्थरों और धूलि समेत भस्म कर दिया, और गड्ढे में का जल भी सूखा दिया।
೩೮ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
39 ३९ यह देख सब लोग मुँह के बल गिरकर बोल उठे, “यहोवा ही परमेश्वर है, यहोवा ही परमेश्वर है;”
೩೯ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
40 ४० एलिय्याह ने उनसे कहा, “बाल के नबियों को पकड़ लो, उनमें से एक भी छूटने न पाए;” तब उन्होंने उनको पकड़ लिया, और एलिय्याह ने उन्हें नीचे कीशोन के नाले में ले जाकर मार डाला।
೪೦ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
41 ४१ फिर एलिय्याह ने अहाब से कहा, “उठकर खा पी, क्योंकि भारी वर्षा की सनसनाहट सुन पड़ती है।”
೪೧ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.
42 ४२ तब अहाब खाने-पीने चला गया, और एलिय्याह कर्मेल की चोटी पर चढ़ गया, और भूमि पर गिरकर अपना मुँह घुटनों के बीच किया,
೪೨ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
43 ४३ और उसने अपने सेवक से कहा, “चढ़कर समुद्र की ओर दृष्टि करके देख,” तब उसने चढ़कर देखा और लौटकर कहा, “कुछ नहीं दिखता।” एलिय्याह ने कहा, “फिर सात बार जा।”
೪೩ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
44 ४४ सातवीं बार उसने कहा, “देख समुद्र में से मनुष्य का हाथ सा एक छोटा बादल उठ रहा है।” एलिय्याह ने कहा, “अहाब के पास जाकर कह, ‘रथ जुतवाकर नीचे जा, कहीं ऐसा न हो कि तू वर्षा के कारण रुक जाए।’”
೪೪ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.
45 ४५ थोड़ी ही देर में आकाश वायु से उड़ाई हुई घटाओं, और आँधी से काला हो गया और भारी वर्षा होने लगी; और अहाब सवार होकर यिज्रेल को चला।
೪೫ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
46 ४६ तब यहोवा की शक्ति एलिय्याह पर ऐसी हुई; कि वह कमर बाँधकर अहाब के आगे-आगे यिज्रेल तक दौड़ता चला गया।
೪೬ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.