< 2 पतरस 2 >
1 १ जिस प्रकार उन लोगों में झूठे भविष्यद्वक्ता थे उसी प्रकार तुम में भी झूठे उपदेशक होंगे, जो नाश करनेवाले पाखण्ड का उद्घाटन छिप छिपकर करेंगे और उस प्रभु का जिसने उन्हें मोल लिया है इन्कार करेंगे और अपने आपको शीघ्र विनाश में डाल देंगे।
೧ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 २ और बहुत सारे उनके समान लुचपन करेंगे, जिनके कारण सत्य के मार्ग की निन्दा की जाएगी।
೨ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
3 ३ और वे लोभ के लिये बातें गढ़कर तुम्हें अपने लाभ का कारण बनाएँगे, और जो दण्ड की आज्ञा उन पर पहले से हो चुकी है, उसके आने में कुछ भी देर नहीं, और उनका विनाश उँघता नहीं।
೩ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
4 ४ क्योंकि जब परमेश्वर ने उन दूतों को जिन्होंने पाप किया नहीं छोड़ा, पर नरक में भेजकर अंधेरे कुण्डों में डाल दिया, ताकि न्याय के दिन तक बन्दी रहें। (Tartaroō )
೪ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. (Tartaroō )
5 ५ और प्राचीन युग के संसार को भी न छोड़ा, वरन् भक्तिहीन संसार पर महा जल-प्रलय भेजकर धार्मिकता के प्रचारक नूह समेत आठ व्यक्तियों को बचा लिया;
೫ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
6 ६ और सदोम और गमोरा के नगरों को विनाश का ऐसा दण्ड दिया, कि उन्हें भस्म करके राख में मिला दिया ताकि वे आनेवाले भक्तिहीन लोगों की शिक्षा के लिये एक दृष्टान्त बनें
೬ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7 ७ और धर्मी लूत को जो अधर्मियों के अशुद्ध चाल-चलन से बहुत दुःखी था छुटकारा दिया।
೭ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
8 ८ (क्योंकि वह धर्मी उनके बीच में रहते हुए, और उनके अधर्म के कामों को देख देखकर, और सुन सुनकर, हर दिन अपने सच्चे मन को पीड़ित करता था)।
೮ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
9 ९ तो प्रभु के भक्तों को परीक्षा में से निकाल लेना और अधर्मियों को न्याय के दिन तक दण्ड की दशा में रखना भी जानता है।
೯ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
10 १० विशेष करके उन्हें जो अशुद्ध अभिलाषाओं के पीछे शरीर के अनुसार चलते, और प्रभुता को तुच्छ जानते हैं वे ढीठ, और हठी हैं, और ऊँचे पदवालों को बुरा-भला कहने से नहीं डरते।
೧೦ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
11 ११ तो भी स्वर्गदूत जो शक्ति और सामर्थ्य में उनसे बड़े हैं, प्रभु के सामने उन्हें बुरा-भला कहकर दोष नहीं लगाते।
೧೧ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
12 १२ पर ये लोग निर्बुद्धि पशुओं ही के तुल्य हैं, जो पकड़े जाने और नाश होने के लिये उत्पन्न हुए हैं; और जिन बातों को जानते ही नहीं, उनके विषय में औरों को बुरा-भला कहते हैं, वे अपनी सड़ाहट में आप ही सड़ जाएँगे।
೧೨ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
13 १३ औरों का बुरा करने के बदले उन्हीं का बुरा होगा; उन्हें दिन दोपहर सुख-विलास करना भला लगता है; यह कलंक और दोष है जब वे तुम्हारे साथ खाते पीते हैं, तो अपनी ओर से प्रेम भोज करके भोग-विलास करते हैं।
೧೩ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
14 १४ उनकी आँखों में व्यभिचार बसा हुआ है, और वे पाप किए बिना रुक नहीं सकते; वे चंचल मनवालों को फुसला लेते हैं; उनके मन को लोभ करने का अभ्यास हो गया है, वे सन्ताप की सन्तान हैं।
೧೪ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
15 १५ वे सीधे मार्ग को छोड़कर भटक गए हैं, और बओर के पुत्र बिलाम के मार्ग पर हो लिए हैं; जिसने अधर्म की मजदूरी को प्रिय जाना;
೧೫ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
16 १६ पर उसके अपराध के विषय में उलाहना दिया गया, यहाँ तक कि अबोल गदही ने मनुष्य की बोली से उस भविष्यद्वक्ता को उसके बावलेपन से रोका।
೧೬ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
17 १७ ये लोग सूखे कुएँ, और आँधी के उड़ाए हुए बादल हैं, उनके लिये अनन्त अंधकार ठहराया गया है। ()
೧೭ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. ()
18 १८ वे व्यर्थ घमण्ड की बातें कर करके लुचपन के कामों के द्वारा, उन लोगों को शारीरिक अभिलाषाओं में फँसा लेते हैं, जो भटके हुओं में से अभी निकल ही रहे हैं।
೧೮ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19 १९ वे उन्हें स्वतंत्र होने की प्रतिज्ञा तो देते हैं, पर आप ही सड़ाहट के दास हैं, क्योंकि जो व्यक्ति जिससे हार गया है, वह उसका दास बन जाता है।
೧೯ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
20 २० और जब वे प्रभु और उद्धारकर्ता यीशु मसीह की पहचान के द्वारा संसार की नाना प्रकार की अशुद्धता से बच निकले, और फिर उनमें फँसकर हार गए, तो उनकी पिछली दशा पहली से भी बुरी हो गई है।
೨೦ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
21 २१ क्योंकि धार्मिकता के मार्ग का न जानना ही उनके लिये इससे भला होता, कि उसे जानकर, उस पवित्र आज्ञा से फिर जाते, जो उन्हें सौंपी गई थी।
೨೧ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
22 २२ उन पर यह कहावत ठीक बैठती है, कि कुत्ता अपनी छाँट की ओर और नहलाई हुई सूअरनी कीचड़ में लोटने के लिये फिर चली जाती है।
೨೨“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.