< 2 शमूएल 1 >
1 १ शाऊल के मरने के बाद, जब दाऊद अमालेकियों को मारकर लौटा, और दाऊद को सिकलग में रहते हुए दो दिन हो गए,
೧ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.
2 २ तब तीसरे दिन ऐसा हुआ कि शाऊल की छावनी में से एक पुरुष कपड़े फाड़े सिर पर धूल डाले हुए आया। जब वह दाऊद के पास पहुँचा, तब भूमि पर गिरा और दण्डवत् किया।
೨ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
3 ३ दाऊद ने उससे पूछा, “तू कहाँ से आया है?” उसने उससे कहा, “मैं इस्राएली छावनी में से बचकर आया हूँ।”
೩ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.
4 ४ दाऊद ने उससे पूछा, “वहाँ क्या बात हुई? मुझे बता।” उसने कहा, “यह, कि लोग रणभूमि छोड़कर भाग गए, और बहुत लोग मारे गए; और शाऊल और उसका पुत्र योनातान भी मारे गए हैं।”
೪ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.
5 ५ दाऊद ने उस समाचार देनेवाले जवान से पूछा, “तू कैसे जानता है कि शाऊल और उसका पुत्र योनातान मर गए?”
೫ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,
6 ६ समाचार देनेवाले जवान ने कहा, “संयोग से मैं गिलबो पहाड़ पर था; तो क्या देखा, कि शाऊल अपने भाले की टेक लगाए हुए है; फिर मैंने यह भी देखा कि उसका पीछा किए हुए रथ और सवार बड़े वेग से दौड़े आ रहे हैं।
೬“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
7 ७ उसने पीछे फिरकर मुझे देखा, और मुझे पुकारा। मैंने कहा, ‘क्या आज्ञा?’
೭ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.
8 ८ उसने मुझसे पूछा, ‘तू कौन है?’ मैंने उससे कहा, ‘मैं तो अमालेकी हूँ।’
೮ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.
9 ९ उसने मुझसे कहा, ‘मेरे पास खड़ा होकर मुझे मार डाल; क्योंकि मेरा सिर तो घूमा जाता है, परन्तु प्राण नहीं निकलता।’
೯ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.
10 १० तब मैंने यह निश्चय जान लिया, कि वह गिर जाने के पश्चात् नहीं बच सकता, मैंने उसके पास खड़े होकर उसे मार डाला; और मैं उसके सिर का मुकुट और उसके हाथ का कंगन लेकर यहाँ अपने स्वामी के पास आया हूँ।”
೧೦ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.
11 ११ तब दाऊद ने दुःखी होकर अपने कपड़े पकड़कर फाड़े; और जितने पुरुष उसके संग थे सब ने वैसा ही किया;
೧೧ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
12 १२ और वे शाऊल, और उसके पुत्र योनातान, और यहोवा की प्रजा, और इस्राएल के घराने के लिये छाती पीटने और रोने लगे, और साँझ तक कुछ न खाया, इस कारण कि वे तलवार से मारे गए थे।
೧೨ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
13 १३ फिर दाऊद ने उस समाचार देनेवाले जवान से पूछा, “तू कहाँ का है?” उसने कहा, “मैं तो परदेशी का बेटा अर्थात् अमालेकी हूँ।”
೧೩ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.
14 १४ दाऊद ने उससे कहा, “तू यहोवा के अभिषिक्त को नष्ट करने के लिये हाथ बढ़ाने से क्यों नहीं डरा?”
೧೪ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ
15 १५ तब दाऊद ने एक जवान को बुलाकर कहा, “निकट जाकर उस पर प्रहार कर।” तब उसने उसे ऐसा मारा कि वह मर गया।
೧೫ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.
16 १६ और दाऊद ने उससे कहा, “तेरा खून तेरे ही सिर पर पड़े; क्योंकि तूने यह कहकर कि मैं ही ने यहोवा के अभिषिक्त को मार डाला, अपने मुँह से अपने ही विरुद्ध साक्षी दी है।”
೧೬ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
17 १७ तब दाऊद ने शाऊल और उसके पुत्र योनातान के विषय यह विलापगीत बनाया,
೧೭ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,
18 १८ और यहूदियों को यह धनुष नामक गीत सिखाने की आज्ञा दी; यह याशार नामक पुस्तक में लिखा हुआ है:
೧೮ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.
19 १९ “हे इस्राएल, तेरा शिरोमणि तेरे ऊँचे स्थान पर मारा गया। हाय, शूरवीर कैसे गिर पड़े हैं!
೧೯“ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
20 २० गत में यह न बताओ, और न अश्कलोन की सड़कों में प्रचार करना; न हो कि पलिश्ती स्त्रियाँ आनन्दित हों, न हो कि खतनारहित लोगों की बेटियाँ गर्व करने लगें।
೨೦ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.
21 २१ “हे गिलबो पहाड़ों, तुम पर न ओस पड़े, और न वर्षा हो, और न भेंट के योग्य उपजवाले खेत पाए जाएँ! क्योंकि वहाँ शूरवीरों की ढालें अशुद्ध हो गईं। और शाऊल की ढाल बिना तेल लगाए रह गई।
೨೧ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
22 २२ “जूझे हुओं के लहू बहाने से, और शूरवीरों की चर्बी खाने से, योनातान का धनुष न लौटता था, और न शाऊल की तलवार छूछी फिर आती थी।
೨೨ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
23 २३ “शाऊल और योनातान जीवनकाल में तो प्रिय और मनभाऊ थे, और अपनी मृत्यु के समय अलग न हुए; वे उकाब से भी वेग से चलनेवाले, और सिंह से भी अधिक पराक्रमी थे।
೨೩ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
24 २४ “हे इस्राएली स्त्रियों, शाऊल के लिये रोओ, वह तो तुम्हें लाल रंग के वस्त्र पहनाकर सुख देता, और तुम्हारे वस्त्रों के ऊपर सोने के गहने पहनाता था।
೨೪ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?
25 २५ “हाय, युद्ध के बीच शूरवीर कैसे काम आए! हे योनातान, हे ऊँचे स्थानों पर जूझे हुए,
೨೫ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
26 २६ हे मेरे भाई योनातान, मैं तेरे कारण दुःखित हूँ; तू मुझे बहुत मनभाऊ जान पड़ता था; तेरा प्रेम मुझ पर अद्भुत, वरन् स्त्रियों के प्रेम से भी बढ़कर था।
೨೬ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
27 २७ “हाय, शूरवीर कैसे गिर गए, और युद्ध के हथियार कैसे नष्ट हो गए हैं!”
೨೭ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”