< व्यवस्था विवरण 21 >
1 १ “यदि उस देश के मैदान में जो तेरा परमेश्वर यहोवा तुझे देता है किसी मारे हुए का शव पड़ा हुआ मिले, और उसको किसने मार डाला है यह पता न चले,
೧ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
2 २ तो तेरे पुरनिये और न्यायी निकलकर उस शव के चारों ओर के एक-एक नगर की दूरी को नापें;
೨ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.
3 ३ तब जो नगर उस शव के सबसे निकट ठहरे, उसके पुरनिये एक ऐसी बछिया ले ले, जिससे कुछ काम न लिया गया हो, और जिस पर जूआ कभी न रखा गया हो।
೩ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.
4 ४ तब उस नगर के पुरनिये उस बछिया को एक बारहमासी नदी की ऐसी तराई में जो न जोती और न बोई गई हो ले जाएँ, और उसी तराई में उस बछिया का गला तोड़ दें।
೪ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
5 ५ और लेवीय याजक भी निकट आएँ, क्योंकि तेरे परमेश्वर यहोवा ने उनको चुन लिया है कि उसकी सेवा टहल करें और उसके नाम से आशीर्वाद दिया करें, और उनके कहने के अनुसार हर एक झगड़े और मारपीट के मुकद्दमे का निर्णय हो।
೫ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
6 ६ फिर जो नगर उस शव के सबसे निकट ठहरे, उसके सब पुरनिए उस बछिया के ऊपर जिसका गला तराई में तोड़ा गया हो अपने-अपने हाथ धोकर कहें,
೬ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
7 ७ ‘यह खून हमने नहीं किया, और न यह काम हमारी आँखों के सामने हुआ है।
೭“ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
8 ८ इसलिए, हे यहोवा, अपनी छुड़ाई हुई इस्राएली प्रजा का पाप ढाँपकर निर्दोष खून का पाप अपनी इस्राएली प्रजा के सिर पर से उतार।’ तब उस खून के दोष से उनको क्षमा कर दिया जाएगा।
೮ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
9 ९ इस प्रकार वह काम करके जो यहोवा की दृष्टि में ठीक है तू निर्दोष के खून का दोष अपने मध्य में से दूर करना।
೯ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.
10 १० “जब तू अपने शत्रुओं से युद्ध करने को जाए, और तेरा परमेश्वर यहोवा उन्हें तेरे हाथ में कर दे, और तू उन्हें बन्दी बना ले,
೧೦ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.
11 ११ तब यदि तू बन्दियों में किसी सुन्दर स्त्री को देखकर उस पर मोहित हो जाए, और उससे ब्याह कर लेना चाहे,
೧೧ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,
12 १२ तो उसे अपने घर के भीतर ले आना, और वह अपना सिर मुँड़ाएँ, नाखून कटाएँ,
೧೨ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.
13 १३ और अपने बन्धन के वस्त्र उतारकर तेरे घर में महीने भर रहकर अपने माता पिता के लिये विलाप करती रहे; उसके बाद तू उसके पास जाना, और तू उसका पति और वह तेरी पत्नी बने।
೧೩ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
14 १४ फिर यदि वह तुझको अच्छी न लगे, तो जहाँ वह जाना चाहे वहाँ उसे जाने देना; उसको रुपया लेकर कहीं न बेचना, और तेरा उससे शारीरिक सम्बंध था, इस कारण उससे दासी के समान व्यवहार न करना।
೧೪ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
15 १५ “यदि किसी पुरुष की दो पत्नियाँ हों, और उसे एक प्रिय और दूसरी अप्रिय हो, और प्रिया और अप्रिय दोनों स्त्रियाँ बेटे जनें, परन्तु जेठा अप्रिय का हो,
೧೫ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,
16 १६ तो जब वह अपने पुत्रों को अपनी सम्पत्ति का बँटवारा करे, तब यदि अप्रिय का बेटा जो सचमुच जेठा है यदि जीवित हो, तो वह प्रिया के बेटे को जेठांस न दे सकेगा;
೧೬ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
17 १७ वह यह जानकर कि अप्रिय का बेटा मेरे पौरूष का पहला फल है, और जेठे का अधिकार उसी का है, उसी को अपनी सारी सम्पत्ति में से दो भाग देकर जेठांसी माने।
೧೭ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
18 १८ “यदि किसी का हठीला और विद्रोही बेटा हो, जो अपने माता-पिता की बात न माने, किन्तु ताड़ना देने पर भी उनकी न सुने,
೧೮ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
19 १९ तो उसके माता-पिता उसे पकड़कर अपने नगर से बाहर फाटक के निकट नगर के पुरनियों के पास ले जाएँ,
೧೯ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,
20 २० और वे नगर के पुरनियों से कहें, ‘हमारा यह बेटा हठीला और दंगैत है, यह हमारी नहीं सुनता; यह उड़ाऊ और पियक्कड़ है।’
೨೦ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
21 २१ तब उस नगर के सब पुरुष उसको पथराव करके मार डालें, इस रीति से तू अपने मध्य में से ऐसी बुराई को दूर करना, तब सारे इस्राएली सुनकर भय खाएँगे।
೨೧ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
22 २२ “फिर यदि किसी से प्राणदण्ड के योग्य कोई पाप हुआ हो जिससे वह मार डाला जाए, और तू उसके शव को वृक्ष पर लटका दे,
೨೨ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,
23 २३ तो वह शव रात को वृक्ष पर टँगा न रहे, अवश्य उसी दिन उसे मिट्टी देना, क्योंकि जो लटकाया गया हो वह परमेश्वर की ओर से श्रापित ठहरता है; इसलिए जो देश तेरा परमेश्वर यहोवा तेरा भाग करके देता है उस भूमि को अशुद्ध न करना।
೨೩ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.