< व्यवस्था विवरण 25 >
1 १ “यदि मनुष्यों के बीच कोई झगड़ा हो, और वे न्याय करवाने के लिये न्यायियों के पास जाएँ, और वे उनका न्याय करें, तो निर्दोष को निर्दोष और दोषी को दोषी ठहराएँ।
೧ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.
2 २ और यदि दोषी मार खाने के योग्य ठहरे, तो न्यायी उसको गिरवाकर अपने सामने जैसा उसका दोष हो उसके अनुसार कोड़े गिनकर लगवाए।
೨ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
3 ३ वह उसे चालीस कोड़े तक लगवा सकता है, इससे अधिक नहीं लगवा सकता; ऐसा न हो कि इससे अधिक बहुत मार खिलवाने से तेरा भाई तेरी दृष्टि में तुच्छ ठहरे।
೩ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.
4 ४ “दाँवते समय चलते हुए बैल का मुँह न बाँधना।
೪ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.
5 ५ “जब कई भाई संग रहते हों, और उनमें से एक निपुत्र मर जाए, तो उसकी स्त्री का ब्याह परगोत्री से न किया जाए; उसके पति का भाई उसके पास जाकर उसे अपनी पत्नी कर ले, और उससे पति के भाई का धर्म पालन करे।
೫ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
6 ६ और जो पहला बेटा उस स्त्री से उत्पन्न हो वह उस मरे हुए भाई के नाम का ठहरे, जिससे कि उसका नाम इस्राएल में से मिट न जाए।
೬ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.
7 ७ यदि उस स्त्री के पति के भाई को उससे विवाह करना न भाए, तो वह स्त्री नगर के फाटक पर वृद्ध लोगों के पास जाकर कहे, ‘मेरे पति के भाई ने अपने भाई का नाम इस्राएल में बनाए रखने से मना कर दिया है, और मुझसे पति के भाई का धर्म पालन करना नहीं चाहता।’
೭ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
8 ८ तब उस नगर के वृद्ध लोग उस पुरुष को बुलवाकर उसको समझाएँ; और यदि वह अपनी बात पर अड़ा रहे, और कहे, ‘मुझे इससे विवाह करना नहीं भावता,’
೮ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,
9 ९ तो उसके भाई की पत्नी उन वृद्ध लोगों के सामने उसके पास जाकर उसके पाँव से जूती उतारे, और उसके मुँह पर थूक दे; और कहे, ‘जो पुरुष अपने भाई के वंश को चलाना न चाहे उससे इसी प्रकार व्यवहार किया जाएगा।’
೯ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.
10 १० तब इस्राएल में उस पुरुष का यह नाम पड़ेगा, अर्थात् जूती उतारे हुए पुरुष का घराना।
೧೦ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.
11 ११ “यदि दो पुरुष आपस में मारपीट करते हों, और उनमें से एक की पत्नी अपने पति को मारनेवाले के हाथ से छुड़ाने के लिये पास जाए, और अपना हाथ बढ़ाकर उसके गुप्त अंग को पकड़े,
೧೧ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,
12 १२ तो उस स्त्री का हाथ काट डालना; उस पर तरस न खाना।
೧೨ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.
13 १३ “अपनी थैली में भाँति-भाँति के अर्थात् घटती-बढ़ती बटखरे न रखना।
೧೩ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
14 १४ अपने घर में भाँति-भाँति के, अर्थात् घटती-बढ़ती नपुए न रखना।
೧೪ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು.
15 १५ तेरे बटखरे और नपुए पूरे-पूरे और धर्म के हों; इसलिए कि जो देश तेरा परमेश्वर यहोवा तुझे देता है उसमें तेरी आयु बहुत हो।
೧೫ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
16 १६ क्योंकि ऐसे कामों में जितने कुटिलता करते हैं वे सब तेरे परमेश्वर यहोवा की दृष्टि में घृणित हैं।
೧೬ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.
17 १७ “स्मरण रख कि जब तू मिस्र से निकलकर आ रहा था तब अमालेक ने तुझ से मार्ग में क्या किया,
೧೭ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.
18 १८ अर्थात् उनको परमेश्वर का भय न था; इस कारण उसने जब तू मार्ग में थका-माँदा था, तब तुझ पर चढ़ाई करके जितने निर्बल होने के कारण सबसे पीछे थे उन सभी को मारा।
೧೮ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.
19 १९ इसलिए जब तेरा परमेश्वर यहोवा उस देश में, जो वह तेरा भाग करके तेरे अधिकार में कर देता है, तुझे चारों ओर के सब शत्रुओं से विश्राम दे, तब अमालेक का नाम धरती पर से मिटा डालना; और तुम इस बात को न भूलना।
೧೯ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.