< निर्गमन 19 >

1 इस्राएलियों को मिस्र देश से निकले हुए जिस दिन तीन महीने बीत चुके, उसी दिन वे सीनै के जंगल में आए।
ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
2 और जब वे रपीदीम से कूच करके सीनै के जंगल में आए, तब उन्होंने जंगल में डेरे खड़े किए; और वहीं पर्वत के आगे इस्राएलियों ने छावनी डाली।
ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
3 तब मूसा पर्वत पर परमेश्वर के पास चढ़ गया, और यहोवा ने पर्वत पर से उसको पुकारकर कहा, “याकूब के घराने से ऐसा कह, और इस्राएलियों को मेरा यह वचन सुना,
ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
4 ‘तुम ने देखा है कि मैंने मिस्रियों से क्या-क्या किया; तुम को मानो उकाब पक्षी के पंखों पर चढ़ाकर अपने पास ले आया हूँ।
‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
5 इसलिए अब यदि तुम निश्चय मेरी मानोगे, और मेरी वाचा का पालन करोगे, तो सब लोगों में से तुम ही मेरा निज धन ठहरोगे; समस्त पृथ्वी तो मेरी है।
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
6 और तुम मेरी दृष्टि में याजकों का राज्य और पवित्र जाति ठहरोगे।’ जो बातें तुझे इस्राएलियों से कहनी हैं वे ये ही हैं।”
ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
7 तब मूसा ने आकर लोगों के पुरनियों को बुलवाया, और ये सब बातें, जिनके कहने की आज्ञा यहोवा ने उसे दी थी, उनको समझा दीं।
ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
8 और सब लोग मिलकर बोल उठे, “जो कुछ यहोवा ने कहा है वह सब हम नित करेंगे।” लोगों की यह बातें मूसा ने यहोवा को सुनाईं।
ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
9 तब यहोवा ने मूसा से कहा, “सुन, मैं बादल के अंधियारे में होकर तेरे पास आता हूँ, इसलिए कि जब मैं तुझ से बातें करूँ तब वे लोग सुनें, और सदा तेरा विश्वास करें।” और मूसा ने यहोवा से लोगों की बातों का वर्णन किया।
ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
10 १० तब यहोवा ने मूसा से कहा, “लोगों के पास जा और उन्हें आज और कल पवित्र करना, और वे अपने वस्त्र धो लें,
೧೦ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
11 ११ और वे तीसरे दिन तक तैयार हो जाएँ; क्योंकि तीसरे दिन यहोवा सब लोगों के देखते सीनै पर्वत पर उतर आएगा।
೧೧ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
12 १२ और तू लोगों के लिये चारों ओर बाड़ा बाँध देना, और उनसे कहना, ‘तुम सचेत रहो कि पर्वत पर न चढ़ो और उसकी सीमा को भी न छूओ; और जो कोई पहाड़ को छूए वह निश्चय मार डाला जाए।
೧೨ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
13 १३ उसको कोई हाथ से न छूए, जो छूए उस पर पथराव किया जाए, या उसे तीर से छेदा जाए; चाहे पशु हो चाहे मनुष्य, वह जीवित न बचे।’ जब महाशब्द वाले नरसिंगे का शब्द देर तक सुनाई दे, तब लोग पर्वत के पास आएँ।”
೧೩ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
14 १४ तब मूसा ने पर्वत पर से उतरकर लोगों के पास आकर उनको पवित्र कराया; और उन्होंने अपने वस्त्र धो लिए।
೧೪ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
15 १५ और उसने लोगों से कहा, “तीसरे दिन तक तैयार हो जाओ; स्त्री के पास न जाना।”
೧೫ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
16 १६ जब तीसरा दिन आया तब भोर होते बादल गरजने और बिजली चमकने लगी, और पर्वत पर काली घटा छा गई, फिर नरसिंगे का शब्द बड़ा भारी हुआ, और छावनी में जितने लोग थे सब काँप उठे।
೧೬ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
17 १७ तब मूसा लोगों को परमेश्वर से भेंट करने के लिये छावनी से निकाल ले गया; और वे पर्वत के नीचे खड़े हुए।
೧೭ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
18 १८ और यहोवा जो आग में होकर सीनै पर्वत पर उतरा था, इस कारण समस्त पर्वत धुएँ से भर गया; और उसका धुआँ भट्ठे का सा उठ रहा था, और समस्त पर्वत बहुत काँप रहा था।
೧೮ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
19 १९ फिर जब नरसिंगे का शब्द बढ़ता और बहुत भारी होता गया, तब मूसा बोला, और परमेश्वर ने वाणी सुनाकर उसको उत्तर दिया।
೧೯ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
20 २० और यहोवा सीनै पर्वत की चोटी पर उतरा; और मूसा को पर्वत की चोटी पर बुलाया और मूसा ऊपर चढ़ गया।
೨೦ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
21 २१ तब यहोवा ने मूसा से कहा, “नीचे उतरकर लोगों को चेतावनी दे, कहीं ऐसा न हो कि वे बाड़ा तोड़कर यहोवा के पास देखने को घुसें, और उनमें से बहुत नाश हो जाएँ।
೨೧ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
22 २२ और याजक जो यहोवा के समीप आया करते हैं वे भी अपने को पवित्र करें, कहीं ऐसा न हो कि यहोवा उन पर टूट पड़े।”
೨೨ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
23 २३ मूसा ने यहोवा से कहा, “वे लोग सीनै पर्वत पर नहीं चढ़ सकते; तूने तो आप हमको यह कहकर चिताया कि पर्वत के चारों और बाड़ा बाँधकर उसे पवित्र रखो।”
೨೩ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
24 २४ यहोवा ने उससे कहा, “उतर तो जा, और हारून समेत तू ऊपर आ; परन्तु याजक और साधारण लोग कहीं यहोवा के पास बाड़ा तोड़कर न चढ़ आएँ, कहीं ऐसा न हो कि वह उन पर टूट पड़े।”
೨೪ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
25 २५ अतः ये बातें मूसा ने लोगों के पास उतरकर उनको सुनाईं।
೨೫ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.

< निर्गमन 19 >