< निर्गमन 26 >
1 १ “फिर निवास-स्थान के लिये दस पर्दे बनवाना; इनको बटी हुई सनीवाले और नीले, बैंगनी और लाल रंग के कपड़े का कढ़ाई के काम किए हुए करूबों के साथ बनवाना।
೧ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.
2 २ एक-एक पर्दे की लम्बाई अट्ठाईस हाथ और चौड़ाई चार हाथ की हो; सब पर्दे एक ही नाप के हों।
೨ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
3 ३ पाँच पर्दे एक दूसरे से जुड़े हुए हों; और फिर जो पाँच पर्दे रहेंगे वे भी एक दूसरे से जुड़े हुए हों।
೩ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.
4 ४ और जहाँ ये दोनों पर्दे जोड़े जाएँ वहाँ की दोनों छोरों पर नीले-नीले फंदे लगवाना।
೪ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.
5 ५ दोनों छोरों में पचास-पचास फंदे ऐसे लगवाना कि वे आमने-सामने हों।
೫ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.
6 ६ और सोने के पचास अंकड़े बनवाना; और परदों के छल्लों को अंकड़ों के द्वारा एक दूसरे से ऐसा जुड़वाना कि निवास-स्थान मिलकर एक ही हो जाए।
೬ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
7 ७ “फिर निवास के ऊपर तम्बू का काम देने के लिये बकरी के बाल के ग्यारह पर्दे बनवाना।
೭ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.
8 ८ एक-एक पर्दे की लम्बाई तीस हाथ और चौड़ाई चार हाथ की हो; ग्यारहों पर्दे एक ही नाप के हों।
೮ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.
9 ९ और पाँच पर्दे अलग और फिर छः पर्दे अलग जुड़वाना, और छठवें पर्दे को तम्बू के सामने मोड़कर दुहरा कर देना।
೯ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.
10 १० और तू पचास अंकड़े उस पर्दे की छोर में जो बाहर से मिलाया जाएगा और पचास ही अंकड़े दूसरी ओर के पर्दे की छोर में जो बाहर से मिलाया जाएगा बनवाना।
೧೦ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
11 ११ और पीतल के पचास अंकड़े बनाना, और अंकड़ों को फंदों में लगाकर तम्बू को ऐसा जुड़वाना कि वह मिलकर एक ही हो जाए।
೧೧ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.
12 १२ और तम्बू के परदों का लटका हुआ भाग, अर्थात् जो आधा पट रहेगा, वह निवास की पिछली ओर लटका रहे।
೧೨ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
13 १३ और तम्बू के परदों की लम्बाई में से हाथ भर इधर, और हाथ भर उधर निवास को ढाँकने के लिये उसकी दोनों ओर पर लटका हुआ रहे।
೧೩ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.
14 १४ फिर तम्बू के लिये लाल रंग से रंगी हुई मेढ़ों की खालों का एक ओढ़ना और उसके ऊपर सुइसों की खालों का भी एक ओढ़ना बनवाना।
೧೪ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
15 १५ “फिर निवास को खड़ा करने के लिये बबूल की लकड़ी के तख्ते बनवाना।
೧೫ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
16 १६ एक-एक तख्ते की लम्बाई दस हाथ और चौड़ाई डेढ़ हाथ की हो।
೧೬ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
17 १७ एक-एक तख्ते में एक दूसरे से जोड़ी हुई दो-दो चूलें हों; निवास के सब तख्तों को इसी भाँति से बनवाना।
೧೭ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.
18 १८ और निवास के लिये जो तख्ते तू बनवाएगा उनमें से बीस तख्ते तो दक्षिण की ओर के लिये हों;
೧೮ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
19 १९ और बीसों तख्तों के नीचे चाँदी की चालीस कुर्सियाँ बनवाना, अर्थात् एक-एक तख्ते के नीचे उसके चूलों के लिये दो-दो कुर्सियाँ।
೧೯ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.
20 २० और निवास की दूसरी ओर, अर्थात् उत्तर की ओर बीस तख्ते बनवाना।
೨೦ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,
21 २१ और उनके लिये चाँदी की चालीस कुर्सियाँ बनवाना, अर्थात् एक-एक तख्ते के नीचे दो-दो कुर्सियाँ हों।
೨೧ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.
22 २२ और निवास की पिछली ओर, अर्थात् पश्चिम की ओर के लिए छः तख्ते बनवाना।
೨೨ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
23 २३ और पिछले भाग में निवास के कोनों के लिये दो तख्ते बनवाना;
೨೩ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
24 २४ और ये नीचे से दो-दो भाग के हों और दोनों भाग ऊपर के सिरे तक एक-एक कड़े में मिलाए जाएँ; दोनों तख्तों का यही रूप हो; ये तो दोनों कोनों के लिये हों।
೨೪ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
25 २५ और आठ तख्ते हों, और उनकी चाँदी की सोलह कुर्सियाँ हों; अर्थात् एक-एक तख्ते के नीचे दो-दो कुर्सियाँ हों।
೨೫ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.
26 २६ “फिर बबूल की लकड़ी के बेंड़े बनवाना, अर्थात् निवास की एक ओर के तख्तों के लिये पाँच,
೨೬ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,
27 २७ और निवास की दूसरी ओर के तख्तों के लिये पाँच बेंड़े, और निवास का जो भाग पश्चिम की ओर पिछले भाग में होगा, उसके लिये पाँच बेंड़े बनवाना।
೨೭ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
28 २८ बीचवाला बेंड़ा जो तख्तों के मध्य में होगा वह तम्बू के एक सिरे से दूसरे सिरे तक पहुँचे।
೨೮ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.
29 २९ फिर तख्तों को सोने से मढ़वाना, और उनके कड़े जो बेंड़ों के घरों का काम देंगे उन्हें भी सोने के बनवाना; और बेंड़ों को भी सोने से मढ़वाना।
೨೯ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
30 ३० और निवास को इस रीति खड़ा करना जैसा इस पर्वत पर तुझे दिखाया गया है।
೩೦ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.
31 ३१ “फिर नीले, बैंगनी और लाल रंग के और बटी हुई सूक्ष्म सनीवाले कपड़े का एक बीचवाला परदा बनवाना; वह कढ़ाई के काम किए हुए करूबों के साथ बने।
೩೧ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
32 ३२ और उसको सोने से मढ़े हुए बबूल के चार खम्भों पर लटकाना, इनकी अंकड़ियाँ सोने की हों, और ये चाँदी की चार कुर्सियों पर खड़ी रहें।
೩೨ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
33 ३३ और बीचवाले पर्दे को अंकड़ियों के नीचे लटकाकर, उसकी आड़ में साक्षीपत्र का सन्दूक भीतर ले जाना; सो वह बीचवाला परदा तुम्हारे लिये पवित्रस्थान को परमपवित्र स्थान से अलग किए रहे।
೩೩ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
34 ३४ फिर परमपवित्र स्थान में साक्षीपत्र के सन्दूक के ऊपर प्रायश्चित के ढकने को रखना।
೩೪ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.
35 ३५ और उस पर्दे के बाहर निवास के उत्तर की ओर मेज रखना; और उसके दक्षिण की ओर मेज के सामने दीवट को रखना।
೩೫ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.
36 ३६ “फिर तम्बू के द्वार के लिये नीले, बैंगनी और लाल रंग के और बटी हुई सूक्ष्म सनीवाले कपड़े का कढ़ाई का काम किया हुआ एक परदा बनवाना।
೩೬ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
37 ३७ और इस पर्दे के लिये बबूल के पाँच खम्भे बनवाना, और उनको सोने से मढ़वाना; उनकी कड़ियाँ सोने की हों, और उनके लिये पीतल की पाँच कुर्सियाँ ढलवा कर बनवाना।
೩೭ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.