< यहेजकेल 29 >
1 १ दसवें वर्ष के दसवें महीने के बारहवें दिन को यहोवा का यह वचन मेरे पास पहुँचा,
೧ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 २ “हे मनुष्य के सन्तान, अपना मुख मिस्र के राजा फ़िरौन की ओर करके उसके और सारे मिस्र के विरुद्ध भविष्यद्वाणी कर;
೨“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.
3 ३ यह कह, परमेश्वर यहोवा यह कहता है: हे मिस्र के राजा फ़िरौन, मैं तेरे विरुद्ध हूँ, हे बड़े नगर, तू जो अपनी नदियों के बीच पड़ा रहता है, जिसने कहा है, ‘मेरी नदी मेरी निज की है, और मैं ही ने उसको अपने लिये बनाया है।’
೩“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.
4 ४ मैं तेरे जबड़ों में नकेल डालूँगा, और तेरी नदियों की मछलियों को तेरी खाल में चिपटाऊँगा, और तेरी खाल में चिपटी हुई तेरी नदियों की सब मछलियों समेत तुझको तेरी नदियों में से निकालूँगा।
೪“ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
5 ५ तब मैं तुझे तेरी नदियों की सारी मछलियों समेत जंगल में निकाल दूँगा, और तू मैदान में पड़ा रहेगा; किसी भी प्रकार से तेरी सुधि न ली जाएगी। मैंने तुझे वन-पशुओं और आकाश के पक्षियों का आहार कर दिया है।
೫ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
6 ६ “तब मिस्र के सारे निवासी जान लेंगे कि मैं यहोवा हूँ। वे तो इस्राएल के घराने के लिये नरकट की टेक ठहरे थे।
೬ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
7 ७ जब उन्होंने तुझ पर हाथ का बल दिया तब तू टूट गया और उनके कंधे उखड़ ही गए; और जब उन्होंने तुझ पर टेक लगाई, तब तू टूट गया, और उनकी कमर की सारी नसें चढ़ गईं।
೭ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
8 ८ इस कारण प्रभु यहोवा यह कहता है: देख, मैं तुझ पर तलवार चलवाकर, तेरे मनुष्य और पशु, सभी को नाश करूँगा।
೮“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.
9 ९ तब मिस्र देश उजाड़ ही उजाड़ होगा; और वे जान लेंगे कि मैं यहोवा हूँ। “तूने कहा है, ‘मेरी नदी मेरी अपनी ही है, और मैं ही ने उसे बनाया।’
೯ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
10 १० इस कारण देख, मैं तेरे और तेरी नदियों के विरुद्ध हूँ, और मिस्र देश को मिग्दोल से लेकर सवेने तक वरन् कूश देश की सीमा तक उजाड़ ही उजाड़ कर दूँगा।
೧೦‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.
11 ११ चालीस वर्ष तक उसमें मनुष्य या पशु का पाँव तक न पड़ेगा; और न उसमें कोई बसेगा।
೧೧“‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.
12 १२ चालीस वर्ष तक मैं मिस्र देश को उजड़े हुए देशों के बीच उजाड़ कर रखूँगा; और उसके नगर उजड़े हुए नगरों के बीच खण्डहर ही रहेंगे। मैं मिस्रियों को जाति-जाति में छिन्न-भिन्न कर दूँगा, और देश-देश में तितर-बितर कर दूँगा।
೧೨ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’”
13 १३ “परमेश्वर यहोवा यह कहता है: चालीस वर्ष के बीतने पर मैं मिस्रियों को उन जातियों के बीच से इकट्ठा करूँगा, जिनमें वे तितर-बितर हुए;
೧೩“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.
14 १४ और मैं मिस्रियों को बँधुआई से छुड़ाकर पत्रोस देश में, जो उनकी जन्म-भूमि है, फिर पहुँचाऊँगा; और वहाँ उनका छोटा सा राज्य हो जाएगा।
೧೪ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.
15 १५ वह सब राज्यों में से छोटा होगा, और फिर अपना सिर और जातियों के ऊपर न उठाएगा; क्योंकि मैं मिस्रियों को ऐसा घटाऊँगा कि वे अन्यजातियों पर फिर प्रभुता न करने पाएँगे।
೧೫ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.
16 १६ वह फिर इस्राएल के घराने के भरोसे का कारण न होगा, क्योंकि जब वे फिर उनकी ओर देखने लगें, तब वे उनके अधर्म को स्मरण करेंगे। और तब वे जान लेंगे कि मैं परमेश्वर यहोवा हूँ।”
೧೬ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.
17 १७ फिर सत्ताइसवें वर्ष के पहले महीने के पहले दिन को यहोवा का यह वचन मेरे पास पहुँचा
೧೭ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
18 १८ “हे मनुष्य के सन्तान, बाबेल के राजा नबूकदनेस्सर ने सोर के घेरने में अपनी सेना से बड़ा परिश्रम कराया; हर एक का सिर गंजा हो गया, और हर एक के कंधों का चमड़ा छिल गया; तो भी उसको सोर से न तो इस बड़े परिश्रम की मजदूरी कुछ मिली और न उसकी सेना को।
೧೮“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”
19 १९ इस कारण परमेश्वर यहोवा यह कहता है: देख, मैं बाबेल के राजा नबूकदनेस्सर को मिस्र देश दूँगा; और वह उसकी भीड़ को ले जाएगा, और उसकी धन-सम्पत्ति को लूटकर अपना कर लेगा; अतः यही मजदूरी उसकी सेना को मिलेगी।
೧೯ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
20 २० मैंने उसके परिश्रम के बदले में उसको मिस्र देश इस कारण दिया है कि उन लोगों ने मेरे लिये काम किया था, परमेश्वर यहोवा की यही वाणी है।
೨೦ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
21 २१ “उसी समय मैं इस्राएल के घराने का एक सींग उगाऊँगा, और उनके बीच तेरा मुँह खोलूँगा। और वे जान लेंगे कि मैं यहोवा हूँ।”
೨೧“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”