< यहेजकेल 33 >
1 १ यहोवा का यह वचन मेरे पास पहुँचा:
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 २ “हे मनुष्य के सन्तान, अपने लोगों से कह, जब मैं किसी देश पर तलवार चलाने लगूँ, और उस देश के लोग किसी को अपना पहरुआ करके ठहराएँ,
೨“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
3 ३ तब यदि वह यह देखकर कि इस देश पर तलवार चलने वाली है, नरसिंगा फूँककर लोगों को चिता दे,
೩ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
4 ४ तो जो कोई नरसिंगे का शब्द सुनने पर न चेते और तलवार के चलने से मर जाए, उसका खून उसी के सिर पड़ेगा।
೪ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
5 ५ उसने नरसिंगे का शब्द सुना, परन्तु न चेता; इसलिए उसका खून उसी को लगेगा। परन्तु, यदि वह चेत जाता, तो अपना प्राण बचा लेता।
೫ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
6 ६ परन्तु यदि पहरुआ यह देखने पर कि तलवार चलने वाली है नरसिंगा फूँककर लोगों को न चिताए, और तलवार के चलने से उनमें से कोई मर जाए, तो वह तो अपने अधर्म में फँसा हुआ मर जाएगा, परन्तु उसके खून का लेखा मैं पहरुए ही से लूँगा।
೬ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
7 ७ “इसलिए, हे मनुष्य के सन्तान, मैंने तुझे इस्राएल के घराने का पहरुआ ठहरा दिया है; तू मेरे मुँह से वचन सुन-सुनकर उन्हें मेरी ओर से चिता दे।
೭“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
8 ८ यदि मैं दुष्ट से कहूँ, ‘हे दुष्ट, तू निश्चय मरेगा,’ तब यदि तू दुष्ट को उसके मार्ग के विषय न चिताए, तो वह दुष्ट अपने अधर्म में फँसा हुआ मरेगा, परन्तु उसके खून का लेखा में तुझी से लूँगा।
೮ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
9 ९ परन्तु यदि तू दुष्ट को उसके मार्ग के विषय चिताए कि वह अपने मार्ग से फिरे और वह अपने मार्ग से न फिरे, तो वह तो अपने अधर्म में फँसा हुआ मरेगा, परन्तु तू अपना प्राण बचा लेगा।
೯ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
10 १० “फिर हे मनुष्य के सन्तान, इस्राएल के घराने से यह कह, तुम लोग कहते हो: ‘हमारे अपराधों और पापों का भार हमारे ऊपर लदा हुआ है और हम उसके कारण नाश हुए जाते हैं; हम कैसे जीवित रहें?’
೧೦“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
11 ११ इसलिए तू उनसे यह कह, परमेश्वर यहोवा की यह वाणी है: मेरे जीवन की सौगन्ध, मैं दुष्ट के मरने से कुछ भी प्रसन्न नहीं होता, परन्तु इससे कि दुष्ट अपने मार्ग से फिरकर जीवित रहे; हे इस्राएल के घराने, तुम अपने-अपने बुरे मार्ग से फिर जाओ; तुम क्यों मरो?
೧೧ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
12 १२ हे मनुष्य के सन्तान, अपने लोगों से यह कह, जब धर्मी जन अपराध करे तब उसकी धार्मिकता उसे बचा न सकेगी; और दुष्ट की दुष्टता भी जो हो, जब वह उससे फिर जाए, तो उसके कारण वह न गिरेगा; और धर्मी जन जब वह पाप करे, तब अपनी धार्मिकता के कारण जीवित न रहेगा।
೧೨ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
13 १३ यदि मैं धर्मी से कहूँ कि तू निश्चय जीवित रहेगा, और वह अपने धार्मिकता पर भरोसा करके कुटिल काम करने लगे, तब उसके धार्मिकता के कामों में से किसी का स्मरण न किया जाएगा; जो कुटिल काम उसने किए हों वह उन्हीं में फँसा हुआ मरेगा।
೧೩ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
14 १४ फिर जब मैं दुष्ट से कहूँ, तू निश्चय मरेगा, और वह अपने पाप से फिरकर न्याय और धर्म के काम करने लगे,
೧೪ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
15 १५ अर्थात् यदि दुष्ट जन बन्धक लौटा दे, अपनी लूटी हुई वस्तुएँ भर दे, और बिना कुटिल काम किए जीवनदायक विधियों पर चलने लगे, तो वह न मरेगा; वह निश्चय जीवित रहेगा।
೧೫ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
16 १६ जितने पाप उसने किए हों, उनमें से किसी का स्मरण न किया जाएगा; उसने न्याय और धर्म के काम किए और वह निश्चय जीवित रहेगा।
೧೬ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
17 १७ “तो भी तुम्हारे लोग कहते हैं, प्रभु की चाल ठीक नहीं; परन्तु उन्हीं की चाल ठीक नहीं है।
೧೭ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
18 १८ जब धर्मी अपने धार्मिकता से फिरकर कुटिल काम करने लगे, तब निश्चय वह उनमें फँसा हुआ मर जाएगा।
೧೮ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
19 १९ जब दुष्ट अपनी दुष्टता से फिरकर न्याय और धर्म के काम करने लगे, तब वह उनके कारण जीवित रहेगा।
೧೯ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
20 २० तो भी तुम कहते हो कि प्रभु की चाल ठीक नहीं? हे इस्राएल के घराने, मैं हर एक व्यक्ति का न्याय उसकी चाल ही के अनुसार करूँगा।”
೨೦ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
21 २१ फिर हमारी बँधुआई के ग्यारहवें वर्ष के दसवें महीने के पाँचवें दिन को, एक व्यक्ति जो यरूशलेम से भागकर बच गया था, वह मेरे पास आकर कहने लगा, “नगर ले लिया गया।”
೨೧ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
22 २२ उस भागे हुए के आने से पहले साँझ को यहोवा की शक्ति मुझ पर हुई थी; और भोर तक अर्थात् उस मनुष्य के आने तक उसने मेरा मुँह खोल दिया; अतः मेरा मुँह खुला ही रहा, और मैं फिर गूँगा न रहा।
೨೨ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
23 २३ तब यहोवा का यह वचन मेरे पास पहुँचा:
೨೩ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
24 २४ “हे मनुष्य के सन्तान, इस्राएल की भूमि के उन खण्डहरों के रहनेवाले यह कहते हैं, अब्राहम एक ही मनुष्य था, तो भी देश का अधिकारी हुआ; परन्तु हम लोग बहुत से हैं, इसलिए देश निश्चय हमारे ही अधिकार में दिया गया है।
೨೪“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
25 २५ इस कारण तू उनसे कह, परमेश्वर यहोवा यह कहता है, तुम लोग तो माँस लहू समेत खाते और अपनी मूरतों की ओर दृष्टि करते, और हत्या करते हो; फिर क्या तुम उस देश के अधिकारी रहने पाओगे?
೨೫ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
26 २६ तुम अपनी-अपनी तलवार पर भरोसा करते और घिनौने काम करते, और अपने-अपने पड़ोसी की स्त्री को अशुद्ध करते हो; फिर क्या तुम उस देश के अधिकारी रहने पाओगे?
೨೬ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
27 २७ तू उनसे यह कह, परमेश्वर यहोवा यह कहता है: मेरे जीवन की सौगन्ध, निःसन्देह जो लोग खण्डहरों में रहते हैं, वे तलवार से गिरेंगे, और जो खुले मैदान में रहता है, उसे मैं जीवजन्तुओं का आहार कर दूँगा, और जो गढ़ों और गुफाओं में रहते हैं, वे मरी से मरेंगे।
೨೭ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
28 २८ मैं उस देश को उजाड़ ही उजाड़ कर दूँगा; और उसके बल का घमण्ड जाता रहेगा; और इस्राएल के पहाड़ ऐसे उजड़ेंगे कि उन पर होकर कोई न चलेगा।
೨೮ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
29 २९ इसलिए जब मैं उन लोगों के किए हुए सब घिनौने कामों के कारण उस देश को उजाड़ ही उजाड़ कर दूँगा, तब वे जान लेंगे कि मैं यहोवा हूँ।
೨೯ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
30 ३० “हे मनुष्य के सन्तान, तेरे लोग दीवारों के पास और घरों के द्वारों में तेरे विषय में बातें करते और एक दूसरे से कहते हैं, ‘आओ, सुनो, यहोवा की ओर से कौन सा वचन निकलता है।’
೩೦ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
31 ३१ वे प्रजा के समान तेरे पास आते और मेरी प्रजा बनकर तेरे सामने बैठकर तेरे वचन सुनते हैं, परन्तु वे उन पर चलते नहीं; मुँह से तो वे बहुत प्रेम दिखाते हैं, परन्तु उनका मन लालच ही में लगा रहता है।
೩೧ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
32 ३२ तू उनकी दृष्टि में प्रेम के मधुर गीत गानेवाले और अच्छे बजानेवाले का सा ठहरा है, क्योंकि वे तेरे वचन सुनते तो है, परन्तु उन पर चलते नहीं।
೩೨ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
33 ३३ इसलिए जब यह बात घटेगी, और वह निश्चय घटेगी! तब वे जान लेंगे कि हमारे बीच एक भविष्यद्वक्ता आया था।”
೩೩ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”