< उत्पत्ति 22 >

1 इन बातों के पश्चात् ऐसा हुआ कि परमेश्वर ने, अब्राहम से यह कहकर उसकी परीक्षा की, “हे अब्राहम!” उसने कहा, “देख, मैं यहाँ हूँ।”
ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
2 उसने कहा, “अपने पुत्र को अर्थात् अपने एकलौते पुत्र इसहाक को, जिससे तू प्रेम रखता है, संग लेकर मोरिय्याह देश में चला जा, और वहाँ उसको एक पहाड़ के ऊपर जो मैं तुझे बताऊँगा होमबलि करके चढ़ा।”
ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
3 अतः अब्राहम सवेरे तड़के उठा और अपने गदहे पर काठी कसकर अपने दो सेवक, और अपने पुत्र इसहाक को संग लिया, और होमबलि के लिये लकड़ी चीर ली; तब निकलकर उस स्थान की ओर चला, जिसकी चर्चा परमेश्वर ने उससे की थी।
ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
4 तीसरे दिन अब्राहम ने आँखें उठाकर उस स्थान को दूर से देखा।
ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,
5 और उसने अपने सेवकों से कहा, “गदहे के पास यहीं ठहरे रहो; यह लड़का और मैं वहाँ तक जाकर, और दण्डवत् करके, फिर तुम्हारे पास लौट आएँगे।”
“ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.
6 तब अब्राहम ने होमबलि की लकड़ी ले अपने पुत्र इसहाक पर लादी, और आग और छुरी को अपने हाथ में लिया; और वे दोनों एक साथ चल पड़े।
ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.
7 इसहाक ने अपने पिता अब्राहम से कहा, “हे मेरे पिता,” उसने कहा, “हे मेरे पुत्र, क्या बात है?” उसने कहा, “देख, आग और लकड़ी तो हैं; पर होमबलि के लिये भेड़ कहाँ है?”
ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
8 अब्राहम ने कहा, “हे मेरे पुत्र, परमेश्वर होमबलि की भेड़ का उपाय आप ही करेगा।” और वे दोनों संग-संग आगे चलते गए।
ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
9 जब वे उस स्थान को जिसे परमेश्वर ने उसको बताया था पहुँचे; तब अब्राहम ने वहाँ वेदी बनाकर लकड़ी को चुन-चुनकर रखा, और अपने पुत्र इसहाक को बाँधकर वेदी पर रखी लकड़ियों के ऊपर रख दिया।
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
10 १० फिर अब्राहम ने हाथ बढ़ाकर छुरी को ले लिया कि अपने पुत्र को बलि करे।
೧೦ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.
11 ११ तब यहोवा के दूत ने स्वर्ग से उसको पुकारकर कहा, “हे अब्राहम, हे अब्राहम!” उसने कहा, “देख, मैं यहाँ हूँ।”
೧೧ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
12 १२ उसने कहा, “उस लड़के पर हाथ मत बढ़ा, और न उसे कुछ कर; क्योंकि तूने जो मुझसे अपने पुत्र, वरन् अपने एकलौते पुत्र को भी, नहीं रख छोड़ा; इससे मैं अब जान गया कि तू परमेश्वर का भय मानता है।”
೧೨ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
13 १३ तब अब्राहम ने आँखें उठाई, और क्या देखा, कि उसके पीछे एक मेढ़ा अपने सींगों से एक झाड़ी में फँसा हुआ है; अतः अब्राहम ने जाकर उस मेढ़े को लिया, और अपने पुत्र के स्थान पर होमबलि करके चढ़ाया।
೧೩ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
14 १४ अब्राहम ने उस स्थान का नाम यहोवा यिरे रखा, इसके अनुसार आज तक भी कहा जाता है, “यहोवा के पहाड़ पर प्रदान किया जाएगा।”
೧೪ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
15 १५ फिर यहोवा के दूत ने दूसरी बार स्वर्ग से अब्राहम को पुकारकर कहा,
೧೫ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,
16 १६ “यहोवा की यह वाणी है, कि मैं अपनी ही यह शपथ खाता हूँ कि तूने जो यह काम किया है कि अपने पुत्र, वरन् अपने एकलौते पुत्र को भी, नहीं रख छोड़ा;
೧೬“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
17 १७ इस कारण मैं निश्चय तुझे आशीष दूँगा; और निश्चय तेरे वंश को आकाश के तारागण, और समुद्र तट के रेतकणों के समान अनगिनत करूँगा, और तेरा वंश अपने शत्रुओं के नगरों का अधिकारी होगा;
೧೭ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
18 १८ और पृथ्वी की सारी जातियाँ अपने को तेरे वंश के कारण धन्य मानेंगी: क्योंकि तूने मेरी बात मानी है।”
೧೮ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
19 १९ तब अब्राहम अपने सेवकों के पास लौट आया, और वे सब बेर्शेबा को संग-संग गए; और अब्राहम बेर्शेबा में रहने लगा।
೧೯ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
20 २० इन बातों के पश्चात् ऐसा हुआ कि अब्राहम को यह सन्देश मिला, “मिल्का के तेरे भाई नाहोर से सन्तान उत्पन्न हुई हैं।”
೨೦ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
21 २१ मिल्का के पुत्र तो ये हुए, अर्थात् उसका जेठा ऊस, और ऊस का भाई बूज, और कमूएल, जो अराम का पिता हुआ।
೨೧ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
22 २२ फिर केसेद, हज़ो, पिल्दाश, यिद्लाप, और बतूएल।
೨೨ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.
23 २३ इन आठों को मिल्का ने अब्राहम के भाई नाहोर के द्वारा जन्म दिया। और बतूएल से रिबका उत्पन्न हुई।
೨೩ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.
24 २४ फिर नाहोर के रूमा नामक एक रखैल भी थी; जिससे तेबह, गहम, तहश, और माका, उत्पन्न हुए।
೨೪ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.

< उत्पत्ति 22 >