< उत्पत्ति 4 >

1 जब आदम अपनी पत्नी हव्वा के पास गया तब उसने गर्भवती होकर कैन को जन्म दिया और कहा, “मैंने यहोवा की सहायता से एक पुत्र को जन्म दिया है।”
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
2 फिर वह उसके भाई हाबिल को भी जन्मी, हाबिल तो भेड़-बकरियों का चरवाहा बन गया, परन्तु कैन भूमि की खेती करनेवाला किसान बना।
ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
3 कुछ दिनों के पश्चात् कैन यहोवा के पास भूमि की उपज में से कुछ भेंट ले आया।
ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
4 और हाबिल भी अपनी भेड़-बकरियों के कई एक पहलौठे बच्चे भेंट चढ़ाने ले आया और उनकी चर्बी भेंट चढ़ाई; तब यहोवा ने हाबिल और उसकी भेंट को तो ग्रहण किया,
ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
5 परन्तु कैन और उसकी भेंट को उसने ग्रहण न किया। तब कैन अति क्रोधित हुआ, और उसके मुँह पर उदासी छा गई।
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
6 तब यहोवा ने कैन से कहा, “तू क्यों क्रोधित हुआ? और तेरे मुँह पर उदासी क्यों छा गई है?
ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
7 यदि तू भला करे, तो क्या तेरी भेंट ग्रहण न की जाएगी? और यदि तू भला न करे, तो पाप द्वार पर छिपा रहता है, और उसकी लालसा तेरी ओर होगी, और तुझे उस पर प्रभुता करनी है।”
ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
8 तब कैन ने अपने भाई हाबिल से कुछ कहा; और जब वे मैदान में थे, तब कैन ने अपने भाई हाबिल पर चढ़कर उसकी हत्या कर दी।
ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
9 तब यहोवा ने कैन से पूछा, “तेरा भाई हाबिल कहाँ है?” उसने कहा, “मालूम नहीं; क्या मैं अपने भाई का रखवाला हूँ?”
ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.
10 १० उसने कहा, “तूने क्या किया है? तेरे भाई का लहू भूमि में से मेरी ओर चिल्लाकर मेरी दुहाई दे रहा है!
೧೦ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
11 ११ इसलिए अब भूमि जिसने तेरे भाई का लहू तेरे हाथ से पीने के लिये अपना मुँह खोला है, उसकी ओर से तू श्रापित है।
೧೧ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
12 १२ चाहे तू भूमि पर खेती करे, तो भी उसकी पूरी उपज फिर तुझे न मिलेगी, और तू पृथ्वी पर भटकने वाला और भगोड़ा होगा।”
೧೨ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
13 १३ तब कैन ने यहोवा से कहा, “मेरा दण्ड असहनीय है।
೧೩ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.
14 १४ देख, तूने आज के दिन मुझे भूमि पर से निकाला है और मैं तेरी दृष्टि की आड़ में रहूँगा और पृथ्वी पर भटकने वाला और भगोड़ा रहूँगा; और जो कोई मुझे पाएगा, मेरी हत्या करेगा।”
೧೪ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
15 १५ इस कारण यहोवा ने उससे कहा, “जो कोई कैन की हत्या करेगा उससे सात गुणा बदला लिया जाएगा।” और यहोवा ने कैन के लिये एक चिन्ह ठहराया ऐसा न हो कि कोई उसे पाकर मार डाले।
೧೫ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
16 १६ तब कैन यहोवा के सम्मुख से निकल गया और नोद नामक देश में, जो अदन के पूर्व की ओर है, रहने लगा।
೧೬ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
17 १७ जब कैन अपनी पत्नी के पास गया तब वह गर्भवती हुई और हनोक को जन्म दिया; फिर कैन ने एक नगर बसाया और उस नगर का नाम अपने पुत्र के नाम पर हनोक रखा।
೧೭ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
18 १८ हनोक से ईराद उत्पन्न हुआ, और ईराद से महूयाएल उत्पन्न हुआ और महूयाएल से मतूशाएल, और मतूशाएल से लेमेक उत्पन्न हुआ।
೧೮ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
19 १९ लेमेक ने दो स्त्रियाँ ब्याह लीं: जिनमें से एक का नाम आदा और दूसरी का सिल्ला है।
೧೯ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.
20 २० आदा ने याबाल को जन्म दिया। वह उन लोगों का पिता था जो तम्बुओं में रहते थे और पशुओं का पालन करके जीवन निर्वाह करते थे।
೨೦ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
21 २१ उसके भाई का नाम यूबाल था: वह उन लोगों का पिता था जो वीणा और बाँसुरी बजाते थे।
೨೧ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
22 २२ और सिल्ला ने भी तूबल-कैन नामक एक पुत्र को जन्म दिया: वह पीतल और लोहे के सब धारवाले हथियारों का गढ़नेवाला हुआ। और तूबल-कैन की बहन नामाह थी।
೨೨ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
23 २३ लेमेक ने अपनी पत्नियों से कहा, “हे आदा और हे सिल्ला मेरी सुनो; हे लेमेक की पत्नियों, मेरी बात पर कान लगाओ: मैंने एक पुरुष को जो मुझे चोट लगाता था, अर्थात् एक जवान को जो मुझे घायल करता था, घात किया है।
೨೩ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
24 २४ जब कैन का बदला सात गुणा लिया जाएगा। तो लेमेक का सतहत्तर गुणा लिया जाएगा।”
೨೪ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
25 २५ और आदम अपनी पत्नी के पास फिर गया; और उसने एक पुत्र को जन्म दिया और उसका नाम यह कहकर शेत रखा कि “परमेश्वर ने मेरे लिये हाबिल के बदले, जिसको कैन ने मारा था, एक और वंश प्रदान किया।”
೨೫ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
26 २६ और शेत के भी एक पुत्र उत्पन्न हुआ और उसने उसका नाम एनोश रखा। उसी समय से लोग यहोवा से प्रार्थना करने लगे।
೨೬ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.

< उत्पत्ति 4 >