< उत्पत्ति 46 >

1 तब इस्राएल अपना सब कुछ लेकर बेर्शेबा को गया, और वहाँ अपने पिता इसहाक के परमेश्वर को बलिदान चढ़ाया।
ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.
2 तब परमेश्वर ने इस्राएल से रात को दर्शन में कहा, “हे याकूब हे याकूब।” उसने कहा, “क्या आज्ञा।”
ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.
3 उसने कहा, “मैं परमेश्वर तेरे पिता का परमेश्वर हूँ, तू मिस्र में जाने से मत डर; क्योंकि मैं तुझ से वहाँ एक बड़ी जाति बनाऊँगा।
ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
4 मैं तेरे संग-संग मिस्र को चलता हूँ; और मैं तुझे वहाँ से फिर निश्चय ले आऊँगा; और यूसुफ अपने हाथ से तेरी आँखों को बन्द करेगा।”
ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.
5 तब याकूब बेर्शेबा से चला; और इस्राएल के पुत्र अपने पिता याकूब, और अपने बाल-बच्चों, और स्त्रियों को उन गाड़ियों पर, जो फ़िरौन ने उनके ले आने को भेजी थीं, चढ़ाकर चल पड़े।
ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
6 वे अपनी भेड़-बकरी, गाय-बैल, और कनान देश में अपने इकट्ठा किए हुए सारे धन को लेकर मिस्र में आए।
ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.
7 और याकूब अपने बेटे-बेटियों, पोते-पोतियों, अर्थात् अपने वंश भर को अपने संग मिस्र में ले आया।
ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.
8 याकूब के साथ जो इस्राएली, अर्थात् उसके बेटे, पोते, आदि मिस्र में आए, उनके नाम ये हैं याकूब का जेठा रूबेन था।
ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
9 और रूबेन के पुत्र हनोक, पल्लू, हेस्रोन, और कर्मी थे।
ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.
10 १० शिमोन के पुत्र, यमूएल, यामीन, ओहद, याकीन, सोहर, और एक कनानी स्त्री से जन्मा हुआ शाऊल भी था।
೧೦ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.
11 ११ लेवी के पुत्र गेर्शोन, कहात, और मरारी थे।
೧೧ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.
12 १२ यहूदा के एर, ओनान, शेला, पेरेस, और जेरह नामक पुत्र हुए तो थे; पर एर और ओनान कनान देश में मर गए थे; और पेरेस के पुत्र, हेस्रोन और हामूल थे।
೧೨ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.
13 १३ इस्साकार के पुत्र, तोला, पुब्बा, योब और शिम्रोन थे।
೧೩ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.
14 १४ जबूलून के पुत्र, सेरेद, एलोन, और यहलेल थे।
೧೪ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್
15 १५ लिआ के पुत्र जो याकूब से पद्दनराम में उत्पन्न हुए थे, उनके बेटे पोते ये ही थे, और इनसे अधिक उसने उसके साथ एक बेटी दीना को भी जन्म दिया। यहाँ तक तो याकूब के सब वंशवाले तैंतीस प्राणी हुए।
೧೫ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
16 १६ फिर गाद के पुत्र, सपोन, हाग्गी, शूनी, एसबोन, एरी, अरोदी, और अरेली थे।
೧೬ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;
17 १७ आशेर के पुत्र, यिम्ना, यिश्वा, यिश्वी, और बरीआ थे, और उनकी बहन सेरह थी; और बरीआ के पुत्र, हेबेर और मल्कीएल थे।
೧೭ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.
18 १८ जिल्पा, जिसे लाबान ने अपनी बेटी लिआ को दिया था, उसके बेटे पोते आदि ये ही थे; और उसके द्वारा याकूब के सोलह प्राणी उत्पन्न हुए।
೧೮ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.
19 १९ फिर याकूब की पत्नी राहेल के पुत्र यूसुफ और बिन्यामीन थे।
೧೯ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.
20 २० और मिस्र देश में ओन के याजक पोतीपेरा की बेटी आसनत से यूसुफ के ये पुत्र उत्पन्न हुए, अर्थात् मनश्शे और एप्रैम।
೨೦ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
21 २१ बिन्यामीन के पुत्र, बेला, बेकेर, अश्बेल, गेरा, नामान, एही, रोश, मुप्पीम, हुप्पीम, और अर्द थे।
೨೧ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.
22 २२ राहेल के पुत्र जो याकूब से उत्पन्न हुए उनके ये ही पुत्र थे; उसके ये सब बेटे-पोते चौदह प्राणी हुए।
೨೨ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.
23 २३ फिर दान का पुत्र हूशीम था।
೨೩ದಾನನ ಮಗನು: ಹುಶೀಮ್.
24 २४ नप्ताली के पुत्र, यहसेल, गूनी, येसेर, और शिल्लेम थे।
೨೪ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.
25 २५ बिल्हा, जिसे लाबान ने अपनी बेटी राहेल को दिया, उसके बेटे पोते ये ही हैं; उसके द्वारा याकूब के वंश में सात प्राणी हुए।
೨೫ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.
26 २६ याकूब के निज वंश के जो प्राणी मिस्र में आए, वे उसकी बहुओं को छोड़ सब मिलकर छियासठ प्राणी हुए।
೨೬ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.
27 २७ और यूसुफ के पुत्र, जो मिस्र में उससे उत्पन्न हुए, वे दो प्राणी थे; इस प्रकार याकूब के घराने के जो प्राणी मिस्र में आए सो सब मिलकर सत्तर हुए।
೨೭ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.
28 २८ फिर उसने यहूदा को अपने आगे यूसुफ के पास भेज दिया कि वह उसको गोशेन का मार्ग दिखाए; और वे गोशेन देश में आए।
೨೮ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,
29 २९ तब यूसुफ अपना रथ जुतवाकर अपने पिता इस्राएल से भेंट करने के लिये गोशेन देश को गया, और उससे भेंट करके उसके गले से लिपटा, और कुछ देर तक उसके गले से लिपटा हुआ रोता रहा।
೨೯ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.
30 ३० तब इस्राएल ने यूसुफ से कहा, “मैं अब मरने से भी प्रसन्न हूँ, क्योंकि तुझे जीवित पाया और तेरा मुँह देख लिया।”
೩೦ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು.
31 ३१ तब यूसुफ ने अपने भाइयों से और अपने पिता के घराने से कहा, “मैं जाकर फ़िरौन को यह समाचार दूँगा, ‘मेरे भाई और मेरे पिता के सारे घराने के लोग, जो कनान देश में रहते थे, वे मेरे पास आ गए हैं;
೩೧ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;
32 ३२ और वे लोग चरवाहे हैं, क्योंकि वे पशुओं को पालते आए हैं; इसलिए वे अपनी भेड़-बकरी, गाय-बैल, और जो कुछ उनका है, सब ले आए हैं।’
೩೨ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.
33 ३३ जब फ़िरौन तुम को बुलाकर पूछे, ‘तुम्हारा उद्यम क्या है?’
೩೩ಫರೋಹನು ನಿಮ್ಮನ್ನು ಕರೆಯಿಸಿ, “ನಿಮ್ಮ ಕಸುಬು ಏನು?” ಎಂದು ಕೇಳಿದರೆ,
34 ३४ तब यह कहना, ‘तेरे दास लड़कपन से लेकर आज तक पशुओं को पालते आए हैं, वरन् हमारे पुरखा भी ऐसा ही करते थे।’ इससे तुम गोशेन देश में रहने पाओगे; क्योंकि सब चरवाहों से मिस्री लोग घृणा करते हैं।”
೩೪“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.

< उत्पत्ति 46 >