< यशायाह 10 >
1 १ हाय उन पर जो दुष्टता से न्याय करते, और उन पर जो उत्पात करने की आज्ञा लिख देते हैं,
೧ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
2 २ कि वे कंगालों का न्याय बिगाड़ें और मेरी प्रजा के दीन लोगों का हक मारें, कि वे विधवाओं को लूटें और अनाथों का माल अपना लें!
೨ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
3 ३ तुम दण्ड के दिन और उस विपत्ति के दिन जो दूर से आएगी क्या करोगे? तुम सहायता के लिये किसके पास भागकर जाओगे? तुम अपने वैभव को कहाँ रख छोड़ोगे?
೩ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
4 ४ वे केवल बन्दियों के पैरों के पास गिर पड़ेंगे और मरे हुओं के नीचे दबे पड़े रहेंगे। इतने पर भी उसका क्रोध शान्त नहीं हुआ और उसका हाथ अब तक बढ़ा हुआ है।
೪ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
5 ५ अश्शूर पर हाय, जो मेरे क्रोध का लठ और मेरे हाथ में का सोंटा है! वह मेरा क्रोध है।
೫ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
6 ६ मैं उसको एक भक्तिहीन जाति के विरुद्ध भेजूँगा, और जिन लोगों पर मेरा रोष भड़का है उनके विरुद्ध उसको आज्ञा दूँगा कि छीन-छान करे और लूट ले, और उनको सड़कों की कीच के समान लताड़े।
೬ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
7 ७ परन्तु उसकी ऐसी मनसा न होगी, न उसके मन में ऐसा विचार है, क्योंकि उसके मन में यही है कि मैं बहुत सी जातियों का नाश और अन्त कर डालूँ।
೭ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
8 ८ क्योंकि वह कहता है, “क्या मेरे सब हाकिम राजा के तुल्य नहीं?
೮ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
9 ९ क्या कलनो कर्कमीश के समान नहीं है? क्या हमात अर्पाद के और सामरिया दमिश्क के समान नहीं?
೯ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
10 १० जिस प्रकार मेरा हाथ मूरतों से भरे हुए उन राज्यों पर पहुँचा जिनकी मूरतों यरूशलेम और सामरिया की मूरतों से बढ़कर थीं, और जिस प्रकार मैंने सामरिया और उसकी मूरतों से किया,
೧೦ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
11 ११ क्या उसी प्रकार मैं यरूशलेम से और उसकी मूरतों से भी न करूँ?”
೧೧ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
12 १२ इस कारण जब प्रभु सिय्योन पर्वत पर और यरूशलेम में अपना सब काम कर चुकेगा, तब मैं अश्शूर के राजा के गर्व की बातों का, और उसकी घमण्ड भरी आँखों का बदला दूँगा।
೧೨ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
13 १३ उसने कहा है, “अपने ही बाहुबल और बुद्धि से मैंने यह काम किया है, क्योंकि मैं चतुर हूँ; मैंने देश-देश की सीमाओं को हटा दिया, और उनके रखे हुए धन को लूट लिया; मैंने वीर के समान गद्दी पर विराजनेहारों को उतार दिया है।
೧೩ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
14 १४ देश-देश के लोगों की धन-सम्पत्ति, चिड़ियों के घोंसलों के समान, मेरे हाथ आई है, और जैसे कोई छोड़े हुए अण्डों को बटोर ले वैसे ही मैंने सारी पृथ्वी को बटोर लिया है; और कोई पंख फड़फड़ाने या चोंच खोलने या चीं-चीं करनेवाला न था।”
೧೪ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
15 १५ क्या कुल्हाड़ा उसके विरुद्ध जो उससे काटता हो डींग मारे, या आरी उसके विरुद्ध जो उसे खींचता हो बड़ाई करे? क्या सोंटा अपने चलानेवाले को चलाए या छड़ी उसे उठाए जो काठ नहीं है!
೧೫ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
16 १६ इस कारण प्रभु अर्थात् सेनाओं का प्रभु उस राजा के हष्ट-पुष्ट योद्धाओं को दुबला कर देगा, और उसके ऐश्वर्य के नीचे आग की सी जलन होगी।
೧೬ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
17 १७ इस्राएल की ज्योति तो आग ठहरेगी, और इस्राएल का पवित्र ज्वाला ठहरेगा; और वह उसके झाड़ - झँखाड़ को एक ही दिन में भस्म करेगा।
೧೭ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
18 १८ और जैसे रोगी के क्षीण हो जाने पर उसकी दशा होती है वैसी ही वह उसके वन और फलदाई बारी की शोभा पूरी रीति से नाश करेगा।
೧೮ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
19 १९ उस वन के वृक्ष इतने थोड़े रह जाएँगे कि लड़का भी उनको गिनकर लिख लेगा।
೧೯ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
20 २० उस समय इस्राएल के बचे हुए लोग और याकूब के घराने के भागे हुए, अपने मारनेवाले पर फिर कभी भरोसा न रखेंगे, परन्तु यहोवा जो इस्राएल का पवित्र है, उसी पर वे सच्चाई से भरोसा रखेंगे।
೨೦ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
21 २१ याकूब में से बचे हुए लोग पराक्रमी परमेश्वर की ओर फिरेंगे।
೨೧ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
22 २२ क्योंकि हे इस्राएल, चाहे तेरे लोग समुद्र के रेतकणों के समान भी बहुत हों, तो भी निश्चय है कि उनमें से केवल बचे लोग ही लौटेंगे। सत्यानाश तो पूरे न्याय के साथ ठाना गया है।
೨೨ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
23 २३ क्योंकि प्रभु सेनाओं के यहोवा ने सारे देश का सत्यानाश कर देना ठाना है।
೨೩ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
24 २४ इसलिए प्रभु सेनाओं का यहोवा यह कहता है, “हे सिय्योन में रहनेवाली मेरी प्रजा, अश्शूर से मत डर; चाहे वह सोंटें से तुझे मारे और मिस्र के समान तेरे ऊपर छड़ी उठाए।
೨೪ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
25 २५ क्योंकि अब थोड़ी ही देर है कि मेरी जलन और क्रोध उनका सत्यानाश करके शान्त होगा
೨೫ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
26 २६ सेनाओं का यहोवा उसके विरुद्ध कोड़ा उठाकर उसको ऐसा मारेगा जैसा उसने ओरेब नामक चट्टान पर मिद्यानियों को मारा था; और जैसा उसने मिस्रियों के विरुद्ध समुद्र पर लाठी बढ़ाई, वैसा ही उसकी ओर भी बढ़ाएगा।
೨೬ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
27 २७ उस समय ऐसा होगा कि उसका बोझ तेरे कंधे पर से और उसका जूआ तेरी गर्दन पर से उठा लिया जाएगा, और अभिषेक के कारण वह जूआ तोड़ डाला जाएगा।”
೨೭ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
28 २८ वह अय्यात में आया है, और मिग्रोन में से होकर आगे बढ़ गया है; मिकमाश में उसने अपना सामान रखा है।
೨೮ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
29 २९ वे घाटी से पार हो गए, उन्होंने गेबा में रात काटी; रामाह थरथरा उठा है, शाऊल का गिबा भाग निकला है।
೨೯ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
30 ३० हे गल्लीम की बेटी चिल्ला! हे लैशा के लोगों कान लगाओ! हाय बेचारा अनातोत!
೩೦ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
31 ३१ मदमेना मारा-मारा फिरता है, गेबीम के निवासी भागने के लिये अपना-अपना सामान इकट्ठा कर रहे हैं।
೩೧ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
32 ३२ आज ही के दिन वह नोब में टिकेगा; तब वह सिय्योन पहाड़ पर, और यरूशलेम की पहाड़ी पर हाथ उठाकर धमकाएगा।
೩೨ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
33 ३३ देखो, प्रभु सेनाओं का यहोवा पेड़ों को भयानक रूप से छाँट डालेगा; ऊँचे-ऊँचे वृक्ष काटे जाएँगे, और जो ऊँचे हैं वे नीचे किए जाएँगे।
೩೩ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
34 ३४ वह घने वन को लोहे से काट डालेगा और लबानोन एक प्रतापी के हाथ से नाश किया जाएगा।
೩೪ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.