< यशायाह 33 >
1 १ हाय तुझ नाश करनेवाले पर जो नाश नहीं किया गया था; हाय तुझ विश्वासघाती पर, जिसके साथ विश्वासघात नहीं किया गया! जब तू नाश कर चुके, तब तू नाश किया जाएगा; और जब तू विश्वासघात कर चुके, तब तेरे साथ विश्वासघात किया जाएगा।
೧ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
2 २ हे यहोवा, हम लोगों पर अनुग्रह कर; हम तेरी ही बाट जोहते हैं। भोर को तू उनका भुजबल, संकट के समय हमारा उद्धारकर्ता ठहर।
೨ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
3 ३ हुल्लड़ सुनते ही देश-देश के लोग भाग गए, तेरे उठने पर अन्यजातियाँ तितर-बितर हुई।
೩ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
4 ४ जैसे टिड्डियाँ चट करती हैं वैसे ही तुम्हारी लूट चट की जाएगी, और जैसे टिड्डियाँ टूट पड़ती हैं, वैसे ही वे उस पर टूट पड़ेंगे।
೪ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
5 ५ यहोवा महान हुआ है, वह ऊँचे पर रहता है; उसने सिय्योन को न्याय और धार्मिकता से परिपूर्ण किया है;
೫ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
6 ६ और उद्धार, बुद्धि और ज्ञान की बहुतायत तेरे दिनों का आधार होगी; यहोवा का भय उसका धन होगा।
೬ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
7 ७ देख, उनके शूरवीर बाहर चिल्ला रहे हैं; संधि के दूत बिलख-बिलख कर रो रहे हैं।
೭ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
8 ८ राजमार्ग सुनसान पड़े हैं, उन पर यात्री अब नहीं चलते। उसने वाचा को टाल दिया, नगरों को तुच्छ जाना, उसने मनुष्य को कुछ न समझा।
೮ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
9 ९ पृथ्वी विलाप करती और मुर्झा गई है; लबानोन कुम्हला गया और वह मुर्झा गया है; शारोन मरूभूमि के समान हो गया; बाशान और कर्मेल में पतझड़ हो रहा है।
೯ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
10 १० यहोवा कहता है, अब मैं उठूँगा, मैं अपना प्रताप दिखाऊँगा; अब मैं महान ठहरूँगा।
೧೦ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11 ११ तुम में सूखी घास का गर्भ रहेगा, तुम से भूसी उत्पन्न होगी; तुम्हारी साँस आग है जो तुम्हें भस्म करेगी।
೧೧ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
12 १२ देश-देश के लोग फूँके हुए चूने के सामान हो जाएँगे, और कटे हुए कँटीली झाड़ियों के समान आग में जलाए जाएँगे।
೧೨ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
13 १३ हे दूर-दूर के लोगों, सुनो कि मैंने क्या किया है? और तुम भी जो निकट हो, मेरा पराक्रम जान लो।
೧೩ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
14 १४ सिय्योन के पापी थरथरा गए हैं; भक्तिहीनों को कँपकँपी लगी है: हम में से कौन प्रचण्ड आग में रह सकता? हम में से कौन उस आग में बना रह सकता है जो कभी नहीं बुझेगी?
೧೪“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
15 १५ जो धार्मिकता से चलता और सीधी बातें बोलता; जो अंधेर के लाभ से घृणा करता, जो घूस नहीं लेता; जो खून की बात सुनने से कान बन्द करता, और बुराई देखने से आँख मूँद लेता है। वही ऊँचे स्थानों में निवास करेगा।
೧೫ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
16 १६ वह चट्टानों के गढ़ों में शरण लिए हुए रहेगा; उसको रोटी मिलेगी और पानी की घटी कभी न होगी।
೧೬ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
17 १७ तू अपनी आँखों से राजा को उसकी शोभा सहित देखेगा; और लम्बे-चौड़े देश पर दृष्टि करेगा।
೧೭ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
18 १८ तू भय के दिनों को स्मरण करेगा: लेखा लेनेवाला और कर तौलकर लेनेवाला कहाँ रहा? गुम्मटों का गिननेवाला कहाँ रहा?
೧೮ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
19 १९ जिनकी कठिन भाषा तू नहीं समझता, और जिनकी लड़बड़ाती जीभ की बात तू नहीं बूझ सकता उन निर्दय लोगों को तू फिर न देखेगा।
೧೯ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
20 २० हमारे पर्व के नगर सिय्योन पर दृष्टि कर! तू अपनी आँखों से यरूशलेम को देखेगा, वह विश्राम का स्थान, और ऐसा तम्बू है जो कभी गिराया नहीं जाएगा, जिसका कोई खूँटा कभी उखाड़ा न जाएगा, और न कोई रस्सी कभी टूटेगी।
೨೦ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
21 २१ वहाँ महाप्रतापी यहोवा हमारे लिये रहेगा, वह बहुत बड़ी-बड़ी नदियों और नहरों का स्थान होगा, जिसमें डाँडवाली नाव न चलेगी और न शोभायमान जहाज उसमें होकर जाएगा।
೨೧ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
22 २२ क्योंकि यहोवा हमारा न्यायी, यहोवा हमारा हाकिम, यहोवा हमारा राजा है; वही हमारा उद्धार करेगा।
೨೨ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
23 २३ तेरी रस्सियाँ ढीली हो गईं, वे मस्तूल की जड़ को दृढ़ न रख सकीं, और न पाल को तान सकीं। तब बड़ी लूट छीनकर बाँटी गई, लँगड़े लोग भी लूट के भागी हुए।
೨೩ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
24 २४ कोई निवासी न कहेगा कि मैं रोगी हूँ; और जो लोग उसमें बसेंगे, उनका अधर्म क्षमा किया जाएगा।
೨೪ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.