< यशायाह 65 >
1 १ जो मुझ को पूछते भी न थे वे मेरे खोजी हैं; जो मुझे ढूँढ़ते भी न थे उन्होंने मुझे पा लिया, और जो जाति मेरी नहीं कहलाई थी, उससे भी मैं कहता हूँ, “देख, मैं उपस्थित हूँ।”
೧“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
2 २ मैं एक हठीली जाति के लोगों की ओर दिन भर हाथ फैलाए रहा, जो अपनी युक्तियों के अनुसार बुरे मार्गों में चलते हैं।
೨ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.
3 ३ ऐसे लोग, जो मेरे सामने ही बारियों में बलि चढ़ा-चढ़ाकर और ईंटों पर धूप जला-जलाकर, मुझे लगातार क्रोध दिलाते हैं।
೩ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
4 ४ ये कब्र के बीच बैठते और छिपे हुए स्थानों में रात बिताते; जो सूअर का माँस खाते, और घृणित वस्तुओं का रस अपने बर्तनों में रखते;
೪ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
5 ५ जो कहते हैं, “हट जा, मेरे निकट मत आ, क्योंकि मैं तुझ से पवित्र हूँ।” ये मेरी नाक में धुएँ व उस आग के समान हैं जो दिन भर जलती रहती है। विद्रोहियों को दण्ड
೫ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
6 ६ देखो, यह बात मेरे सामने लिखी हुई है: “मैं चुप न रहूँगा, मैं निश्चय बदला दूँगा वरन् तुम्हारे और तुम्हारे पुरखाओं के भी अधर्म के कामों का बदला तुम्हारी गोद में भर दूँगा।
೬ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;
7 ७ क्योंकि उन्होंने पहाड़ों पर धूप जलाया और पहाड़ियों पर मेरी निन्दा की है, इसलिए मैं यहोवा कहता हूँ, कि, उनके पिछले कामों के बदले को मैं इनकी गोद में तौलकर दूँगा।”
೭ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.
8 ८ यहोवा यह कहता है: “जिस भाँति दाख के किसी गुच्छे में जब नया दाखमधु भर आता है, तब लोग कहते हैं, उसे नाश मत कर, क्योंकि उसमें आशीष है, उसी भाँति मैं अपने दासों के निमित्त ऐसा करूँगा कि सभी को नाश न करूँगा।
೮ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
9 ९ मैं याकूब में से एक वंश, और यहूदा में से अपने पर्वतों का एक वारिस उत्पन्न करूँगा; मेरे चुने हुए उसके वारिस होंगे, और मेरे दास वहाँ निवास करेंगे।
೯ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
10 १० मेरी प्रजा जो मुझे ढूँढ़ती है, उसकी भेड़-बकरियाँ तो शारोन में चरेंगी, और उसके गाय-बैल आकोर नामक तराई में विश्राम करेंगे।
೧೦ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
11 ११ परन्तु तुम जो यहोवा को त्याग देते और मेरे पवित्र पर्वत को भूल जाते हो, जो भाग्य देवता के लिये मेज पर भोजन की वस्तुएँ सजाते और भावी देवी के लिये मसाला मिला हुआ दाखमधु भर देते हो;
೧೧ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.
12 १२ मैं तुम्हें गिन-गिनकर तलवार का कौर बनाऊँगा, और तुम सब घात होने के लिये झुकोगे; क्योंकि, जब मैंने तुम्हें बुलाया तुम ने उत्तर न दिया, जब मैं बोला, तब तुम ने मेरी न सुनी; वरन् जो मुझे बुरा लगता है वही तुम ने नित किया, और जिससे मैं अप्रसन्न होता हूँ, उसी को तुम ने अपनाया।”
೧೨ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”
13 १३ इस कारण प्रभु यहोवा यह कहता है: “देखो, मेरे दास तो खाएँगे, पर तुम भूखे रहोगे; मेरे दास पीएँगे, पर तुम प्यासे रहोगे; मेरे दास आनन्द करेंगे, पर तुम लज्जित होगे;
೧೩ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
14 १४ देखो, मेरे दास हर्ष के मारे जयजयकार करेंगे, परन्तु तुम शोक से चिल्लाओगे और खेद के मारे हाय! हाय!, करोगे।
೧೪ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.
15 १५ मेरे चुने हुए लोग तुम्हारी उपमा दे-देकर श्राप देंगे, और प्रभु यहोवा तुझको नाश करेगा; परन्तु अपने दासों का दूसरा नाम रखेगा।
೧೫ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
16 १६ तब सारे देश में जो कोई अपने को धन्य कहेगा वह सच्चे परमेश्वर का नाम लेकर अपने को धन्य कहेगा, और जो कोई देश में शपथ खाए वह सच्चे परमेश्वर के नाम से शपथ खाएगा; क्योंकि पिछला कष्ट दूर हो गया और वह मेरी आँखों से छिप गया है।
೧೬ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
17 १७ “क्योंकि देखो, मैं नया आकाश और नई पृथ्वी उत्पन्न करता हूँ; और पहली बातें स्मरण न रहेंगी और सोच-विचार में भी न आएँगी।
೧೭“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
18 १८ इसलिए जो मैं उत्पन्न करने पर हूँ, उसके कारण तुम हर्षित हो और सदा सर्वदा मगन रहो; क्योंकि देखो, मैं यरूशलेम को मगन और उसकी प्रजा को आनन्दित बनाऊँगा।
೧೮ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
19 १९ मैं आप यरूशलेम के कारण मगन, और अपनी प्रजा के हेतु हर्षित होऊँगा; उसमें फिर रोने या चिल्लाने का शब्द न सुनाई पड़ेगा।
೧೯ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
20 २० उसमें फिर न तो थोड़े दिन का बच्चा, और न ऐसा बूढ़ा जाता रहेगा जिसने अपनी आयु पूरी न की हो; क्योंकि जो लड़कपन में मरनेवाला है वह सौ वर्ष का होकर मरेगा, परन्तु पापी सौ वर्ष का होकर श्रापित ठहरेगा।
೨೦ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
21 २१ वे घर बनाकर उनमें बसेंगे; वे दाख की बारियाँ लगाकर उनका फल खाएँगे।
೨೧ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
22 २२ ऐसा नहीं होगा कि वे बनाएँ और दूसरा बसे; या वे लगाएँ, और दूसरा खाए; क्योंकि मेरी प्रजा की आयु वृक्षों की सी होगी, और मेरे चुने हुए अपने कामों का पूरा लाभ उठाएँगे।
೨೨ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
23 २३ उनका परिश्रम व्यर्थ न होगा, न उनके बालक घबराहट के लिये उत्पन्न होंगे; क्योंकि वे यहोवा के धन्य लोगों का वंश ठहरेंगे, और उनके बाल-बच्चे उनसे अलग न होंगे।
೨೩ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
24 २४ उनके पुकारने से पहले ही मैं उनको उत्तर दूँगा, और उनके माँगते ही मैं उनकी सुन लूँगा।
೨೪ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
25 २५ भेड़िया और मेम्ना एक संग चरा करेंगे, और सिंह बैल के समान भूसा खाएगा; और सर्प का आहार मिट्टी ही रहेगा। मेरे सारे पवित्र पर्वत पर न तो कोई किसी को दुःख देगा और न कोई किसी की हानि करेगा, यहोवा का यही वचन है।”
೨೫ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.