< याकूब 4 >
1 १ तुम में लड़ाइयाँ और झगड़े कहाँ से आते है? क्या उन सुख-विलासों से नहीं जो तुम्हारे अंगों में लड़ते-भिड़ते हैं?
೧ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
2 २ तुम लालसा रखते हो, और तुम्हें मिलता नहीं; तुम हत्या और डाह करते हो, और कुछ प्राप्त नहीं कर सकते; तुम झगड़ते और लड़ते हो; तुम्हें इसलिए नहीं मिलता, कि माँगते नहीं।
೨ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
3 ३ तुम माँगते हो और पाते नहीं, इसलिए कि बुरी इच्छा से माँगते हो, ताकि अपने भोग-विलास में उड़ा दो।
೩ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
4 ४ हे व्यभिचारिणियों, क्या तुम नहीं जानतीं, कि संसार से मित्रता करनी परमेश्वर से बैर करना है? इसलिए जो कोई संसार का मित्र होना चाहता है, वह अपने आपको परमेश्वर का बैरी बनाता है।
೪ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
5 ५ क्या तुम यह समझते हो, कि पवित्रशास्त्र व्यर्थ कहता है? “जिस पवित्र आत्मा को उसने हमारे भीतर बसाया है, क्या वह ऐसी लालसा करता है, जिसका प्रतिफल डाह हो”?
೫ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
6 ६ वह तो और भी अनुग्रह देता है; इस कारण यह लिखा है, “परमेश्वर अभिमानियों से विरोध करता है, पर नम्रों पर अनुग्रह करता है।”
೬ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
7 ७ इसलिए परमेश्वर के अधीन हो जाओ; और शैतान का सामना करो, तो वह तुम्हारे पास से भाग निकलेगा।
೭ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
8 ८ परमेश्वर के निकट आओ, तो वह भी तुम्हारे निकट आएगा: हे पापियों, अपने हाथ शुद्ध करो; और हे दुचित्ते लोगों अपने हृदय को पवित्र करो।
೮ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
9 ९ दुःखी हो, और शोक करो, और रोओ, तुम्हारी हँसी शोक में और तुम्हारा आनन्द उदासी में बदल जाए।
೯ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
10 १० प्रभु के सामने नम्र बनो, तो वह तुम्हें शिरोमणि बनाएगा।
೧೦ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
11 ११ हे भाइयों, एक दूसरे की निन्दा न करो, जो अपने भाई की निन्दा करता है, या भाई पर दोष लगाता है, वह व्यवस्था की निन्दा करता है, और व्यवस्था पर दोष लगाता है, तो तू व्यवस्था पर चलनेवाला नहीं, पर उस पर न्यायाधीश ठहरा।
೧೧ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
12 १२ व्यवस्था देनेवाला और न्यायाधीश तो एक ही है, जिसे बचाने और नाश करने की सामर्थ्य है; पर तू कौन है, जो अपने पड़ोसी पर दोष लगाता है?
೧೨ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
13 १३ तुम जो यह कहते हो, “आज या कल हम किसी और नगर में जाकर वहाँ एक वर्ष बिताएँगे, और व्यापार करके लाभ उठाएँगे।”
೧೩“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.
14 १४ और यह नहीं जानते कि कल क्या होगा। सुन तो लो, तुम्हारा जीवन है ही क्या? तुम तो मानो धुंध के समान हो, जो थोड़ी देर दिखाई देती है, फिर लोप हो जाती है।
೧೪ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.
15 १५ इसके विपरीत तुम्हें यह कहना चाहिए, “यदि प्रभु चाहे तो हम जीवित रहेंगे, और यह या वह काम भी करेंगे।”
೧೫ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
16 १६ पर अब तुम अपनी ड़ींग मारने पर घमण्ड करते हो; ऐसा सब घमण्ड बुरा होता है।
೧೬ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.
17 १७ इसलिए जो कोई भलाई करना जानता है और नहीं करता, उसके लिये यह पाप है।
೧೭ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.