< यिर्मयाह 40 >

1 जब अंगरक्षकों के प्रधान नबूजरदान ने यिर्मयाह को रामाह में उन सब यरूशलेमी और यहूदी बन्दियों के बीच हथकड़ियों से बन्धा हुआ पाकर जो बाबेल जाने को थे छुड़ा लिया, उसके बाद यहोवा का वचन उसके पास पहुँचा।
ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
2 अंगरक्षकों के प्रधान नबूजरदान ने यिर्मयाह को उस समय अपने पास बुला लिया, और कहा, “इस स्थान पर यह जो विपत्ति पड़ी है वह तेरे परमेश्वर यहोवा की कही हुई थी।
ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.
3 जैसा यहोवा ने कहा था वैसा ही उसने पूरा भी किया है। तुम लोगों ने जो यहोवा के विरुद्ध पाप किया और उसकी आज्ञा नहीं मानी, इस कारण तुम्हारी यह दशा हुई है।
ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
4 अब मैं तेरी इन हथकड़ियों को काट देता हूँ, और यदि मेरे संग बाबेल में जाना तुझे अच्छा लगे तो चल, वहाँ मैं तुझ पर कृपादृष्टि रखूँगा; और यदि मेरे संग बाबेल जाना तुझे न भाए, तो यहीं रह जा। देख, सारा देश तेरे सामने पड़ा है, जिधर जाना तुझे अच्छा और ठीक लगे उधर ही चला जा।”
ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
5 वह वहीं था कि नबूजरदान ने फिर उससे कहा, “गदल्याह जो अहीकाम का पुत्र और शापान का पोता है, जिसको बाबेल के राजा ने यहूदा के नगरों पर अधिकारी ठहराया है, उसके पास लौट जा और उसके संग लोगों के बीच रह, या जहाँ कहीं तुझे जाना ठीक जान पड़े वहीं चला जा।” अतः अंगरक्षकों के प्रधान ने उसको भोजन-सामग्री और कुछ उपहार भी देकर विदा किया।
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
6 तब यिर्मयाह अहीकाम के पुत्र गदल्याह के पास मिस्पा को गया, और वहाँ उन लोगों के बीच जो देश में रह गए थे, रहने लगा।
ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.
7 योद्धाओं के जो दल दिहात में थे, जब उनके सब प्रधानों ने अपने जनों समेत सुना कि बाबेल के राजा ने अहीकाम के पुत्र गदल्याह को देश का अधिकारी ठहराया है, और देश के जिन कंगाल लोगों को वह बाबेल को नहीं ले गया, क्या पुरुष, क्या स्त्री, क्या बाल-बच्चे, उन सभी को उसे सौंप दिया है,
ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
8 तब नतन्याह का पुत्र इश्माएल, कारेह के पुत्र योहानान, योनातान और तन्हूमेत का पुत्र सरायाह, एपै नतोपावासी के पुत्र और किसी माकावासी का पुत्र याजन्याह अपने जनों समेत गदल्याह के पास मिस्पा में आए।
ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
9 गदल्याह जो अहीकाम का पुत्र और शापान का पोता था, उसने उनसे और उनके जनों से शपथ खाकर कहा, “कसदियों के अधीन रहने से मत डरो। इसी देश में रहते हुए बाबेल के राजा के अधीन रहो तब तुम्हारा भला होगा।
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
10 १० मैं तो इसलिए मिस्पा में रहता हूँ कि जो कसदी लोग हमारे यहाँ आएँ, उनके सामने हाजिर हुआ करूँ; परन्तु तुम दाखमधु और धूपकाल के फल और तेल को बटोरके अपने बरतनों में रखो और अपने लिए हुए नगरों में बसे रहो।”
೧೦ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
11 ११ फिर जब मोआबियों, अम्मोनियों, एदोमियों और अन्य सब जातियों के बीच रहनेवाले सब यहूदियों ने सुना कि बाबेल के राजा ने यहूदियों में से कुछ लोगों को बचा लिया और उन पर गदल्याह को जो अहीकाम का पुत्र और शापान का पोता है अधिकारी नियुक्त किया है,
೧೧ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
12 १२ तब सब यहूदी जिन-जिन स्थानों में तितर-बितर हो गए थे, वहाँ से लौटकर यहूदा देश के मिस्पा नगर में गदल्याह के पास, और बहुत दाखमधु और धूपकाल के फल बटोरने लगे।
೧೨ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
13 १३ तब कारेह का पुत्र योहानान और मैदान में रहनेवाले योद्धाओं के सब दलों के प्रधान मिस्पा में गदल्याह के पास आकर कहने लगे,
೧೩ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
14 १४ “क्या तू जानता है कि अम्मोनियों के राजा बालीस ने नतन्याह के पुत्र इश्माएल को तुझे जान से मारने के लिये भेजा है?” परन्तु अहीकाम के पुत्र गदल्याह ने उन पर विश्वास न किया।
೧೪ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15 १५ फिर कारेह के पुत्र योहानान ने गदल्याह से मिस्पा में छिपकर कहा, “मुझे जाकर नतन्याह के पुत्र इश्माएल को मार डालने दे और कोई इसे न जानेगा। वह क्यों तुझे मार डाले, और जितने यहूदी लोग तेरे पास इकट्ठे हुए हैं वे क्यों तितर-बितर हो जाएँ और बचे हुए यहूदी क्यों नाश हों?”
೧೫ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.
16 १६ अहीकाम के पुत्र गदल्याह ने कारेह के पुत्र योहानान से कहा, “ऐसा काम मत कर, तू इश्माएल के विषय में झूठ बोलता है।”
೧೬ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.

< यिर्मयाह 40 >