< यिर्मयाह 41 >

1 सातवें महीने में ऐसा हुआ कि इश्माएल जो नतन्याह का पुत्र और एलीशामा का पोता और राजवंश का और राजा के प्रधान पुरुषों में से था, वह दस जन संग लेकर मिस्पा में अहीकाम के पुत्र गदल्याह के पास आया। वहाँ मिस्पा में उन्होंने एक संग भोजन किया।
ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
2 तब नतन्याह के पुत्र इश्माएल और उसके संग के दस जनों ने उठकर गदल्याह को, जो अहीकाम का पुत्र और शापान का पोता था, और जिसे बाबेल के राजा ने देश का अधिकारी ठहराया था, उसे तलवार से ऐसा मारा कि वह मर गया।
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
3 इश्माएल ने गदल्याह के संग जितने यहूदी मिस्पा में थे, और जो कसदी योद्धा वहाँ मिले, उन सभी को मार डाला।
ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.
4 गदल्याह को मार डालने के दूसरे दिन जब कोई इसे न जानता था,
ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,
5 तब शेकेम और शीलो और सामरिया से अस्सी पुरुष दाढ़ी मुँड़ाए, वस्त्र फाड़े, शरीर चीरे हुए और हाथ में अन्नबलि और लोबान लिए हुए, यहोवा के भवन में जाते दिखाई दिए।
ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
6 तब नतन्याह का पुत्र इश्माएल उनसे मिलने को मिस्पा से निकला, और रोता हुआ चला। जब वह उनसे मिला, तब कहा, “अहीकाम के पुत्र गदल्याह के पास चलो।”
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.
7 जब वे उस नगर में आए तब नतन्याह के पुत्र इश्माएल ने अपने संगी जनों समेत उनको घात करके गड्ढे में फेंक दिया।
ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
8 परन्तु उनमें से दस मनुष्य इश्माएल से कहने लगे, “हमको न मार; क्योंकि हमारे पास मैदान में रखा हुआ गेहूँ, जौ, तेल और मधु है।” इसलिए उसने उन्हें छोड़ दिया और उनके भाइयों के साथ नहीं मारा।
ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.
9 जिस गड्ढे में इश्माएल ने उन लोगों की सब लोथें जिन्हें उसने मारा था, गदल्याह की लोथ के पास फेंक दी थी, (यह वही गड्ढा है जिसे आसा राजा ने इस्राएल के राजा बाशा के डर के मारे खुदवाया था), उसको नतन्याह के पुत्र इश्माएल ने मारे हुओं से भर दिया।
ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.
10 १० तब जो लोग मिस्पा में बचे हुए थे, अर्थात् राजकुमारियाँ और जितने और लोग मिस्पा में रह गए थे जिन्हें अंगरक्षकों के प्रधान नबूजरदान ने अहीकाम के पुत्र गदल्याह को सौंप दिया था, उन सभी को नतन्याह का पुत्र इश्माएल बन्दी बनाकर अम्मोनियों के पास ले जाने को चला।
೧೦ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.
11 ११ जब कारेह के पुत्र योहानान ने और योद्धाओं के दलों के उन सब प्रधानों ने जो उसके संग थे, सुना कि नतन्याह के पुत्र इश्माएल ने यह सब बुराई की है,
೧೧ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,
12 १२ तब वे सब जनों को लेकर नतन्याह के पुत्र इश्माएल से लड़ने को निकले और उसको उस बड़े जलाशय के पास पाया जो गिबोन में है।
೧೨ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
13 १३ कारेह के पुत्र योहानान को, और दलों के सब प्रधानों को देखकर जो उसके संग थे, इश्माएल के साथ जो लोग थे, वे सब आनन्दित हुए।
೧೩ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
14 १४ जितने लोगों को इश्माएल मिस्पा से बन्दी बनाकर लिए जाता था, वे पलटकर कारेह के पुत्र योहानान के पास चले आए।
೧೪ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
15 १५ परन्तु नतन्याह का पुत्र इश्माएल आठ पुरुष समेत योहानान के हाथ से बचकर अम्मोनियों के पास चला गया।
೧೫ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.
16 १६ तब प्रजा में से जितने बच गए थे, अर्थात् जिन योद्धाओं, स्त्रियों, बाल-बच्चों और खोजों को कारेह का पुत्र योहानान, अहीकाम के पुत्र गदल्याह के मिस्पा में मारे जाने के बाद नतन्याह के पुत्र इश्माएल के पास से छुड़ाकर गिबोन से फेर ले आया था, उनको वह अपने सब संगी दलों के प्रधानों समेत लेकर चल दिया।
೧೬ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.
17 १७ बैतलहम के निकट जो किम्हाम की सराय है, उसमें वे इसलिए टिक गए कि मिस्र में जाएँ।
೧೭ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
18 १८ क्योंकि वे कसदियों से डरते थे; इसका कारण यह था कि अहीकाम का पुत्र गदल्याह जिसे बाबेल के राजा ने देश का अधिकारी ठहराया था, उसे नतन्याह के पुत्र इश्माएल ने मार डाला था।
೧೮ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.

< यिर्मयाह 41 >