< अय्यूब 3 >

1 इसके बाद अय्यूब मुँह खोलकर अपने जन्मदिन को धिक्कारने
ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
2 और कहने लगा,
ಯೋಬನು ಇಂತೆಂದನು,
3 “वह दिन नाश हो जाए जिसमें मैं उत्पन्न हुआ, और वह रात भी जिसमें कहा गया, ‘बेटे का गर्भ रहा।’
“ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ
4 वह दिन अंधियारा हो जाए! ऊपर से परमेश्वर उसकी सुधि न ले, और न उसमें प्रकाश होए।
ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
5 अंधियारा और मृत्यु की छाया उस पर रहे। बादल उस पर छाए रहें; और दिन को अंधेरा कर देनेवाली चीजें उसे डराएँ।
ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.
6 घोर अंधकार उस रात को पकड़े; वर्षा के दिनों के बीच वह आनन्द न करने पाए, और न महीनों में उसकी गिनती की जाए।
ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
7 सुनो, वह रात बाँझ हो जाए; उसमें गाने का शब्द न सुन पड़े
ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.
8 जो लोग किसी दिन को धिक्कारते हैं, और लिव्यातान को छेड़ने में निपुण हैं, उसे धिक्कारें।
ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
9 उसकी संध्या के तारे प्रकाश न दें; वह उजियाले की बाट जोहे पर वह उसे न मिले, वह भोर की पलकों को भी देखने न पाए;
ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
10 १० क्योंकि उसने मेरी माता की कोख को बन्द न किया और कष्ट को मेरी दृष्टि से न छिपाया।
೧೦ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.
11 ११ “मैं गर्भ ही में क्यों न मर गया? पेट से निकलते ही मेरा प्राण क्यों न छूटा?
೧೧ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
12 १२ मैं घुटनों पर क्यों लिया गया? मैं छातियों को क्यों पीने पाया?
೧೨ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?
13 १३ ऐसा न होता तो मैं चुपचाप पड़ा रहता, मैं सोता रहता और विश्राम करता,
೧೩ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.
14 १४ और मैं पृथ्वी के उन राजाओं और मंत्रियों के साथ होता जिन्होंने अपने लिये सुनसान स्थान बनवा लिए,
೧೪ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.
15 १५ या मैं उन राजकुमारों के साथ होता जिनके पास सोना था जिन्होंने अपने घरों को चाँदी से भर लिया था;
೧೫ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
16 १६ या मैं असमय गिरे हुए गर्भ के समान हुआ होता, या ऐसे बच्चों के समान होता जिन्होंने उजियाले को कभी देखा ही न हो।
೧೬ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
17 १७ उस दशा में दुष्ट लोग फिर दुःख नहीं देते, और थके-माँदे विश्राम पाते हैं।
೧೭ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.
18 १८ उसमें बन्धुए एक संग सुख से रहते हैं; और परिश्रम करानेवाले का शब्द नहीं सुनते।
೧೮ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
19 १९ उसमें छोटे बड़े सब रहते हैं, और दास अपने स्वामी से स्वतंत्र रहता है।
೧೯ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.
20 २० “दुःखियों को उजियाला, और उदास मनवालों को जीवन क्यों दिया जाता है?
೨೦ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
21 २१ वे मृत्यु की बाट जोहते हैं पर वह आती नहीं; और गड़े हुए धन से अधिक उसकी खोज करते हैं;
೨೧ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
22 २२ वे कब्र को पहुँचकर आनन्दित और अत्यन्त मगन होते हैं।
೨೨ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.
23 २३ उजियाला उस पुरुष को क्यों मिलता है जिसका मार्ग छिपा है, जिसके चारों ओर परमेश्वर ने घेरा बाँध दिया है?
೨೩ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?
24 २४ मुझे तो रोटी खाने के बदले लम्बी-लम्बी साँसें आती हैं, और मेरा विलाप धारा के समान बहता रहता है।
೨೪ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
25 २५ क्योंकि जिस डरावनी बात से मैं डरता हूँ, वही मुझ पर आ पड़ती है, और जिस बात से मैं भय खाता हूँ वही मुझ पर आ जाती है।
೨೫ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.
26 २६ मुझे न तो चैन, न शान्ति, न विश्राम मिलता है; परन्तु दुःख ही दुःख आता है।”
೨೬ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”

< अय्यूब 3 >