< यहोशू 24 >

1 फिर यहोशू ने इस्राएल के सब गोत्रों को शेकेम में इकट्ठा किया, और इस्राएल के वृद्ध लोगों, और मुख्य पुरुषों, और न्यायियों, और सरदारों को बुलवाया; और वे परमेश्वर के सामने उपस्थित हुए।
ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.
2 तब यहोशू ने उन सब लोगों से कहा, “इस्राएल का परमेश्वर यहोवा इस प्रकार कहता है, कि ‘प्राचीनकाल में अब्राहम और नाहोर का पिता तेरह आदि, तुम्हारे पुरखा फरात महानद के उस पार रहते हुए दूसरे देवताओं की उपासना करते थे।
ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
3 और मैंने तुम्हारे मूलपुरुष अब्राहम को फरात के उस पार से ले आकर कनान देश के सब स्थानों में फिराया, और उसका वंश बढ़ाया। और उसे इसहाक को दिया;
ಆದರೆ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿ ಇದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ಕರೆದುಕೊಂಡು ಬಂದು, ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ, ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು. ಅವನಿಗೆ ಇಸಾಕನನ್ನು ಕೊಟ್ಟೆನು.
4 फिर मैंने इसहाक को याकूब और एसाव दिया। और एसाव को मैंने सेईर नामक पहाड़ी देश दिया कि वह उसका अधिकारी हो, परन्तु याकूब बेटों-पोतों समेत मिस्र को गया।
ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.
5 फिर मैंने मूसा और हारून को भेजकर उन सब कामों के द्वारा जो मैंने मिस्र में किए उस देश को मारा; और उसके बाद तुम को निकाल लाया।
“‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು.
6 और मैं तुम्हारे पुरखाओं को मिस्र में से निकाल लाया, और तुम समुद्र के पास पहुँचे; और मिस्रियों ने रथ और सवारों को संग लेकर लाल समुद्र तक तुम्हारा पीछा किया।
ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು.
7 और जब तुम ने यहोवा की दुहाई दी तब उसने तुम्हारे और मिस्रियों के बीच में अंधियारा कर दिया, और उन पर समुद्र को बहाकर उनको डुबा दिया; और जो कुछ मैंने मिस्र में किया उसे तुम लोगों ने अपनी आँखों से देखा; फिर तुम बहुत दिन तक जंगल में रहे।
ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.
8 तब मैं तुम को उन एमोरियों के देश में ले आया, जो यरदन के उस पार बसे थे; और वे तुम से लड़े और मैंने उन्हें तुम्हारे वश में कर दिया, और तुम उनके देश के अधिकारी हो गए, और मैंने उनका तुम्हारे सामने से सत्यानाश कर डाला।
“‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
9 फिर मोआब के राजा सिप्पोर का पुत्र बालाक उठकर इस्राएल से लड़ा; और तुम्हें श्राप देने के लिये बोर के पुत्र बिलाम को बुलवा भेजा,
ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
10 १० परन्तु मैंने बिलाम की नहीं सुनी; वह तुम को आशीष ही आशीष देता गया; इस प्रकार मैंने तुम को उसके हाथ से बचाया।
ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
11 ११ तब तुम यरदन पार होकर यरीहो के पास आए, और जब यरीहो के लोग, और एमोरी, परिज्जी, कनानी, हित्ती, गिर्गाशी, हिब्बी, और यबूसी तुम से लड़े, तब मैंने उन्हें तुम्हारे वश में कर दिया।
“‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
12 १२ और मैंने तुम्हारे आगे बर्रों को भेजा, और उन्होंने एमोरियों के दोनों राजाओं को तुम्हारे सामने से भगा दिया; देखो, यह तुम्हारी तलवार या धनुष का काम नहीं हुआ।
ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.
13 १३ फिर मैंने तुम्हें ऐसा देश दिया जिसमें तुम ने परिश्रम न किया था, और ऐसे नगर भी दिए हैं जिन्हें तुम ने न बसाया था, और तुम उनमें बसे हो; और जिन दाख और जैतून के बगीचों के फल तुम खाते हो उन्हें तुम ने नहीं लगाया था।’
ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.
14 १४ “इसलिए अब यहोवा का भय मानकर उसकी सेवा खराई और सच्चाई से करो; और जिन देवताओं की सेवा तुम्हारे पुरखा फरात के उस पार और मिस्र में करते थे, उन्हें दूर करके यहोवा की सेवा करो।
“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.
15 १५ और यदि यहोवा की सेवा करनी तुम्हें बुरी लगे, तो आज चुन लो कि तुम किसकी सेवा करोगे, चाहे उन देवताओं की जिनकी सेवा तुम्हारे पुरखा महानद के उस पार करते थे, और चाहे एमोरियों के देवताओं की सेवा करो जिनके देश में तुम रहते हो; परन्तु मैं तो अपने घराने समेत यहोवा ही की सेवा नित करूँगा।”
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.
16 १६ तब लोगों ने उत्तर दिया, “यहोवा को त्याग कर दूसरे देवताओं की सेवा करनी हम से दूर रहे;
ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
17 १७ क्योंकि हमारा परमेश्वर यहोवा वही है जो हमको और हमारे पुरखाओं को दासत्व के घर, अर्थात् मिस्र देश से निकाल ले आया, और हमारे देखते बड़े-बड़े आश्चर्यकर्म किए, और जिस मार्ग पर और जितनी जातियों के मध्य में से हम चले आते थे उनमें हमारी रक्षा की;
ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.
18 १८ और हमारे सामने से इस देश में रहनेवाली एमोरी आदि सब जातियों को निकाल दिया है; इसलिए हम भी यहोवा की सेवा करेंगे, क्योंकि हमारा परमेश्वर वही है।”
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.
19 १९ यहोशू ने लोगों से कहा, “तुम से यहोवा की सेवा नहीं हो सकती; क्योंकि वह पवित्र परमेश्वर है; वह जलन रखनेवाला परमेश्वर है; वह तुम्हारे अपराध और पाप क्षमा न करेगा।
ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.
20 २० यदि तुम यहोवा को त्याग कर पराए देवताओं की सेवा करने लगोगे, तो यद्यपि वह तुम्हारा भला करता आया है तो भी वह फिरकर तुम्हारी हानि करेगा और तुम्हारा अन्त भी कर डालेगा।”
ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.
21 २१ लोगों ने यहोशू से कहा, “नहीं; हम यहोवा ही की सेवा करेंगे।”
ಅದಕ್ಕೆ ಜನರು ಯೆಹೋಶುವನಿಗೆ, “ಇಲ್ಲ! ನಾವು ಯೆಹೋವ ದೇವರನ್ನೇ ಸೇವಿಸುವೆವು,” ಎಂದರು.
22 २२ यहोशू ने लोगों से कहा, “तुम आप ही अपने साक्षी हो कि तुम ने यहोवा की सेवा करनी चुन ली है।” उन्होंने कहा, “हाँ, हम साक्षी हैं।”
ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.
23 २३ यहोशू ने कहा, “अपने बीच में से पराए देवताओं को दूर करके अपना-अपना मन इस्राएल के परमेश्वर यहोवा की ओर लगाओ।”
ಆಗ ಯೆಹೋಶುವನು ಅವರಿಗೆ, “ಹಾಗಾದರೆ, ಈಗ ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೊರೆದು, ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಸಿರಿ,” ಎಂದನು.
24 २४ लोगों ने यहोशू से कहा, “हम तो अपने परमेश्वर यहोवा ही की सेवा करेंगे, और उसी की बात मानेंगे।”
ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು.
25 २५ तब यहोशू ने उसी दिन उन लोगों से वाचा बँधाई, और शेकेम में उनके लिये विधि और नियम ठहराया।
ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
26 २६ यह सारा वृत्तान्त यहोशू ने परमेश्वर की व्यवस्था की पुस्तक में लिख दिया; और एक बड़ा पत्थर चुनकर वहाँ उस बांज वृक्ष के तले खड़ा किया, जो यहोवा के पवित्रस्थान में था।
ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.
27 २७ तब यहोशू ने सब लोगों से कहा, “सुनो, यह पत्थर हम लोगों का साक्षी रहेगा, क्योंकि जितने वचन यहोवा ने हम से कहे हैं उन्हें इसने सुना है; इसलिए यह तुम्हारा साक्षी रहेगा, ऐसा न हो कि तुम अपने परमेश्वर से मुकर जाओ।”
ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.
28 २८ तब यहोशू ने लोगों को अपने-अपने निज भाग पर जाने के लिये विदा किया।
ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು.
29 २९ इन बातों के बाद यहोवा का दास, नून का पुत्र यहोशू, एक सौ दस वर्ष का होकर मर गया।
ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು.
30 ३० और उसको तिम्नत्सेरह में, जो एप्रैम के पहाड़ी देश में गाश नामक पहाड़ के उत्तर में है, उसी के भाग में मिट्टी दी गई।
ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.
31 ३१ और यहोशू के जीवन भर, और जो वृद्ध लोग यहोशू के मरने के बाद जीवित रहे और जानते थे कि यहोवा ने इस्राएल के लिये कैसे-कैसे काम किए थे, उनके भी जीवन भर इस्राएली यहोवा ही की सेवा करते रहे।
ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.
32 ३२ फिर यूसुफ की हड्डियाँ जिन्हें इस्राएली मिस्र से ले आए थे वे शेकेम की भूमि के उस भाग में गाड़ी गईं, जिसे याकूब ने शेकेम के पिता हमोर के पुत्रों से एक सौ चाँदी के सिक्कों में मोल लिया था; इसलिए वह यूसुफ की सन्तान का निज भाग हो गया।
ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.
33 ३३ और हारून का पुत्र एलीआजर भी मर गया; और उसको एप्रैम के पहाड़ी देश में उस पहाड़ी पर मिट्टी दी गई, जो उसके पुत्र पीनहास के नाम पर गिबत्पीनहास कहलाती है और उसको दे दी गई थी।
ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.

< यहोशू 24 >