< यहोशू 8 >
1 १ तब यहोवा ने यहोशू से कहा, “मत डर, और तेरा मन कच्चा न हो; कमर बाँधकर सब योद्धाओं को साथ ले, और आई पर चढ़ाई कर; सुन, मैंने आई के राजा को उसकी प्रजा और उसके नगर और देश समेत तेरे वश में कर दिया है।
ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
2 २ और जैसा तूने यरीहो और उसके राजा से किया वैसा ही आई और उसके राजा के साथ भी करना; केवल तुम पशुओं समेत उसकी लूट तो अपने लिये ले सकोगे; इसलिए उस नगर के पीछे की ओर अपने पुरुष घात में लगा दो।”
ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.
3 ३ अतः यहोशू ने सब योद्धाओं समेत आई पर चढ़ाई करने की तैयारी की; और यहोशू ने तीस हजार पुरुषों को जो शूरवीर थे चुनकर रात ही को आज्ञा देकर भेजा।
ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.
4 ४ और उनको यह आज्ञा दी, “सुनो, तुम उस नगर के पीछे की ओर घात लगाए बैठे रहना; नगर से बहुत दूर न जाना, और सब के सब तैयार रहना;
ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.
5 ५ और मैं अपने सब साथियों समेत उस नगर के निकट जाऊँगा। और जब वे पहले के समान हमारा सामना करने को निकलें, तब हम उनके आगे से भागेंगे;
ಆದರೆ ನಾನೂ, ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಸೇರುವೆವು. ಆಗ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
6 ६ तब वे यह सोचकर, कि वे पहले की भाँति हमारे सामने से भागे जाते हैं, हमारा पीछा करेंगे; इस प्रकार हम उनके सामने से भागकर उन्हें नगर से दूर निकाल ले जाएँगे;
ಆಗ ಅವರು, ‘ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿಹೋಗುತ್ತಾರೆ,’ ಎಂದು ಹೇಳಿಕೊಳ್ಳುವರು. ಪಟ್ಟಣದ ಬಳಿಯಿಂದ ದೂರದವರೆಗೂ ಅವರು ಬರುವವರೆಗೆ ನಾವು ಓಡಿ ಹೋಗುತ್ತಲೇ ಇರುವೆವು.
7 ७ तब तुम घात में से उठकर नगर को अपना कर लेना; क्योंकि तुम्हारा परमेश्वर यहोवा उसको तुम्हारे हाथ में कर देगा।
ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.
8 ८ और जब नगर को ले लो, तब उसमें आग लगाकर फूँक देना, यहोवा की आज्ञा के अनुसार ही काम करना; सुनो, मैंने तुम्हें आज्ञा दी है।”
ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು.
9 ९ तब यहोशू ने उनको भेज दिया; और वे घात में बैठने को चले गए, और बेतेल और आई के मध्य में और आई की पश्चिम की ओर बैठे रहे; परन्तु यहोशू उस रात को लोगों के बीच टिका रहा।
ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು.
10 १० यहोशू सवेरे उठा, और लोगों की गिनती करके इस्राएली वृद्ध लोगों समेत लोगों के आगे-आगे आई की ओर चला।
ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು.
11 ११ और उसके संग के सब योद्धा चढ़ गए, और आई नगर के निकट पहुँचकर उसके सामने उत्तर की ओर डेरे डाल दिए, और उनके और आई के बीच एक तराई थी।
ಅವನ ಸಂಗಡ ಇದ್ದ ಸೈನಿಕರೆಲ್ಲಾ ನಡೆದು ಪಟ್ಟಣದ ಸಮೀಪವಾಗಿ ಬಂದು ಸೇರಿ, ಆಯಿ ಎಂಬ ಪಟ್ಟಣದ ಉತ್ತರ ದಿಕ್ಕಿನಲ್ಲಿ ಪಾಳೆಯಲ್ಲಿ ಇಳಿದುಕೊಂಡರು. ಆದರೆ ಆಯಿ ಎಂಬ ಪಟ್ಟಣಕ್ಕೂ ಅವರಿಗೂ ಮಧ್ಯದಲ್ಲಿ ಒಂದು ಕಣಿವೆ ಇತ್ತು.
12 १२ तब उसने कोई पाँच हजार पुरुष चुनकर बेतेल और आई के मध्य नगर के पश्चिम की ओर उनको घात में बैठा दिया।
ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.
13 १३ और जब लोगों ने नगर के उत्तर ओर की सारी सेना को और उसके पश्चिम ओर घात में बैठे हुओं को भी ठिकाने पर कर दिया, तब यहोशू उसी रात तराई के बीच गया।
ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು.
14 १४ जब आई के राजा ने यह देखा, तब वे फुर्ती करके सवेरे उठे, और राजा अपनी सारी प्रजा को लेकर इस्राएलियों के सामने उनसे लड़ने को निकलकर ठहराए हुए स्थान पर जो अराबा के सामने है पहुँचा; और वह नहीं जानता था कि नगर की पिछली ओर लोग घात लगाए बैठे हैं।
ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.
15 १५ तब यहोशू और सब इस्राएली उनसे मानो हार मानकर जंगल का मार्ग लेकर भाग निकले।
ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು.
16 १६ तब नगर के सब लोग इस्राएलियों का पीछा करने को पुकार-पुकारके बुलाए गए; और वे यहोशू का पीछा करते हुए नगर से दूर निकल गए।
ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.
17 १७ और न आई में और न बेतेल में कोई पुरुष रह गया, जो इस्राएलियों का पीछा करने को न गया हो; और उन्होंने नगर को खुला हुआ छोड़कर इस्राएलियों का पीछा किया।
ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು.
18 १८ तब यहोवा ने यहोशू से कहा, “अपने हाथ का बर्छा आई की ओर बढ़ा; क्योंकि मैं उसे तेरे हाथ में दे दूँगा।” और यहोशू ने अपने हाथ के बर्छे को नगर की ओर बढ़ाया।
ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
19 १९ उसके हाथ बढ़ाते ही जो लोग घात में बैठे थे वे झटपट अपने स्थान से उठे, और दौड़कर नगर में प्रवेश किया और उसको ले लिया; और झटपट उसमें आग लगा दी।
ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು.
20 २० जब आई के पुरुषों ने पीछे की ओर फिरकर दृष्टि की, तो क्या देखा, कि नगर का धुआँ आकाश की ओर उठ रहा है; और उन्हें न तो इधर भागने की शक्ति रही, और न उधर, और जो लोग जंगल की ओर भागे जाते थे वे फिरकर अपने खदेड़नेवालों पर टूट पड़े।
ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.
21 २१ जब यहोशू और सब इस्राएलियों ने देखा कि घातियों ने नगर को ले लिया, और उसका धुआँ उठ रहा है, तब घूमकर आई के पुरुषों को मारने लगे।
ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು.
22 २२ और उनका सामना करने को दूसरे भी नगर से निकल आए; सो वे इस्राएलियों के बीच में पड़ गए, कुछ इस्राएली तो उनके आगे, और कुछ उनके पीछे थे; अतः उन्होंने उनको यहाँ तक मार डाला कि उनमें से न तो कोई बचने और न भागने पाया।
ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು.
23 २३ और आई के राजा को वे जीवित पकड़कर यहोशू के पास ले आए।
ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.
24 २४ और जब इस्राएली आई के सब निवासियों को मैदान में, अर्थात् उस जंगल में जहाँ उन्होंने उनका पीछा किया था घात कर चुके, और वे सब के सब तलवार से मारे गए यहाँ तक कि उनका अन्त ही हो गया, तब सब इस्राएलियों ने आई को लौटकर उसे भी तलवार से मारा।
ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
25 २५ और स्त्री पुरुष, सब मिलाकर जो उस दिन मारे गए वे बारह हजार थे, और आई के सब पुरुष इतने ही थे।
ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು.
26 २६ क्योंकि जब तक यहोशू ने आई के सब निवासियों का सत्यानाश न कर डाला तब तक उसने अपना हाथ, जिससे बर्छा बढ़ाया था, फिर न खींचा।
ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.
27 २७ यहोवा की उस आज्ञा के अनुसार जो उसने यहोशू को दी थी इस्राएलियों ने पशु आदि नगर की लूट अपनी कर ली।
ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು.
28 २८ तब यहोशू ने आई को फुँकवा दिया, और उसे सदा के लिये खण्डहर कर दिया: वह आज तक उजाड़ पड़ा है।
ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.
29 २९ और आई के राजा को उसने साँझ तक वृक्ष पर लटका रखा; और सूर्य डूबते-डूबते यहोशू की आज्ञा से उसका शव वृक्ष पर से उतारकर नगर के फाटक के सामने डाल दिया गया, और उस पर पत्थरों का बड़ा ढेर लगा दिया, जो आज तक बना है।
ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.
30 ३० तब यहोशू ने इस्राएल के परमेश्वर यहोवा के लिये एबाल पर्वत पर एक वेदी बनवाई,
ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.
31 ३१ जैसा यहोवा के दास मूसा ने इस्राएलियों को आज्ञा दी थी, और जैसा मूसा की व्यवस्था की पुस्तक में लिखा है, उसने समूचे पत्थरों की एक वेदी बनवाई जिस पर औज़ार नहीं चलाया गया था। और उस पर उन्होंने यहोवा के लिये होमबलि चढ़ाए, और मेलबलि किए।
ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.
32 ३२ उसी स्थान पर यहोशू ने इस्राएलियों के सामने उन पत्थरों के ऊपर मूसा की व्यवस्था, जो उसने लिखी थी, उसकी नकल कराई।
ಅಲ್ಲಿ ಅವನು ಇಸ್ರಾಯೇಲರ ಸಮಕ್ಷಮದಲ್ಲಿ ಮೋಶೆ ಬರೆದಿದ್ದ ಮೋಶೆಯ ನಿಯಮದ ಪ್ರತಿಯನ್ನು ಬರೆದನು.
33 ३३ और वे, क्या देशी क्या परदेशी, सारे इस्राएली अपने वृद्ध लोगों, सरदारों, और न्यायियों समेत यहोवा की वाचा का सन्दूक उठानेवाले लेवीय याजकों के सामने उस सन्दूक के इधर-उधर खड़े हुए, अर्थात् आधे लोग तो गिरिज्जीम पर्वत के, और आधे एबाल पर्वत के सामने खड़े हुए, जैसा कि यहोवा के दास मूसा ने पहले आज्ञा दी थी, कि इस्राएली प्रजा को आशीर्वाद दिए जाएँ।
ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.
34 ३४ उसके बाद उसने आशीष और श्राप की व्यवस्था के सारे वचन, जैसे-जैसे व्यवस्था की पुस्तक में लिखे हुए हैं, वैसे-वैसे पढ़ पढ़कर सुना दिए।
ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು.
35 ३५ जितनी बातों की मूसा ने आज्ञा दी थी, उनमें से कोई ऐसी बात नहीं रह गई जो यहोशू ने इस्राएल की सारी सभा, और स्त्रियों, और बाल-बच्चों, और उनके साथ रहनेवाले परदेशी लोगों के सामने भी पढ़कर न सुनाई।
ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.