< न्यायियों 4 >
1 १ जब एहूद मर गया तब इस्राएलियों ने फिर यहोवा की दृष्टि में बुरा किया।
೧ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
2 २ इसलिए यहोवा ने उनको हासोर में विराजनेवाले कनान के राजा याबीन के अधीन कर दिया, जिसका सेनापति सीसरा था, जो अन्यजातियों के हरोशेत का निवासी था।
೨ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
3 ३ तब इस्राएलियों ने यहोवा की दुहाई दी; क्योंकि सीसरा के पास लोहे के नौ सौ रथ थे, और वह इस्राएलियों पर बीस वर्ष तक बड़ा अंधेर करता रहा।
೩ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
4 ४ उस समय लप्पीदोत की स्त्री दबोरा जो नबिया थी इस्राएलियों का न्याय करती थी।
೪ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.
5 ५ वह एप्रैम के पहाड़ी देश में रामाह और बेतेल के बीच में दबोरा के खजूर के तले बैठा करती थी, और इस्राएली उसके पास न्याय के लिये जाया करते थे।
೫ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
6 ६ उसने अबीनोअम के पुत्र बाराक को केदेश नप्ताली में से बुलाकर कहा, “क्या इस्राएल के परमेश्वर यहोवा ने यह आज्ञा नहीं दी, कि तू जाकर ताबोर पहाड़ पर चढ़, और नप्तालियों और जबूलूनियों में के दस हजार पुरुषों को संग ले जा?
೬ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
7 ७ तब मैं याबीन के सेनापति सीसरा को रथों और भीड़भाड़ समेत कीशोन नदी तक तेरी ओर खींच ले आऊँगा; और उसको तेरे हाथ में कर दूँगा।”
೭ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
8 ८ बाराक ने उससे कहा, “यदि तू मेरे संग चलेगी तो मैं जाऊँगा, नहीं तो न जाऊँगा।”
೮ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
9 ९ उसने कहा, “निःसन्देह मैं तेरे संग चलूँगी; तो भी इस यात्रा से तेरी कुछ बढ़ाई न होगी, क्योंकि यहोवा सीसरा को एक स्त्री के अधीन कर देगा।” तब दबोरा उठकर बाराक के संग केदेश को गई।
೯ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
10 १० तब बाराक ने जबूलून और नप्ताली के लोगों को केदेश में बुलवा लिया; और उसके पीछे दस हजार पुरुष चढ़ गए; और दबोरा उसके संग चढ़ गई।
೧೦ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
11 ११ हेबेर नामक केनी ने उन केनियों में से, जो मूसा के साले होबाब के वंश के थे, अपने को अलग करके केदेश के पास के सानन्नीम के बांज वृक्ष तक जाकर अपना डेरा वहीं डाला था।
೧೧(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
12 १२ जब सीसरा को यह समाचार मिला कि अबीनोअम का पुत्र बाराक ताबोर पहाड़ पर चढ़ गया है,
೧೨ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
13 १३ तब सीसरा ने अपने सब रथ, जो लोहे के नौ सौ रथ थे, और अपने संग की सारी सेना को अन्यजातियों के हरोशेत से कीशोन नदी पर बुलवाया।
೧೩ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.
14 १४ तब दबोरा ने बाराक से कहा, “उठ! क्योंकि आज वह दिन है जिसमें यहोवा सीसरा को तेरे हाथ में कर देगा। क्या यहोवा तेरे आगे नहीं निकला है?” इस पर बाराक और उसके पीछे-पीछे दस हजार पुरुष ताबोर पहाड़ से उतर पड़े।
೧೪ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
15 १५ तब यहोवा ने सारे रथों वरन् सारी सेना समेत सीसरा को तलवार से बाराक के सामने घबरा दिया; और सीसरा रथ पर से उतरकर पाँव-पाँव भाग चला।
೧೫ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
16 १६ और बाराक ने अन्यजातियों के हरोशेत तक रथों और सेना का पीछा किया, और तलवार से सीसरा की सारी सेना नष्ट की गई; और एक भी मनुष्य न बचा।
೧೬ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
17 १७ परन्तु सीसरा पाँव-पाँव हेबेर केनी की स्त्री याएल के डेरे को भाग गया; क्योंकि हासोर के राजा याबीन और हेबेर केनी में मेल था।
೧೭ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
18 १८ तब याएल सीसरा की भेंट के लिये निकलकर उससे कहने लगी, “हे मेरे प्रभु, आ, मेरे पास आ, और न डर।” तब वह उसके पास डेरे में गया, और उसने उसके ऊपर कम्बल डाल दिया।
೧೮ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
19 १९ तब सीसरा ने उससे कहा, “मुझे प्यास लगी है, मुझे थोड़ा पानी पिला।” तब उसने दूध की कुप्पी खोलकर उसे दूध पिलाया, और उसको ओढ़ा दिया।
೧೯ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
20 २० तब उसने उससे कहा, “डेरे के द्वार पर खड़ी रह, और यदि कोई आकर तुझ से पूछे, ‘यहाँ कोई पुरुष है?’ तब कहना, ‘कोई भी नहीं।’”
೨೦ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
21 २१ इसके बाद हेबेर की स्त्री याएल ने डेरे की एक खूँटी ली, और अपने हाथ में एक हथौड़ा भी लिया, और दबे पाँव उसके पास जाकर खूँटी को उसकी कनपटी में ऐसा ठोक दिया कि खूँटी पार होकर भूमि में धँस गई; वह तो थका था ही इसलिए गहरी नींद में सो रहा था। अतः वह मर गया।
೨೧ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
22 २२ जब बाराक सीसरा का पीछा करता हुआ आया, तब याएल उससे भेंट करने के लिये निकली, और कहा, “इधर आ, जिसका तू खोजी है उसको मैं तुझे दिखाऊँगी।” तब उसने उसके साथ जाकर क्या देखा; कि सीसरा मरा पड़ा है, और वह खूँटी उसकी कनपटी में गड़ी है।
೨೨ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.
23 २३ इस प्रकार परमेश्वर ने उस दिन कनान के राजा याबीन को इस्राएलियों के सामने नीचा दिखाया।
೨೩ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.
24 २४ और इस्राएली कनान के राजा याबीन पर प्रबल होते गए, यहाँ तक कि उन्होंने कनान के राजा याबीन को नष्ट कर डाला।
೨೪ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.