< न्यायियों 7 >
1 १ तब गिदोन जो यरूब्बाल भी कहलाता है और सब लोग जो उसके संग थे सवेरे उठे, और हरोद नामक सोते के पास अपने डेरे खड़े किए; और मिद्यानियों की छावनी उनके उत्तरी ओर मोरे नामक पहाड़ी के पास तराई में पड़ी थी।
೧ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
2 २ तब यहोवा ने गिदोन से कहा, “जो लोग तेरे संग हैं वे इतने हैं कि मैं मिद्यानियों को उनके हाथ नहीं कर सकता, नहीं तो इस्राएल यह कहकर मेरे विरुद्ध अपनी बड़ाई मारने लगेंगे, कि हम अपने ही भुजबल के द्वारा बचे हैं।
೨ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
3 ३ इसलिए तू जाकर लोगों में यह प्रचार करके सुना दे, ‘जो कोई डर के मारे थरथराता हो, वह गिलाद पहाड़ से लौटकर चला जाए।’” तब बाईस हजार लोग लौट गए, और केवल दस हजार रह गए।
೩ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
4 ४ फिर यहोवा ने गिदोन से कहा, “अब भी लोग अधिक हैं; उन्हें सोते के पास नीचे ले चल, वहाँ मैं उन्हें तेरे लिये परखूँगा; और जिस जिसके विषय में मैं तुझ से कहूँ, ‘यह तेरे संग चले,’ वह तो तेरे संग चले; और जिस जिसके विषय में मैं कहूँ, ‘यह तेरे संग न जाए,’ वह न जाए।”
೪ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.
5 ५ तब वह उनको सोते के पास नीचे ले गया; वहाँ यहोवा ने गिदोन से कहा, “जितने कुत्ते की समान जीभ से पानी चपड़-चपड़ करके पीएँ उनको अलग रख; और वैसा ही उन्हें भी जो घुटने टेककर पीएँ।”
೫ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
6 ६ जिन्होंने मुँह में हाथ लगाकर चपड़-चपड़ करके पानी पिया उनकी तो गिनती तीन सौ ठहरी; और बाकी सब लोगों ने घुटने टेककर पानी पिया।
೬ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.
7 ७ तब यहोवा ने गिदोन से कहा, “इन तीन सौ चपड़-चपड़ करके पीनेवालों के द्वारा मैं तुम को छुड़ाऊँगा, और मिद्यानियों को तेरे हाथ में कर दूँगा; और अन्य लोग अपने-अपने स्थान को लौट जाए।”
೭ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
8 ८ तब उन तीन सौ लोगों ने अपने साथ भोजन सामग्री ली और अपने-अपने नरसिंगे लिए; और उसने इस्राएल के अन्य सब पुरुषों को अपने-अपने डेरे की ओर भेज दिया, परन्तु उन तीन सौ पुरुषों को अपने पास रख छोड़ा; और मिद्यान की छावनी उसके नीचे तराई में पड़ी थी।
೮ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
9 ९ उसी रात को यहोवा ने उससे कहा, “उठ, छावनी पर चढ़ाई कर; क्योंकि मैं उसे तेरे हाथ कर देता हूँ।
೯ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
10 १० परन्तु यदि तू चढ़ाई करते डरता हो, तो अपने सेवक फूरा को संग लेकर छावनी के पास जाकर सुन,
೧೦ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
11 ११ कि वे क्या कह रहे हैं; उसके बाद तुझे उस छावनी पर चढ़ाई करने का हियाव होगा।” तब वह अपने सेवक फूरा को संग ले उन हथियार-बन्दों के पास जो छावनी के छोर पर थे उतर गया।
೧೧ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.
12 १२ मिद्यानी और अमालेकी और सब पूर्वी लोग तो टिड्डियों के समान बहुत से तराई में फैले पड़े थे; और उनके ऊँट समुद्र तट के रेतकणों के समान गिनती से बाहर थे।
೧೨ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
13 १३ जब गिदोन वहाँ आया, तब एक जन अपने किसी संगी को अपना स्वप्न बता रहा था, “सुन, मैंने स्वप्न में क्या देखा है कि जौ की एक रोटी लुढ़कते-लुढ़कते मिद्यान की छावनी में आई, और डेरे को ऐसी टक्कर मारी कि वह गिर गया, और उसको ऐसा उलट दिया, कि डेरा गिरा पड़ा रहा।”
೧೩ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
14 १४ उसके संगी ने उत्तर दिया, “यह योआश के पुत्र गिदोन नामक एक इस्राएली पुरुष की तलवार को छोड़ कुछ नहीं है; उसी के हाथ में परमेश्वर ने मिद्यान को सारी छावनी समेत कर दिया है।”
೧೪ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
15 १५ उस स्वप्न का वर्णन और फल सुनकर गिदोन ने दण्डवत् किया; और इस्राएल की छावनी में लौटकर कहा, “उठो, यहोवा ने मिद्यानी सेना को तुम्हारे वश में कर दिया है।”
೧೫ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
16 १६ तब उसने उन तीन सौ पुरुषों के तीन झुण्ड किए, और एक-एक पुरुष के हाथ में एक नरसिंगा और खाली घड़ा दिया, और घड़ों के भीतर एक मशाल थी।
೧೬ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
17 १७ फिर उसने उनसे कहा, “मुझे देखो, और वैसा ही करो; सुनो, जब मैं उस छावनी की छोर पर पहुँचूँ, तब जैसा मैं करूँ वैसा ही तुम भी करना।
೧೭“ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.
18 १८ अर्थात् जब मैं और मेरे सब संगी नरसिंगा फूँकें तब तुम भी छावनी के चारों ओर नरसिंगे फूँकना, और ललकारना, ‘यहोवा की और गिदोन की तलवार।’”
೧೮ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
19 १९ बीचवाले पहर के आरम्भ में जैसे ही पहरुओं की बदली हो गई थी वैसे ही गिदोन अपने संग के सौ पुरुषों समेत छावनी के छोर पर गया; और नरसिंगे को फूँक दिया और अपने हाथ के घड़ों को तोड़ डाला।
೧೯ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
20 २० तब तीनों झुण्डों ने नरसिंगों को फूँका और घड़ों को तोड़ डाला; और अपने-अपने बाएँ हाथ में मशाल और दाहिने हाथ में फूँकने को नरसिंगा लिए हुए चिल्ला उठे, ‘यहोवा की तलवार और गिदोन की तलवार।’
೨೦ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
21 २१ तब वे छावनी के चारों ओर अपने-अपने स्थान पर खड़े रहे, और सब सेना के लोग दौड़ने लगे; और उन्होंने चिल्ला चिल्लाकर उन्हें भगा दिया।
೨೧ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
22 २२ और उन्होंने तीन सौ नरसिंगों को फूँका, और यहोवा ने एक-एक पुरुष की तलवार उसके संगी पर और सब सेना पर चलवाई; तो सेना के लोग सरेरा की ओर बेतशित्ता तक और तब्बात के पास के आबेल-महोला तक भाग गए।
೨೨ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
23 २३ तब इस्राएली पुरुष नप्ताली और आशेर और मनश्शे के सारे देश से इकट्ठे होकर मिद्यानियों के पीछे पड़े।
೨೩ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
24 २४ और गिदोन ने एप्रैम के सब पहाड़ी देश में यह कहने को दूत भेज दिए, “मिद्यानियों से मुठभेड़ करने को चले आओ, और यरदन नदी के घाटों को बेतबारा तक उनसे पहले अपने वश में कर लो।” तब सब एप्रैमी पुरुषों ने इकट्ठे होकर यरदन नदी को बेतबारा तक अपने वश में कर लिया।
೨೪ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
25 २५ और उन्होंने ओरेब और जेब नाम मिद्यान के दो हाकिमों को पकड़ा; और ओरेब को ओरेब नामक चट्टान पर, और जेब को जेब नामक दाखरस के कुण्ड पर घात किया; और वे मिद्यानियों के पीछे पड़े; और ओरेब और जेब के सिर यरदन के पार गिदोन के पास ले गए।
೨೫ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.