< न्यायियों 8 >

1 तब एप्रैमी पुरुषों ने गिदोन से कहा, “तूने हमारे साथ ऐसा बर्ताव क्यों किया है, कि जब तू मिद्यान से लड़ने को चला तब हमको नहीं बुलवाया?” अतः उन्होंने उससे बड़ा झगड़ा किया।
ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.
2 उसने उनसे कहा, “मैंने तुम्हारे समान भला अब किया ही क्या है? क्या एप्रैम की छोड़ी हुई दाख भी अबीएजेर की सब फसल से अच्छी नहीं है?
ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
3 तुम्हारे ही हाथों में परमेश्वर ने ओरेब और जेब नामक मिद्यान के हाकिमों को कर दिया; तब तुम्हारे बराबर मैं कर ही क्या सका?” जब उसने यह बात कही, तब उनका जी उसकी ओर से ठंडा हो गया।
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
4 तब गिदोन और उसके संग तीन सौ पुरुष, जो थके-माँदे थे तो भी खदेड़ते ही रहे थे, यरदन के किनारे आकर पार हो गए।
ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
5 तब उसने सुक्कोत के लोगों से कहा, “मेरे पीछे इन आनेवालों को रोटियाँ दो, क्योंकि ये थके-माँदे हैं; और मैं मिद्यान के जेबह और सल्मुन्ना नामक राजाओं का पीछा कर रहा हूँ।”
ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
6 सुक्कोत के हाकिमों ने उत्तर दिया, “क्या जेबह और सल्मुन्ना तेरे हाथ में पड़ चुके हैं, कि हम तेरी सेना को रोटी दें?”
ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.
7 गिदोन ने कहा, “जब यहोवा जेबह और सल्मुन्ना को मेरे हाथ में कर देगा, तब मैं इस बात के कारण तुम को जंगल के कटीले और बिच्छू पेड़ों से नुचवाऊँगा।”
ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.
8 वहाँ से वह पनूएल को गया, और वहाँ के लोगों से ऐसी ही बात कही; और पनूएल के लोगों ने सुक्कोत के लोगों का सा उत्तर दिया।
ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
9 उसने पनूएल के लोगों से कहा, “जब मैं कुशल से लौट आऊँगा, तब इस गुम्मट को ढा दूँगा।”
ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
10 १० जेबह और सल्मुन्ना तो कर्कोर में थे, और उनके साथ कोई पन्द्रह हजार पुरुषों की सेना थी, क्योंकि पूर्वियों की सारी सेना में से उतने ही रह गए थे; और जो मारे गए थे वे एक लाख बीस हजार हथियार-बन्द थे।
೧೦ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
11 ११ तब गिदोन ने नोबह और योगबहा के पूर्व की ओर डेरों में रहनेवालों के मार्ग में चढ़कर उस सेना को जो निडर पड़ी थी मार लिया।
೧೧ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.
12 १२ और जब जेबह और सल्मुन्ना भागे, तब उसने उनका पीछा करके मिद्यानियों के उन दोनों राजाओं अर्थात् जेबह और सल्मुन्ना को पकड़ लिया, और सारी सेना को भगा दिया।
೧೨ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
13 १३ और योआश का पुत्र गिदोन हेरेस नामक चढ़ाई पर से लड़ाई से लौटा।
೧೩ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,
14 १४ और सुक्कोत के एक जवान पुरुष को पकड़कर उससे पूछा, और उसने सुक्कोत के सतहत्तरों हाकिमों और वृद्ध लोगों के पते लिखवाए।
೧೪ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.
15 १५ तब वह सुक्कोत के मनुष्यों के पास जाकर कहने लगा, “जेबह और सल्मुन्ना को देखो, जिनके विषय में तुम ने यह कहकर मुझे चिढ़ाया था, कि क्या जेबह और सल्मुन्ना अभी तेरे हाथ में हैं, कि हम तेरे थके-माँदे जनों को रोटी दें?”
೧೫ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;
16 १६ तब उसने उस नगर के वृद्ध लोगों को पकड़ा, और जंगल के कटीले और बिच्छू पेड़ लेकर सुक्कोत के पुरुषों को कुछ सिखाया।
೧೬ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.
17 १७ और उसने पनूएल के गुम्मट को ढा दिया, और उस नगर के मनुष्यों को घात किया।
೧೭ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.
18 १८ फिर उसने जेबह और सल्मुन्ना से पूछा, “जो मनुष्य तुम ने ताबोर पर घात किए थे वे कैसे थे?” उन्होंने उत्तर दिया, “जैसा तू वैसे ही वे भी थे, अर्थात् एक-एक का रूप राजकुमार का सा था।”
೧೮ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
19 १९ उसने कहा, “वे तो मेरे भाई, वरन् मेरे सहोदर भाई थे; यहोवा के जीवन की शपथ, यदि तुम ने उनको जीवित छोड़ा होता, तो मैं तुम को घात न करता।”
೧೯ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ
20 २० तब उसने अपने जेठे पुत्र यतेरे से कहा, “उठकर इन्हें घात कर।” परन्तु जवान ने अपनी तलवार न खींची, क्योंकि वह उस समय तक लड़का ही था, इसलिए वह डर गया।
೨೦ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.
21 २१ तब जेबह और सल्मुन्ना ने कहा, “तू उठकर हम पर प्रहार कर; क्योंकि जैसा पुरुष हो, वैसा ही उसका पौरुष भी होगा।” तब गिदोन ने उठकर जेबह और सल्मुन्ना को घात किया; और उनके ऊँटों के गलों के चन्द्रहारों को ले लिया।
೨೧ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
22 २२ तब इस्राएल के पुरुषों ने गिदोन से कहा, “तू हमारे ऊपर प्रभुता कर, तू और तेरा पुत्र और पोता भी प्रभुता करे; क्योंकि तूने हमको मिद्यान के हाथ से छुड़ाया है।”
೨೨ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.
23 २३ गिदोन ने उनसे कहा, “मैं तुम्हारे ऊपर प्रभुता न करूँगा, और न मेरा पुत्र तुम्हारे ऊपर प्रभुता करेगा; यहोवा ही तुम पर प्रभुता करेगा।”
೨೩ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
24 २४ फिर गिदोन ने उनसे कहा, “मैं तुम से कुछ माँगता हूँ; अर्थात् तुम मुझ को अपनी-अपनी लूट में की बालियाँ दो। (वे तो इश्माएली थे, इस कारण उनकी बालियाँ सोने की थीं।)”
೨೪ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.
25 २५ उन्होंने कहा, “निश्चय हम देंगे।” तब उन्होंने कपड़ा बिछाकर उसमें अपनी-अपनी लूट में से निकालकर बालियाँ डाल दीं।
೨೫ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.
26 २६ जो सोने की बालियाँ उसने माँग लीं उनका तौल एक हजार सात सौ शेकेल हुआ; और उनको छोड़ चन्द्रहार, झुमके, और बैंगनी रंग के वस्त्र जो मिद्यानियों के राजा पहने थे, और उनके ऊँटों के गलों की जंजीर।
೨೬ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.
27 २७ उनका गिदोन ने एक एपोद बनवाकर अपने ओप्रा नामक नगर में रखा; और सारा इस्राएल वहाँ व्यभिचारिणी के समान उसके पीछे हो लिया, और वह गिदोन और उसके घराने के लिये फंदा ठहरा।
೨೭ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
28 २८ इस प्रकार मिद्यान इस्राएलियों से दब गया, और फिर सिर न उठाया। और गिदोन के जीवन भर अर्थात् चालीस वर्ष तक देश चैन से रहा।
೨೮ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.
29 २९ योआश का पुत्र यरूब्बाल जाकर अपने घर में रहने लगा।
೨೯ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.
30 ३० और गिदोन के सत्तर बेटे उत्पन्न हुए, क्योंकि उसकी बहुत स्त्रियाँ थीं।
೩೦ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.
31 ३१ और उसकी जो एक रखैल शेकेम में रहती थी उसको एक पुत्र उत्पन्न हुआ, और गिदोन ने उसका नाम अबीमेलेक रखा।
೩೧ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.
32 ३२ योआश का पुत्र गिदोन पूरे बुढ़ापे में मर गया, और अबीएजेरियों के ओप्रा नामक गाँव में उसके पिता योआश की कब्र में उसको मिट्टी दी गई।
೩೨ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.
33 ३३ गिदोन के मरते ही इस्राएली फिर गए, और व्यभिचारिणी के समान बाल देवताओं के पीछे हो लिए, और बाल-बरीत को अपना देवता मान लिया।
೩೩ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
34 ३४ और इस्राएलियों ने अपने परमेश्वर यहोवा को, जिसने उनको चारों ओर के सब शत्रुओं के हाथ से छुड़ाया था, स्मरण न रखा;
೩೪ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.
35 ३५ और न उन्होंने यरूब्बाल अर्थात् गिदोन की उस सारी भलाई के अनुसार जो उसने इस्राएलियों के साथ की थी उसके घराने को प्रीति दिखाई।
೩೫ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.

< न्यायियों 8 >