< भजन संहिता 124 >
1 १ दाऊद की यात्रा का गीत इस्राएल यह कहे, कि यदि हमारी ओर यहोवा न होता,
೧ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.
2 २ यदि यहोवा उस समय हमारी ओर न होता जब मनुष्यों ने हम पर चढ़ाई की,
೨ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,
3 ३ तो वे हमको उसी समय जीवित निगल जाते, जब उनका क्रोध हम पर भड़का था,
೩“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
4 ४ हम उसी समय जल में डूब जाते और धारा में बह जाते;
೪ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
5 ५ उमड़ते जल में हम उसी समय ही बह जाते।
೫ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”
6 ६ धन्य है यहोवा, जिसने हमको उनके दाँतों तले जाने न दिया!
೬ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7 ७ हमारा जीव पक्षी के समान चिड़ीमार के जाल से छूट गया; जाल फट गया और हम बच निकले!
೭ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
8 ८ यहोवा जो आकाश और पृथ्वी का कर्ता है, हमारी सहायता उसी के नाम से होती है।
೮ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.