< रोमियों 6 >

1 तो हम क्या कहें? क्या हम पाप करते रहें कि अनुग्रह बहुत हो?
ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
2 कदापि नहीं! हम जब पाप के लिये मर गए तो फिर आगे को उसमें कैसे जीवन बिताएँ?
ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3 क्या तुम नहीं जानते कि हम सब जितनों ने मसीह यीशु का बपतिस्मा लिया तो उसकी मृत्यु का बपतिस्मा लिया?
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4 इसलिए उस मृत्यु का बपतिस्मा पाने से हम उसके साथ गाड़े गए, ताकि जैसे मसीह पिता की महिमा के द्वारा मरे हुओं में से जिलाया गया, वैसे ही हम भी नये जीवन के अनुसार चाल चलें।
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5 क्योंकि यदि हम उसकी मृत्यु की समानता में उसके साथ जुट गए हैं, तो निश्चय उसके जी उठने की समानता में भी जुट जाएँगे।
ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6 क्योंकि हम जानते हैं कि हमारा पुराना मनुष्यत्व उसके साथ क्रूस पर चढ़ाया गया, ताकि पाप का शरीर नाश हो जाए, ताकि हम आगे को पाप के दासत्व में न रहें।
ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7 क्योंकि जो मर गया, वह पाप से मुक्त हो गया है।
ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8 इसलिए यदि हम मसीह के साथ मर गए, तो हमारा विश्वास यह है कि उसके साथ जीएँगे भी,
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9 क्योंकि हम जानते है कि मसीह मरे हुओं में से जी उठा और फिर कभी नहीं मरेगा। मृत्यु उस पर प्रभुता नहीं करती।
ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10 १० क्योंकि वह जो मर गया तो पाप के लिये एक ही बार मर गया; परन्तु जो जीवित है, तो परमेश्वर के लिये जीवित है।
೧೦ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11 ११ ऐसे ही तुम भी अपने आपको पाप के लिये तो मरा, परन्तु परमेश्वर के लिये मसीह यीशु में जीवित समझो।
೧೧ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
12 १२ इसलिए पाप तुम्हारे नाशवान शरीर में राज्य न करे, कि तुम उसकी लालसाओं के अधीन रहो।
೧೨ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13 १३ और न अपने अंगों को अधर्म के हथियार होने के लिये पाप को सौंपो, पर अपने आपको मरे हुओं में से जी उठा हुआ जानकर परमेश्वर को सौंपो, और अपने अंगों को धार्मिकता के हथियार होने के लिये परमेश्वर को सौंपो।
೧೩ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14 १४ तब तुम पर पाप की प्रभुता न होगी, क्योंकि तुम व्यवस्था के अधीन नहीं वरन् अनुग्रह के अधीन हो।
೧೪ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15 १५ तो क्या हुआ? क्या हम इसलिए पाप करें कि हम व्यवस्था के अधीन नहीं वरन् अनुग्रह के अधीन हैं? कदापि नहीं!
೧೫ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16 १६ क्या तुम नहीं जानते कि जिसकी आज्ञा मानने के लिये तुम अपने आपको दासों के समान सौंप देते हो उसी के दास हो: चाहे पाप के, जिसका अन्त मृत्यु है, चाहे आज्ञा मानने के, जिसका अन्त धार्मिकता है?
೧೬ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
17 १७ परन्तु परमेश्वर का धन्यवाद हो, कि तुम जो पाप के दास थे अब मन से उस उपदेश के माननेवाले हो गए, जिसके साँचे में ढाले गए थे,
೧೭ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
18 १८ और पाप से छुड़ाए जाकर धार्मिकता के दास हो गए।
೧೮ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
19 १९ मैं तुम्हारी शारीरिक दुर्बलता के कारण मनुष्यों की रीति पर कहता हूँ। जैसे तुम ने अपने अंगों को अशुद्धता और कुकर्म के दास करके सौंपा था, वैसे ही अब अपने अंगों को पवित्रता के लिये धार्मिकता के दास करके सौंप दो।
೧೯ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20 २० जब तुम पाप के दास थे, तो धार्मिकता की ओर से स्वतंत्र थे।
೨೦ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21 २१ तो जिन बातों से अब तुम लज्जित होते हो, उनसे उस समय तुम क्या फल पाते थे? क्योंकि उनका अन्त तो मृत्यु है।
೨೧ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22 २२ परन्तु अब पाप से स्वतंत्र होकर और परमेश्वर के दास बनकर तुम को फल मिला जिससे पवित्रता प्राप्त होती है, और उसका अन्त अनन्त जीवन है। (aiōnios g166)
೨೨ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. (aiōnios g166)
23 २३ क्योंकि पाप की मजदूरी तो मृत्यु है, परन्तु परमेश्वर का वरदान हमारे प्रभु मसीह यीशु में अनन्त जीवन है। (aiōnios g166)
೨೩ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. (aiōnios g166)

< रोमियों 6 >