< 2 Sámuel 3 >
1 Hosszú volt a háború Sául háza és Dávid háza közt; Dávid egyre erősödött, Sául háza pedig egyre hanyatlott.
೧ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
2 És Dávidnak Chebrónban fiai születtek. Volt az elsőszülöttje Amnón, a Jizreélbeli Achinóamtól;
೨ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
3 másodszülöttje pedig Kileáb, Abígájiltól, a Karmellbeli Nábál feleségétől; a harmadik Absálóm, fia Máakhának, Talmáj Gesúr királya leányának;
೩ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
4 a negyedik Adóníja, Chaggít fia; az ötödik Sefatja, Abítál fia;
೪ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.
5 a hatodik Jitreám, Eglától, Dávid feleségétől. Ezek születtek Dávidnak Chebrónban.
೫ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.
6 Volt pedig, mialatt volt a háború Sául háza és Dávid háza közt és Abnér erősen tartotta Sául házát,
೬ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
7 Sáulnak pedig volt egy ágyasa, neve Riczpa, Ajja leánya – szólt Abnérhez: Miért mentél be atyám ágyasához?
೭ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
8 És nagyon megharagudott Abnér Isbóset szavai miatt és mondta: Vajon Jehúdabeli ebnek a feje vagy ok-e. E napon szeretetet cselekszem Sául atyád házával, testvérei iránt és barátai iránt és nem juttatlak Dávid kezébe és te felrósz nekem bűnt ez asszony miatt a napon!
೮ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9 Így tegyen Isten Abnérrel és így folytassa vele, bizony amint megesküdött az Örökkévaló Dávidnak, bizony úgy cselekszem majd irányában:
೯ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
10 eltávolítva a királyságot Sául házától és felállítva Dávid trónját Izrael fölött és Jehúda fölött Dántól Beér-Sébáig.
೧೦ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
11 S nem tudott többé felelni Abnérnek semmit, mivelhogy félt tőle.
೧೧ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
12 Ekkor küldött Abnér a helyéről követeket Dávidhoz, mondván: Kié az ország – mondván: kösd meg velem a szövetségedet, ímhol kezem veled van, hogy feléd fordítsam az egész Izraelt.
೧೨ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
13 Mondta: Jó, én szövetséget kötök veled, csakhogy egy dolgot kérek én tőled, mondván: ne lásd arcomat, hacsak előbb el nem hozod Míkhált, Sául leányát, amidőn eljössz látni arcomat.
೧೩ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.
14 És küldött Dávid követeket Isbósethez, Sául fiához, mondván: Adjad a feleségemet, Míkhált, kit eljegyeztem magamnak a filiszteusoknak száz előbőrén.
೧೪ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
15 Erre küldött Isbóset és elvette őt férjétől, Paltíéltől, Lájis fiától.
೧೫ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
16 És ment vele férje, menve és sírva mögötte Bachúrímig; ekkor szólt hozzá Abnér: Menj, térj vissza! És visszatért.
೧೬ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.
17 Abnér szava pedig volt Izrael véneihez, mondván: Tegnap és tegnapelőtt is Dávidot akartátok királyul magatok fölé.
೧೭ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
18 Most tehát cselekedjetek, mert az Örökkévaló szólt Dávid felől, mondván: Dávid szolgám keze által segítem meg népemet, Izraelt a filiszteusok kezéből és mind az ellenségeik kezéből.
೧೮ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
19 Beszélt is Abnér Benjámin fülei hallatára; el is ment Abnér, hogy elmondja Dávid fülei hallatára Chebrónban mindazt, mi jónak tetszett Izrael szemeiben és Benjámin egész házának szemeiben.
೧೯ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
20 Eljött Abnér Dávidhoz Chebrónba és vele húsz ember; és szerzett Dávid lakomát Abnér számára és a vele levő emberek számára.
೨೦ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
21 És szólt Abnér Dávidhoz: Hadd kelek föl, hogy menjek és összegyűjtsem uramhoz a királyhoz egész Izraelt, hogy szövetséget kössenek veled és király légy mindazon, amit kíván lelked. Erre elbocsátotta Dávid Abnért, és elment békében.
೨೧ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.
22 De íme Dávid szolgái meg Jóáb jöttek a hadjáratból, és sok zsákmányt hoztak magukkal; Abnér pedig nem volt Dávidnál Chebrónban, mert elbocsátotta, és elment békében.
೨೨ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
23 Jóáb és a vele levő egész sereg megérkeztek, ekkor tudtára adták Jóábnak, mondván: Eljött Abnér, Nér fia, a királyhoz, elbocsátotta és elment békében.
೨೩ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
24 Erre bement Jóáb a királyhoz és mondta: Mit cselekedtél? Íme eljött hozzád Abnér, minek is bocsátottad el és el is ment?
೨೪“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
25 Ismered Abnért, Nér fiát, hogy téged rászedni jött és hogy megtudja mentedet és jöttedet és hogy megtudjon mindent, amit cselekszel.
೨೫ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
26 Erre kiment Jóáb Dávidtól, követeket küldött Abnér után és visszahozták őt a Szíra-kútjától; Dávid pedig nem tudta.
೨೬ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
27 Midőn visszajött Abnér Chebrónba, félrevezette őt Jóáb a kapuba, hogy vele titokban beszéljen; ott ágyékba ütötte őt, hogy meghalt, Aszáélnek, testvérének véreért.
೨೭ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
28 Meghallotta Dávid ezután és mondta: ártatlan vagyok én meg királyságom az Örökkévalónál mindörökre Abnér, Nér fia elontott vérében.
೨೮ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
29 Szálljon Jóáb fejére és atyjának egész házára, és Jóáb házából ne szűnjön meg a folyós, bélpoklos, mankót tartó, kard által eleső és kenyér nélkül szűkölködő!
೨೯ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
30 Jóáb pedig és testvére Abísáj meggyilkolták Abnért, mivel hogy megölte testvérüket, Aszáélt Gibeónban, a háborúban.
೩೦ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
31 És szólt Dávid Jóábhoz és az egész néphez, mely nála volt: Szaggassátok meg ruháitokat, kössetek fel zsákokat és tartsatok gyászt Abnér előtt, Dávid király pedig a koporsó után ment.
೩೧ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
32 Eltemették Abnért Chebrónban; ekkor fölemelte a király hangját és sírt. Abnér sírja mellett és az egész nép is sírt.
೩೨ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
33 Gyászdalt mondott a király Abnér fölött és szólt: Hát amint aljas hal meg, úgy kellett meghalnia Abnérnek!
೩೩ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
34 Kezeid megkötözve nem voltak, lábaidat béklyóba nem vetették; mint ahogy elesnek a gazság fiai, úgy estél el! És tovább sírt fölötte az egész nép.
೩೪ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
35 És eljött az egész nép, hogy még nappal kenyeret nyújtsanak Dávidnak, de megesküdött Dávid, mondván: Így tegyen velem Isten és így folytassa – bizony naplemente előtt nem ízlelek kenyeret vagy bármit.
೩೫ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
36 Az egész nép megértette, és jónak tetszett szemeikben; egészen úgy, amint tett a király, jónak tetszett az egész nép szemeiben.
೩೬ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
37 És megtudta az egész nép meg egész Izrael ama napon, hogy nem a királytól volt az, hogy megölték Abnért, Nér fiát.
೩೭ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
38 És szólt a király a szolgáihoz Nem tudjátok-e, hogy vezér és nagy ember esett el a napon Izraelben!
೩೮ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
39 Én pedig ma gyönge vagyok, bár fölkenve királynak, de ezek az emberek, Czerúja fiai keményebbek nálam; fizessen meg az Örökkévaló annak, ki a rosszat teszi, rosszasága szerint.
೩೯ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.