< 1 Mózes 38 >
1 És történt abban az időben, elment Jehúda a testvéreitől és betért egy adullámi férfiúhoz, neve Chíra.
೧ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
2 És meglátta ott Jehúda egy Súá nevű kanaáni férfiúnak a, leányát, elvette és bement hozzá.
೨ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು
3 És viselős lett, és szült egy fiút, és elnevezte Érnek.
೩ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು.
4 És ismét viselős lett és szült egy fiút és elnevezte Ónánnak.
೪ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು.
5 És ismét szült egy fiút és elnevezte Sélának; ő pedig Kezíbben volt, midőn szülte azt.
೫ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.
6 És vett Jehúda feleséget Érnek, az elsőszülöttjének, neve Támár.
೬ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.
7 De Ér, Jehúda elsőszülöttje rossz volt Isten szemeiben, és megölte az Örökkévaló.
೭ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.
8 És mondta Jehúda Ónánnak: Menj be testvéred feleségéhez és sógorképen vedd el és támassz magzatot testvérednek.
೮ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
9 És tudta Ónán, hogy nem az övé lesz a magzat és volt, ha bement testvére feleségéhez, a földre veszítette, hogy ne adjon magzatot testvérének.
೯ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.
10 És rossznak tetszett az Örökkévaló szemeiben, a mit tett és megölte őt is.
೧೦ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
11 Akkor mondta Jehúda Támárnak, a menyének: Maradj özvegyen atyád házában, a míg nagy lesz Séla fiam; mert azt gondolta, hátha meghal ő is, mint testvérei. És elment Támár és maradt atyja házában.
೧೧ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
12 Sok idő múlt el és meghalt Súá leánya, Jehúda felesége; és megvigasztalódott Jehúda és fölment juhainak nyírőihez, ő és Chíra, az ő adullámi barátja, Timnába.
೧೨ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.
13 És tudtára adták Támárnak, mondván: Íme, ipad fölmegy Timnába juhait nyírni.
೧೩ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
14 És letette özvegysége ruháit magáról, elfödte magát fátyollal és beburkolózott és leült Énájim bejáratán, mely a Timnába való úton van, mert látta, hogy nagy lett Séla és ő nem adatott hozzá feleségül.
೧೪ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
15 És meglátta őt Jehúda és paráznának gondolta, mert elfödte arczát.
೧೫ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
16 És letért hozzá az útra és mondta: Nosza, kérlek, hadd menjek be hozzád – mert nem tudta, hogy a menye. Mondta: Mit adsz nekem, ha bejössz hozzám?
೧೬ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.
17 És mondta: Én küldök majd egy kecskegödölyét a nyájból. Mondta: Ha adsz zálogot, a míg elküldöd.
೧೭ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,
18 És mondta: Mi az a zálog, a mit adjak neked? Mondta: Pecséted, zsinórod és a botod, mely kezedben van. És odaadta neki, bement hozzá, és viselős lett tőle.
೧೮ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
19 És fölkelt, elment és letette fátyolát magáról, és felöltötte özvegysége ruháit.
೧೯ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
20 És elküldte Jehúda a kecskegödölyét az ő adullámi barátja által, hogy átvegye a zálogot az asszony kezéből, de nem találta.
೨೦ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.
21 És megkérdezte a helysége embereit, mondván: Hol van a szentelt nő, a ki Énájimban az út mellett van? Mondták: Nem volt erre szentelt nő.
೨೧ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
22 És visszatért Jehúdához és mondta: Nem találtam meg őt, és a helység emberei is mondták: Nem volt erre szentelt nő.
೨೨ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.
23 És mondta Jehúda: Tartsa meg magának, nehogy csúffá legyünk; íme, elküldtem e gödölyét, te pedig nem találtad meg őt.
೨೩ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.
24 És történt mintegy három hónap múlva, tudtára adták Jehúdának, mondván: Paráználkodott Támár, a menyed, és íme, viselős is paráznaságból. És mondta Jehúda: Vezessétek ki, hogy elégettessék.
೨೪ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
25 Éppen kivezették, ekkor küldött ipjához, mondván: Attól a férfitól, a kié ezek, vagyok én viselős; mondta ugyanis: Ismerd csak fel, kié ez a pecsét, a zsinór és a bot.
೨೫ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.
26 És fölismerte Jehúda és mondta: Igazságosabb ő nálamnál, mivelhogy nem adtam őt Séla fiamhoz. És többé nem ismerte meg őt.
೨೬ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
27 És volt szülésekor, íme, ikrek a méhében.
೨೭ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.
28 És volt, midőn szült, kinyúlt az egyiknek keze; akkor vett a bába és rákötött kezére piros fonalat, mondván: Ez jött ki először.
೨೮ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
29 S történt, a mint visszahúzta kezét, íme kijött testvére, és mondta: Mily rést törtél magadnak! És így nevezték őt el: Pérecz.
೨೯ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು.
30 Azután kijött testvére, a kinek kezén volt a piros fonal, és így nevezték el: Zérach.
೩೦ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.