< Ézsaiás 18 >
1 Oh, csattogó szárnyak országa, mely Kús folyóin túl van;
೧ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,
2 mely követeket küld a tengeren, gyékény hajókon a víz színén! Menjetek, gyors követek, a termetes és fényes nemzethez, a néphez, mely félelmetes, amióta van, a pusztítás és eltiprás nemzetéhez, melynek országát folyók hasítják.
೨ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
3 Mind a világ lakói és a földnek lakosai, amint zászlót emelnek a hegyeken, majd látjátok és amint fújják a harsonát, meghalljátok.
೩ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
4 Mert így szólt az Örökkévaló hozzám: Hadd legyek nyugodt és hadd nézzem helyemen, mint a fényes forróság a napsugárban, mint harmatos felhő az aratás forróságában.
೪ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
5 Mert aratás előtt, midőn vége van a virágzásnak és érő bogyóvá lesz a virág, levágja a gallyakat a kacorokkal és az indákat eltávolítja, lemetszi.
೫ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.
6 Ott hagyatnak egyaránt a hegyek madarának és a föld vadjának; nyaralni fog rajta a madár és mind a föld vadja rajta fog telelni.
೬ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.
7 Abban az időben ajándékot visznek az Örökkévalónak, a seregek urának, a termetes és fényes néptől, azon néptől, mely félelmetes, amióta van, a pusztítás és eltiprás nemzetétől, melynek országát folyók hasítják, az Örökkévaló a seregek ura nevének helyére, Ción hegyére.
೭ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.