< Ézsaiás 20 >
1 Amely évben Tartán Asdód alá ment, amikor küldte őt Szargón, Assúr királya és harcolt Asdód ellen és bevette azt –
೧ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.
2 abban az időben szólt az Örökkévaló Jesájáhú, Ámócz fia által, mondván: Menj és oldd le a zsákot derekadról és sarudat húzd le lábadról. És így cselekedett, járván meztelenül és mezítláb.
೨ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.
3 És szólt az Örökkévaló: Amint járt Jesájáhú szolgám meztelenül és mezítláb, három évre jelül és csodául Egyiptom felől és Kús felől,
೩ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”
4 úgy fogja vezetni Assúr királya Egyiptom foglyait és Kús számkivetettjeit, ifjakat és véneket, meztelenül és mezítláb, megmeztelenített alféllel, Egyiptom szégyenére.
೪ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
5 És megrettennek és megszégyenülnek Kús miatt, mely felé tekintettek és Egyiptom miatt, amellyel dicsekedtek.
೫ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
6 És mondja a partvidék lakója azon napon: Íme így járt, aki felé tekintettünk, ahova futottunk segítségért, hogy Assúr királyától megszabaduljunk, hát miképpen meneküljünk meg mi?
೬ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.