< Birák 14 >
1 Lement Sámson Timnába, és egy nőt látott Timnában a filiszteusok leányai közül.
೧ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು
2 Fölment, tudtára adta atyjának és anyjának és mondta: Egy nőt láttam Timnában a filiszteusok leányai közül; most hát vegyétek őt nekem feleségül.
೨ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
3 Mondta neki atyja meg anyja: Vajon nincs-e nő a testvéreid leányai között s egész népem közt, hogy te elmégy feleséget venni a körülmetéletlen filiszteusok közül? És szólt Sámson az atyjához: Őt vedd nékem, mert ő tetszett meg szemeimben.
೩ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
4 Atyja és anyja pedig nem tudták, hogy az Örökkévalótól van ez, hogy alkalmat keres a filiszteusokon – abban az időben ugyanis a filiszteusok uralkodtak Izraél fölött.
೪ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
5 Erre lement Sámson az atyjával és anyjával Timnába; s midőn eljutottak a timnai szőlőkig, íme egy fiatal oroszlán ordítva jő elejébe.
೫ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
6 Akkor reászökött az Örökkévaló szelleme, és szétszakította, a mint szétszakítanak egy gödölyét és semmi nem volt a kezében. De nem mondta el atyjának és anyjának azt, a mit cselekedett.
೬ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
7 Lement és beszélt a nővel és megtetszett Sámson szemeiben.
೭ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
8 Midőn visszajött idő múlva, hogy elvegye, letért, hogy megnézze az oroszlán hulláját, és íme, egy méhraj az oroszlán testében meg méz.
೮ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,
9 Kiszedte a tenyerére és elmenvén, mentében evett; ekkor odament atyjához és anyjához, adott nekik is és ettek; de nem mondta meg nekik, hogy az oroszlán testéből szedte ki a mézet.
೯ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
10 Erre lement az atyja a nőhöz; és tartott Sámson ott lakomát, mert így tesznek az ifjak.
೧೦ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
11 És volt, midőn őt látták, vettek harmincz társat, és ott voltak vele.
೧೧ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.
12 S mondta nekik Sámson: Hadd adjak föl nektek egy rejtvényt: ha meg fogjátok azt nekem mondani a lakoma hét napja alatt és kitaláljátok, akkor adok nektek harmincz gyolcs inget és harmincz váltó ruhát.
೧೨ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
13 De ha nem tudjátok nekem megmondani, akkor ti adtok nekem harmincz gyolcs inget és harmincz váltó ruhát. Mondták neki: Add fel rejtvényedet, hadd halljuk.
೧೩ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
14 Erre mondta nekik: Evőtől származott étel, erőstől származott édes. De nem tudták megmondani a rejtvényt három napig.
೧೪ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
15 És volt a hetedik napon, mondták Sámson feleségének: Beszéld rá férjedet, hogy mondja meg nekünk a rejtvényt, nehogy elégessünk téged meg atyád házát tűzben. Vajon, hogy kifosszatok minket, hívtatok bennünket ide?
೧೫ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
16 Ekkor sírt Sámson felesége őelőtte és mondta: Te csak gyűlölsz engem s nem szeretsz, a rejtvényt föladtad népem fiainak és nekem nem mondtad meg. Mondta neki: Lám, atyámnak és anyámnak nem mondtam meg és neked megmondjam?
೧೬ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
17 És sírt előtte azon hét napig, melyeken tartott lakomájuk; és volt a hetedik napon, megmondta neki, mert faggatta őt. Erre megmondta a rejtvényt népe fiainak.
೧೭ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
18 És mondták neki a város emberei a hetedik napon, mielőtt lement a nap: Mi édesb a méznél, mi erősb az oroszlánnál! Mondta nekik: Ha nem szántotok üszőmmel, ki nem találjátok rejtvényemet.
೧೮ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
19 Ekkor reá szökött az Örökkévaló szelleme, lement Askelónba, levert közülök harmincz férfiút, elvette öltözeteiket és odaadta a váltó ruhákat a rejtvény megmondóinak. Föllobbant a haragja és fölment atyja házába.
೧೯ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
20 Ekkor lett Sámson felesége azon társáé, a kit társul vett magának.
೨೦ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.