< Ezékiel 11 >
1 És fölemelt engem a lélek, és bevive az Úr házának keleti kapujához, a mely néz keletnek, és ímé, a kapu bejáratánál huszonöt férfi vala, kik között látám Jaazanját, Azzur fiát, és Pelatjáhut, Benájáhu fiát, a nép fejedelmeit.
೧ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
2 És mondá nékem: Embernek fia! ezek a férfiak, a kik gonoszt eszelnek ki és rossz tanácsot adnak ebben a városban,
೨ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.
3 Mondván: Nem egyhamar fogunk házakat építeni; ez a város a fazék, mi pedig a hús.
೩ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.
4 Azért prófétálj ellenök; prófétálj, embernek fia!
೪ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.
5 És esék reám az Úr lelke, és mondá nékem: Mondjad, így szól az Úr: Így szólottatok, Izráel háza! és a mi lelketekben készül, én tudom.
೫ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
6 Sokakat öltetek meg ebben a városban, és utczáit megtöltöttétek megölettekkel.
೬ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
7 Ezért, így szól az Úr Isten: Megöletteitek, kiket a város közepére vetettetek, ezek a hús, a város pedig a fazék, és titeket kivisznek belőle.
೭“ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
8 Fegyvertől féltetek, fegyvert hozok reátok, azt mondja az Úr Isten.
೮ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.
9 És kiviszlek titeket belőle, és adlak titeket idegenek kezébe, és tartok ítéletet fölöttetek.
೯“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.
10 Fegyver miatt hulljatok el, Izráel határán ítéllek meg titeket, és megtudjátok, hogy én vagyok az Úr.
೧೦ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
11 E város ne legyen fazekatok, hogy ti benne hús legyetek, Izráel határán ítéllek el titeket.
೧೧ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.
12 És megtudjátok, hogy én vagyok az Úr, mert az én végzéseimben nem jártatok, és rendeléseimet nem cselekedtétek, hanem a pogányok módja szerint cselekedtetek, a kik körültetek vannak.
೧೨“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
13 És lőn, mikor prófétáltam, Pelatjáhu, Benájáhu fia meghala, én pedig orczámra esém és kiálték nagy felszóval, és mondék: Ah, ah, Uram Isten, te véget vetsz Izráel maradékának!
೧೩ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.
14 És lőn az Úrnak szava én hozzám, mondván:
೧೪ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
15 Embernek fia! a te atyádfiai, atyádfiai, a te rokonaid és Izráel egész háza együtt azok, a kikről Jeruzsálem lakói ezt mondják: távozzatok el az Úrtól, nékünk adatott ez a föld örökségül.
೧೫“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
16 Ezokáért mondjad: így szól az Úr Isten: Mivelhogy távol vetettem őket a pogányok közé, és szétszórtam őket a tartományokba, tehát én leszek nékik templomul rövid időre a tartományokban, a melyekbe mentek.
೧೬“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’
17 Ennekokáért mondjad: Így szól az Úr Isten: Egybegyűjtelek titeket a népek közül és együvé hozlak titeket a tartományokból, a melyekben szétszórattatok, és adom néktek Izráel földjét.
೧೭“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
18 És bemennek oda és eltávolítják minden ő fertelmességeit és minden útálatosságait ő belőle.
೧೮ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.
19 És adok nékik egy szívet, és új lelket adok belétek, és eltávolítom a kőszívet az ő testökből, és adok nékik hússzívet;
೧೯“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
20 Hogy az én végzéseimben járjanak és rendeléseimet megőrizzék és cselekedjék azokat, és legyenek nékem népem és én leszek nékik Istenök.
೨೦ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
21 De a kiknek szívök az ő fertelmességeik és útálatosságaik szíve szerint jár, azoknak útját fejökhöz verem, mondja az Úr Isten.
೨೧ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.
22 És fölemelék a Kérubok szárnyaikat s a kerekek mellettök, és Izráel Istenének dicsősége rajtok felül vala.
೨೨ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
23 És felszálla az Úrnak dicsősége a város közepéből, és álla a hegyre, mely a várostól keletre van.
೨೩ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.
24 A lélek pedig felvőn engem, és vive Káldeába a foglyokhoz látásban az Isten lelke által, és felszálla előlem a látás, a melyet láttam.
೨೪ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
25 És elbeszélém a foglyoknak az Úrnak minden beszédét, a melyet nékem megjelentetett.
೨೫ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.