< Ézsaiás 63 >
1 Ki ez, ki jő Edomból, veres ruhákban Boczrából, a ki ékes öltözetében, ereje sokaságában büszke? Én, a ki igazságban szólok, elégséges vagyok a megtartásra.
೧ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
2 Miért veres öltözeted, és ruháid, mint a bornyomó ruhái?
೨ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
3 A sajtót egyedül tapostam, és a népek közül nem volt velem senki, és megtapodtam őket búsulásomban, és széttapostam őket haragomban: így fecscsent vérök ruháimra, és egész öltözetemet bekevertem.
೩ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
4 Mert bosszúállás napja volt szívemben, és megváltottaim esztendeje eljött.
೪ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
5 Körültekinték és nem vala segítő, s álmélkodám és nem vala gyámolító, és segített nékem karom, és haragom gyámolított engem!
೫ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
6 És megtapodtam népeket búsulásomban, és megrészegítem őket haragomban, és ontám a földre véröket!
೬ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
7 Az Úrnak kegyelmességeiről emlékezem, az Úr dicséreteiről mind a szerint, a mit az Úr velünk cselekedett; az Izráel házához való sok jóságáról, a melyet velök cselekedett irgalma és kegyelmének sokasága szerint.
೭ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
8 És ő mondá: Bizony az én népem ők, fiak, a kik nem hazudnak; és lőn nékik megtartójok.
೮“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
9 Minden szenvedésöket Ő is szenvedte, és orczájának angyala megszabadítá őket, szerelmében és kegyelmében váltotta Ő meg őket, fölvette és hordozá őket a régi idők minden napjaiban.
೯ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
10 Ők pedig engedetlenek voltak és megszomoríták szentségének lelkét, és ő ellenségükké lőn, hadakozott ellenök.
೧೦ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.
11 S megemlékezék népe a Mózes régi napjairól: hol van, a ki őket kihozá a tengerből nyájának pásztorával? hol van, a ki belé adá az ő szentséges lelkét?
೧೧ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?
12 Ki Mózes jobbján járatá dicsőségének karját, a ki a vizeket ketté választá előttök, hogy magának örök nevet szerezzen?
೧೨ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
13 Ki járatá őket mélységekben, mint a lovat a síkon, és meg nem botlottanak!
೧೩ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
14 Mint a barmot, a mely völgybe száll alá, nyugodalomba vitte őket az Úr lelke: így vezérletted népedet, hogy magadnak dicső nevet szerezz!
೧೪ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
15 Tekints alá az égből, és nézz le szentséged és dicsőséged hajlékából! Hol van buzgó szerelmed és hatalmad? Szívednek dobogása és irgalmad megtartóztatják magokat én tőlem!
೧೫ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
16 Hiszen Te vagy Atyánk, hiszen Ábrahám nem tud minket, és Izráel nem ismer minket, Te, Uram, vagy a mi Atyánk, megváltónk, ez neved öröktől fogva.
೧೬ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
17 Miért engedél eltévelyedni minket útaidról, oh Uram! miért keményítéd meg szívünket, hogy ne féljünk tégedet? Térj meg szolgáidért, örökséged nemzetségeiért!
೧೭ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
18 Kevés ideig bírta szentségednek népe földét, ellenségink megtapodták szent helyedet.
೧೮ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
19 Olyanok lettünk, mint a kiken eleitől fogva nem uralkodtál, a kik felett nem neveztetett neved.
೧೯ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.