< Lukács 24 >

1 A hétnek első napján pedig kora reggel a sírhoz menének, vivén az elkészített fűszerszámokat, és némely más asszonyok is velök.
ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
2 És a követ a sírról elhengerítve találák.
ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು,
3 És mikor bementek, nem találák az Úr Jézus testét.
ಒಳಕ್ಕೆ ಹೋಗಿ ನೋಡಿದಾಗ ಯೇಸು ಕರ್ತನ ದೇಹವು ಅಲ್ಲಿ ಕಾಣಲಿಲ್ಲ.
4 És lőn, hogy mikor ők e felett megdöbbenének, ímé két férfiú álla melléjök fényes öltözetben:
ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.
5 És mikor ők megrémülvén a földre hajták orczájokat, azok mondának nékik: Mit keresitek a holtak között az élőt?
ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
6 Nincs itt, hanem feltámadott: emlékezzetek rá, mint beszélt néktek, még mikor Galileában volt,
ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.
7 Mondván: Szükség az ember Fiának átadatni a bűnös emberek kezébe, és megfeszíttetni, és harmadnapon feltámadni.
8 Megemlékezének azért az ő szavairól.
ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು,
9 És visszatérvén a sírtól, elmondák mindezeket a tizenegynek, és mind a többieknek.
ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
10 Valának pedig Mária Magdaléna, és Johanna, és a Jakab anyja Mária, és egyéb asszonyok ő velök, a kik ezeket mondák az apostoloknak.
೧೦ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.
11 De az ő szavuk csak üres beszédnek látszék azok előtt; és nem hivének nékik.
೧೧ಅವರು ನಂಬಲಿಲ್ಲ ಏಕೆಂದರೆ ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.
12 Péter azonban felkelvén elfuta a sírhoz, és behajolván látá, hogy csak a lepedők vannak ott; és elméne, magában csodálkozván e dolgon.
೧೨ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.
13 És ímé azok közül ketten mennek vala ugyanazon a napon egy faluba, mely Jeruzsálemtől hatvan futamatnyira vala, melynek neve vala Emmaus.
೧೩ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,
14 És beszélgetének magok közt mindazokról, a mik történtek.
೧೪ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.
15 És lőn, hogy a mint beszélgetének és egymástól kérdezősködének, maga Jézus hozzájok menvén, velök együtt megy vala az úton.
೧೫ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.
16 De az ő szemeik visszatartóztatának, hogy őt meg ne ismerjék.
೧೬ಅವರ ಕಣ್ಣುಕಟ್ಟಿದಂತೆ ಇದುದ್ದರಿಂದ ಅವರು ಆತನ ಗುರುತನ್ನು ಹಿಡಿಯಲಿಲ್ಲ.
17 Monda pedig nékik: Micsoda szavak ezek, a melyeket egymással váltotok jártotokban? és miért vagytok szomorú ábrázattal?
೧೭ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.
18 Felelvén pedig az egyik, kinek neve Kleofás, monda néki: Csak te vagy-é jövevény Jeruzsálemben, és nem tudod minémű dolgok lettek abban e napokon?
೧೮ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,
19 És monda nékik: Micsoda dolgok? Azok pedig mondának néki: A melyek esének a Názáretbeli Jézuson, ki próféta vala, cselekedetben és beszédben hatalmas Isten előtt és az egész nép előtt:
೧೯ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
20 És mimódon adák őt a főpapok és a mi főembereink halálos ítéletre, és megfeszíték őt.
೨೦ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.
21 Pedig mi azt reméltük, hogy ő az, a ki meg fogja váltani az Izráelt. De mindezek mellett ma van harmadnapja, hogy ezek lettek.
೨೧ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
22 Hanem valami közülünk való asszonyok is megdöbbentettek minket, kik jó reggel a sírnál valának;
೨೨ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.
23 És mikor nem találták az ő testét, haza jöttek, mondván, hogy angyalok jelenését is látták, kik azt mondják, hogy ő él.
೨೩
24 És azok közül némelyek, kik velünk valának, elmenének a sírhoz, és úgy találák, a mint az asszonyok is mondták; őt pedig nem látták.
೨೪ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು.
25 És ő monda nékik: Óh balgatagok és rest szívűek mindazoknak elhivésére, a miket a próféták szóltak!
೨೫ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,
26 Avagy nem ezeket kellett-é szenvedni a Krisztusnak, és úgy menni be az ő dicsőségébe?
೨೬ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.
27 És elkezdvén Mózestől és minden prófétáktól fogva, magyarázza vala nékik minden írásokban, a mik ő felőle megirattak.
೨೭ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
28 Elközelítének pedig a faluhoz, a melybe mennek vala; és ő úgy tőn, mintha tovább menne.
೨೮ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.
29 De kényszeríték őt, mondván: Maradj velünk, mert immár beestvéledik, és a nap lehanyatlott! Beméne azért, hogy velök maradjon.
೨೯ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.
30 És lőn, mikor leült velök, a kenyeret vévén, megáldá, és megszegvén, nékik adá.
೩೦ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
31 És megnyilatkozának az ő szemeik, és megismerék őt; de ő eltünt előlük.
೩೧ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.
32 És mondának egymásnak: Avagy nem gerjedezett-é a mi szívünk mi bennünk, mikor nékünk szóla az úton, és mikor magyarázá nékünk az írásokat?
೩೨ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
33 És felkelvén azon órában, visszatérének Jeruzsálembe, és egybegyűlve találák a tizenegyet és azokat, a kik velök valának.
೩೩ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು.
34 Kik ezt mondják vala: Feltámadott az Úr bizonynyal, és megjelent Simonnak!
೩೪“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.
35 És ezek is elbeszélék, mi történt az úton, és miképen ismerték meg ők a kenyér megszegéséről.
೩೫ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.
36 És mikor ezeket beszélék, megálla maga Jézus ő közöttök, és monda nékik: Békesség néktek!
೩೬ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.
37 Megrémülvén pedig és félvén, azt hivék, hogy valami lelket látnak.
೩೭ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು.
38 És monda nékik: Miért háborodtatok meg, és miért támadnak szívetekben okoskodások?
೩೮ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?
39 Lássátok meg az én kezeimet és lábaimat, hogy én magam vagyok: tapogassatok meg engem, és lássatok; mert a léleknek nincs húsa és csontja, a mint látjátok, hogy nékem van!
೩೯ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.
40 És ezeket mondván, megmutatá nékik kezeit és lábait.
೪೦ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.
41 Mikor pedig még nem hívék az öröm miatt, és csodálkozának, monda nékik: Van-é itt valami enni valótok?
೪೧ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,
42 Ők pedig adának néki egy darab sült halat, és valami lépesmézet,
೪೨ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.
43 Melyeket elvőn, és előttök evék.
೪೩ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು.
44 És monda nékik: Ezek azok a beszédek, melyeket szóltam néktek, mikor még veletek valék, hogy szükség beteljesedni mindazoknak, a mik megirattak a Mózes törvényében, a prófétáknál és a zsoltárokban én felőlem.
೪೪ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.
45 Akkor megnyilatkoztatá az ő elméjöket, hogy értsék az írásokat.
೪೫ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.
46 És monda nékik: Így van megírva, és így kellett szenvedni a Krisztusnak, és feltámadni a halálból harmadnapon:
೪೬ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
47 És prédikáltatni az ő nevében a megtérésnek és a bűnök bocsánatának minden pogányok között, Jeruzsálemtől elkezdve.
೪೭ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
48 Ti vagytok pedig ezeknek bizonyságai.
೪೮ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.
49 És ímé én elküldöm ti reátok az én Atyámnak ígéretét; ti pedig maradjatok Jeruzsálem városában, mígnem felruháztattok mennyei erővel.
೪೯ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನುನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.
50 Kivivé pedig őket Bethániáig; és felemelvén az ő kezeit, megáldá őket.
೫೦ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.
51 És lőn, hogy míg áldá őket, tőlök elszakadván, felviteték a mennybe.
೫೧ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
52 Ők pedig imádván őt, visszatérének nagy örömmel Jeruzsálembe;
೫೨ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,
53 És mindenkor a templomban valának, dícsérvén és áldván az Istent. Ámen.
೫೩ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

< Lukács 24 >