< Példabeszédek 13 >

1 A bölcs fiú enged atyja intésének; de a csúfoló semmi dorgálásnak helyt nem ád.
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
2 A férfi az ő szájának gyümölcséből él jóval; a hitetlenek lelke pedig bosszúságtétellel.
ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
3 A ki megőrzi az ő száját, megtartja önmagát; a ki felnyitja száját, romlása az annak.
ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
4 Kivánsággal felindul, de hiába, a restnek lelke; a gyorsak lelke pedig megkövéredik.
ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
5 A hamis dolgot gyűlöli az igaz; az istentelen pedig gyűlölségessé tesz és megszégyenít.
ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
6 Az igazság megőrzi azt, a ki útjában tökéletes; az istentelenség pedig elveszíti a bűnöst.
ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
7 Van, a ki hányja gazdagságát, holott semmije sincsen; viszont tetteti magát szegénynek, holott sok marhája van.
ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
8 Az ember életének váltsága lehet az ő gazdagsága; a szegény pedig nem hallja a fenyegetést.
ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
9 Az igazak világossága vígassággal ég; de az istenteleneknek szövétneke kialszik.
ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
10 Csak háborúság lesz a kevélységből: azoknál pedig, a kik a tanácsot beveszik, bölcseség van.
೧೦ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11 A hiábavalóságból keresett marha megkisebbül; a ki pedig kezével gyűjt, megőregbíti azt.
೧೧ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
12 A halogatott reménység beteggé teszi a szívet; de a megadatott kivánság életnek fája.
೧೨ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
13 Az igének megútálója megrontatik; a ki pedig féli a parancsolatot, jutalmát veszi.
೧೩ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
14 A bölcsnek tanítása életnek kútfeje, a halál tőrének eltávoztatására.
೧೪ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
15 Jó értelem ád kedvességet; a hitetleneknek pedig útja kemény.
೧೫ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
16 Minden eszes cselekszik bölcseséggel; a bolond pedig kijelenti az ő bolondságát.
೧೬ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
17 Az istentelen követ bajba esik; a hívséges követ pedig gyógyulás.
೧೭ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
18 Szegénység és gyalázat lesz azon, a ki a fenyítéktől magát elvonja; a ki pedig megfogadja a dorgálást, tiszteltetik.
೧೮ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
19 A megnyert kivánság gyönyörűséges a léleknek, és útálatosság a bolondoknak eltávozniok a gonosztól.
೧೯ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
20 A ki jár a bölcsekkel, bölcs lesz; a ki pedig magát társul adja a bolondokhoz, megromol.
೨೦ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
21 A bűnösöket követi a gonosz; az igazaknak pedig jóval fizet Isten.
೨೧ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
22 A jó örökséget hágy unokáinak; a bűnösnek marhái pedig eltétetnek az igaz számára.
೨೨ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
23 Bő étele lesz a szegényeknek az új törésen; de van olyan, a ki igazságtalansága által vész el.
೨೩ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
24 A ki megtartóztatja az ő vesszejét, gyűlöli az ő fiát; a ki pedig szereti azt, megkeresi őt fenyítékkel.
೨೪ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
25 Az igaz eszik az ő kivánságának megelégedéséig; az istentelenek hasa pedig szűkölködik.
೨೫ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.

< Példabeszédek 13 >