< Zakariás 6 >
1 Majd megfordulék és felemelém szemeimet, és látám, hogy ímé négy szekér jön vala ki két hegy közül, és azok a hegyek ércz-hegyek.
೧ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.
2 Az első szekérben veres lovak, a második szekérben fekete lovak;
೨ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;
3 És a harmadik szekérben fehér lovak; a negyedik szekérben pedig tarka lovak, erősek.
೩ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.
4 És megszólalék, és mondám az angyalnak, a ki beszél vala velem: Mik ezek, Uram?
೪ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು.
5 Az angyal felele, és mondá nékem: Ezek az égnek négy szele, jőnek az egész föld Ura mellett való szolgálatukból.
೫ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.
6 A melyben a fekete lovak vannak, észak földére mennek, és a fehérek mennek utánok, a tarkák pedig a dél földére mennek;
೬ಅನಂತರ ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮ ದೇಶಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.
7 Az erősek is mennek és kivánják eljárni a földet. És mondá: Menjetek, járjátok el a földet; és eljárák a földet.
೭ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.
8 Majd híva engem, és beszéle velem, mondván: Lásd! Az észak földére menők lecsendesíték lelkemet északnak földén.
೮ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.
9 És szóla az Úr hozzám, mondván:
೯ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
10 Végy a számkivetésből valóktól: Heldaitól, Tóbiástól és Jedajától; és menj be azon a napon, menj be Jósiának, a Sefániás fiának házába, a kik Babilonból jöttenek,
೧೦ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,
11 Végy ugyanis ezüstöt és aranyat, és csinálj koronákat, és tedd Jósuának, a Jehosadák fiának, a főpapnak fejére!
೧೧ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,
12 És szólj néki, mondván: Ezt mondja a Seregeknek Ura, mondván: Ímé, egy férfiú, a neve Csemete, mert csemete támad belőle, és megépíti az Úrnak templomát!
೧೨ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.
13 Mert ő fogja megépíteni az Úrnak templomát, és nagy lesz az ő dicsősége, és ülni és uralkodni fog az ő székében, és pap is lesz az ő székében, és békesség tanácsa lesz kettőjük között.
೧೩ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.
14 És a koronák legyenek Hélemnek, Tóbiásnak, Jedajának és Hénnek, a Sefániás fiának emlékjelei az Úr templomában.
೧೪“‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.
15 És a messzelakók eljőnek és építenek az Úr templomában, és megtudjátok, hogy a Seregeknek Ura küldött el engem hozzátok. Így lesz, ha hallgattok az Úrnak, a ti Isteneteknek szavára!
೧೫ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”