< Izikiel 13 >
1 Okwu Onyenwe anyị ruru m ntị, sị,
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2 “Nwa nke mmadụ, buo amụma megide ndị amụma nke Izrel ndị na-ebu amụma ugbu a, gwa ndị amụma ahụ na-ekwu ihe sitere ha nʼuche: ‘Nụrụnụ okwu nke Onyenwe anyị.
“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;
3 Otu a ka Onye kachasị ihe niile elu, bụ Onyenwe anyị kwuru, Ahụhụ ga-adịrị ndị amụma nzuzu ndị na-agbaso mmụọ nke onwe ha, ndị ọ dịghị ihe ha na-ahụ.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!
4 Gị Izrel, lee, ndị amụma gị niile dị ka nkịta ọhịa bi na mkpọmkpọ ebe.
ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.
5 Unu arịgobeghị na oghere jupụtara na mgbidi maọbụ rụzie mgbidi aja ndị ahụ maka nchekwa ndị Izrel ka o nwee ike kwudosie ike nʼụbọchị agha nke Onyenwe anyị.
ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.
6 Ọhụ ha bụ ụgha, otu a, ịjụ ase ha bụkwa ụgha, ha na-asị, “Onyenwe anyị kwupụtara,” ebe Onyenwe anyị ezipụghị ha, ha na-agakwa nʼihu na-atụ anya ka o mezuo okwu ha.
“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
7 Ọ bụghị ọhụ ụgha ka unu hụrụ, ọ bụghịkwa okwu ịjụ ase ụgha ka unu kwuru, mgbe unu na-asị, “Otu a ka Onyenwe anyị kwupụtara,” nʼagbanyeghị na mụ onwe m ekwughị okwu?
ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.
8 “‘Nʼihi ya, Onye kachasị ihe niile elu, bụ Onyenwe anyị sịrị, aga m ebibi unu nʼihi okwu ụgha na ọhụ ụgha unu niile. Edoola m onwe m imegide unu, otu a ka Onye kachasị ihe niile elu, bụ Onyenwe anyị kwubiri.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
9 Aka m ga-emegide ndị amụma niile ahụ bụ ndị na-ahụ ọhụ ụgha, na-agbakwa afa ụgha. Ha a gaghị esonye na otu ọgbakọ ndị m maọbụ bụrụ ndị agụnyekọrọ nʼakwụkwọ ndekọta aha ụlọ nke Izrel, ha agaghị abakwa nʼala ndị Izrel. Mgbe ahụ unu ga-amata na mụ onwe m bụ Onye kachasị ihe niile elu, bụ Onyenwe anyị.
ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
10 “‘Nʼihi na ha eduhiela ndị m, mgbe ha na-asị, “Udo,” ebe udo na-adịghị, nʼihi na mgbe e wuru mgbidi na-esighị ike, ndị amụma ndị a jara ha mma, werekwa nzu techie ya.
“‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.
11 Ya mere, gwa ndị ahụ jiri nzu techie mgbidi ahụ na ọ ga-ada. Oke mmiri ozuzo nke ga-ezobiga oke ga-ezo, aga m ezitekwa mkpụrụ mmiri dị ukwuu nke ga-ada, na oke ifufe nke ga-akwada ya.
ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.
12 Mgbe mgbidi ahụ dara, ndị mmadụ ọ gaghị ajụ, “Olee ebe mgba ọcha ahụ ị ji techie ya dị?”
“ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?
13 “‘Ya mere, Otu a ka Onye kachasị ihe niile elu, bụ Onyenwe anyị kwuru, aga m eji oke ifufe nke ọnụma m, na oke mmiri ozuzo nke iwe m, ma oke akụmmiri nke oke iwe m mebie ya.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.
14 Aga m akwada mgbidi ahụ unu tere nzu, aga m emekwa ka ọ daruo ala nke ga-eme ka ahụ ntọala ya anya; ọ ga-adakwasịkwa unu, gwepịa unu. Mgbe ọ dara ọ ga-egbuchapụ unu niile; unu ga-amatakwa na mụ onwe m bụ Onyenwe anyị.
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.
15 Otu a ka m ga-esi gosipụta iwe m nʼebe mgbidi ahụ nọ, na nʼahụ ndị ahụ ji nzu techie ya. Aga m asị unu, “Mgbidi ahụ adịghịkwa, otu a ka ọ dịkwa ndị ahụ ji nzu techie ya,
ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ,
16 bụ ndị amụma Izrel ndị ahụ buru amụma nye Jerusalem, ndị hụkwara ya ọhụ udo mgbe udo na-adịghị, otu a ka Onye kachasị ihe niile elu, bụ Onyenwe anyị kwubiri.”’
ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”’
17 “Ma ugbu a, gị nwa nke mmadụ, chee ihu nʼebe ụmụada ndị unu nọ, ndị nke na-ebu amụma dị ka o si si ha nʼobi pụta. Buo amụma megide ha
“ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,
18 sị, ‘Otu a ka Onye kachasị ihe niile elu, bụ Onyenwe anyị na-ekwu, Ahụhụ dịrị ndị inyom na-adụnye ọgwụ mgbaasị na nkwoji aka ha na-emekwa akwa mgbokwasị nke ikpuchi isi maka ndị mmadụ dị iche iche, iji raata ha. Unu si aṅaa chee na unu ga-echebe ndụ unu mgbe unu buru ụzọ mee ka ndị m maa nʼọnya?
ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
19 Unu emeela ka m ghara ịdị nsọ nʼetiti ndị m, nʼihi mkpoju aka ọka balị na iberibe achịcha ole na ole. Nʼihi ya, unu emeela ka ha nwụọ bụ ndị na-ekwesighị ịnwụ anwụ. Unu edebekwala ha ndụ bụ ndị na-ekwesighị ịdị ndụ, site nʼokwu ụgha unu na-agwa ndị m, bụ ndị na-aṅa ntị nʼokwu ụgha.
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?
20 “‘Nʼihi nke a, Onye kachasị ihe niile elu, bụ Onyenwe anyị na-ekwu, ana m emegide ọgwụ mgbaasị niile nke unu ji achụ nta mkpụrụobi ndị m dịka nnụnụ. Aga m adọwapụ ha site nʼaka unu, napụtakwa ndị m, bụ ndị unu ji nʼọnya dị ka nnụnụ e tinyere nʼụlọ akpara akpa.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.
21 Aga m adọwa akwa mgbokwasị ọgwụ unu, napụta ndị m site nʼaka unu. Ha agaghị amakwa nʼọnya nke ike unu ọzọ. Nʼụzọ dị otu a unu ga-amatakwa na mụ onwe m bụ Onyenwe anyị.
ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
22 Nʼihi na ụgha unu emeela ka obi ndị ezi omume daa mba, mgbe ọ na-abụghị uche m na ihe dị otu a ga-eme. Ma unu emeela ka obi ndị ajọ omume sie ike site na nkwa ogologo ndụ unu kwere ha, mee ka ha ghara isite nʼụzọ ọjọọ ha chegharịa ma zọpụta ndụ ha.
ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.
23 Nʼihi nke a, unu agaghị ahụkwa ọhụ ụgha ọzọ, maọbụ gbaa afa. M ga-anapụta ndị nke m site nʼaka unu. Mgbe ahụ unu ga-amata na mụ onwe m bụ Onyenwe anyị.’”
ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’”